ತೆಂಕನಿಡಿಯೂರು: ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ

ಉಡುಪಿ, ಫೆ.26: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸೋಮವಾರ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಅರುಣ್ ಗುಂಡ್ಮಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳು ನಡೆಸುವ ವಿವಿಧ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದರಲ್ಲದೇ, ಅವುಗಳನ್ನು ಆತ್ಮವಿಶ್ವಾಸದಿಂದ ಎದುರಿಸುವ ಬಗ್ಗೆ ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಉದ್ಯೋಗ ಮಾಹಿತಿ ಘಟಕದ ಸಂಚಾಲಕ ಉಮೇಶ್ ಪೈ ಸ್ವಾಗತಿಸಿ, ಕಾಲೇಜಿನ ಆಂತರಿಕ ಗುಣಮಟ್ಟ ಕೋಶದ ಸಂಯೋಜಕ ಡಾ.ಸುರೇಶ್ ರೈ ಕೆ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉದ್ಯೋಗ ಮಾಹಿತಿ ಘಟಕದ ಸಂಚಾಲಕ ಡಾ. ವೆಂಕಟೇಶ ಹೆಚ್.ಕೆ. ವಂದಿಸಿದರು. ಆಂಗ್ಲ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶರ್ಮಿಳಾ ಹಾರಾಡಿ ಕಾರ್ಯಕ್ರಮ ನಿರೂಪಿಸಿದರು.
Next Story





