Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಮಳೆನೀರು ಕೊಯ್ಲು, ತ್ಯಾಜ್ಯ ನಿರ್ವಹಣೆ...

‘ಮಳೆನೀರು ಕೊಯ್ಲು, ತ್ಯಾಜ್ಯ ನಿರ್ವಹಣೆ ಎಲ್ಲರಿಗೂ ಅನಿವಾರ್ಯ’

ವಾರ್ತಾಭಾರತಿವಾರ್ತಾಭಾರತಿ26 Feb 2019 9:35 PM IST
share
‘ಮಳೆನೀರು ಕೊಯ್ಲು, ತ್ಯಾಜ್ಯ ನಿರ್ವಹಣೆ ಎಲ್ಲರಿಗೂ ಅನಿವಾರ್ಯ’

 ಮಣಿಪಾಲ, ಫೆ. 26: ಕುಂದಾಪುರ ತಾಲೂಕಿನ ಕೊಲ್ಲೂರು ಸಮೀಪದ ತೀರಾ ಹಿಂದುಳಿದಿರುವ ಗ್ರಾಮವಾದ ಹಳ್ಳಿಬೇರಿನಲ್ಲಿ ಬೆಂಗಳೂರಿನ ಮಹಾತ್ಮಾಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ, ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ ಹಾಗೂ ಸೆಲ್ಕೋ ಸೋಲಾರ್ ಕುಂದಾಪುರ ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ಘನತ್ಯಾಜ್ಯ ನಿರ್ವಹಣೆ, ಮಳೆ ನೀರು ಕೊಯ್ಲು ಮತ್ತು ನವೀಕರಿಸಬಹುದಾದ ಇಂಧನ ವಿಷಯದ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡುವ ಕಾರ್ಯಕ್ರಮ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪರಿಸರದಲ್ಲಿ ಸೋಮವಾರ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾತ್ಮಾಗಾಂಧಿ ಗ್ರಾಮೀಣ ಇಂಧನ ಸಂಸ್ಥೆಯ ಉಪನಿರ್ದೇಶಕ ರವಿ ಮಾತನಾಡಿ, ಹಳ್ಳಿಬೇರಿನಂತಹ ಬೆಟ್ಟ, ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಗ್ರಾಮದಲ್ಲೇ ಬೇಸಿಗೆಯಲ್ಲಿ ನೀರಿನ ಕೊರತೆ ಇದೆ ಎಂದಾಗ ನಾವು ಮಳೆ ನೀರನ್ನು ಇಂಗಿಸುವ ಕಾರ್ಯ ಮಾಡುವುದು ಎಷ್ಟು ಅನಿವಾರ್ಯವಾಗಿದೆ ಎಂದು ತಿಳಿದುಕೊಳ್ಳಬೇಕು ಎಂದರು.

ಇಂದು ಜನರಿಗೆ ಅದರಲ್ಲೂ ಮುಖ್ಯವಾಗಿ ಮುಂದಿನ ಜನಾಂಗಕ್ಕೆ ತಾಜ್ಯ ನಿರ್ವಹಣೆ ಮತ್ತು ವಿಲೇವಾರಿ, ಸೌರ ಶಕ್ತಿಯ ಬಳಕೆ, ನೀರಿನ ಸದ್ಬಳಕೆ ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ನೀಡಬೇಕು. ಆಗ ಮಾತ್ರ ಮುಂದಿನ ಜನಾಂಗ ಪ್ರಕೃತಿಯೊಂದಿಗೆ ಸಹಬಾಳ್ವೆ ನಡೆಸಲು ಸಾಧ್ಯವಾದೀತು ಎಂದು ರವಿ ಅಭಿಪ್ರಾಯಪಟ್ಟರು.

ಸೆಲ್ಕೋ ವಲಯಾಧಿಕಾರಿ ಶೇಖರ ಶೆಟ್ಟಿ ಮಾತನಾಡಿ ಸೆಲ್ಕೋ ಸಂಸ್ಥೆ ಹಳ್ಳಿಬೇರು ಗ್ರಾಮದ ಎಲ್ಲ ಮನೆಗಳಿಗೆ ಸೌರ ದೀಪ ಅಳವಡಿಸುವ ಕೆಲಸ ಮಾಡುತ್ತಿದೆ. ಹಳ್ಳಿಬೇರು ಸರಕಾರಿ ಹಿರಿಯ ಪ್ರಾಧಮಿಕ ಶಾಲೆಯಲ್ಲಿ ಸೋಲಾರ್ ಇ-ಶಾಲಾ, ಡಿಜಿಟಲ್ ಕಲಿಕೆ, ಸೌರ ದೀಪಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಇಲ್ಲಿನ ಅಂಗನವಾಡಿಗೆ ಸೌರ ವಿದ್ಯುತ್ ಮೂಲಕ ನಡೆಯುವ ಟ್ಯಾಬ್, ದೀಪಗಳು ಮತ್ತು ಫ್ಯಾನ್‌ಗಳನ್ನು ಅಳವಡಿಸಲಾಗುತ್ತಿದೆ. ಅಲ್ಲದೇ ಶಾಲೆಯ ಬಾವಿಯಿಂದ ನೀರೆತ್ತಲು ಸೋಲಾರ್ ಪಂಪ್ ಅಳವಡಿಸುವ ಕಾರ್ಯ ಕೈಗೆತ್ತಿಕೊಂಡಿದೆ ಎಂದರು.

ಹಳ್ಳಿಬೇರು ಗ್ರಾಮದಿಂದ ಕೊಲ್ಲೂರಿಗೆ ಹೋಗುವ ದಾರಿಯಲ್ಲಿ ಬೀದಿ ದೀಪಗಳ ಕೊರತೆಯಿದ್ದು ಸುಮಾರು 25 ಸೋಲಾರ್ ದಾರಿ ದೀಪಗಳನ್ನು ಅಳವಡಿಸುವ ಬಗ್ಗೆ ಚಿಂತನೆಯಿದ್ದು ಈ ಕಾರ್ಯದಲ್ಲಿ ದಾನಿಗಳು, ಸರಕಾರಿ ಮತ್ತು ಸರಕಾರೇತರ ಸಂಸ್ಥೆಗಳು ಸೆಲ್ಕೋ ಜೊತೆ ಕೈಜೋಡಿಸುವಂತೆ ಮನವಿ ಮಾಡಿದರು.

ಸಂಪನ್ಮೂಲ ವ್ಯಕ್ತಿ ಬಾರಕೂರು ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ. ಸೀತಾರಾಮ ಶೆಟ್ಟಿ ಮಾಹಿತಿ ನೀಡಿ ಮಳೆ ನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಮತ್ತು ನವೀಕರಿಸಬಹುದಾದ ಇಂಧನ ಬಳಕೆ ಇವು ಭವಿಷ್ಯದ ಮನುಕುಲದ ಉಳಿವಿನ ಮಂತ್ರ ಎಂದರು.

ಸಂಪನ್ಮೂಲ ವ್ಯಕ್ತಿ ಬಾರಕೂರು ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ. ಸೀತಾರಾಮ ಶೆಟ್ಟಿ ಮಾಹಿತಿ ನೀಡಿ ಮಳೆ ನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಮತ್ತು ನವೀಕರಿಸಬಹುದಾದ ಇಂನಬಳಕೆಇವುವಿಷ್ಯದ ಮನುಕುಲದ ಉಳಿವಿನ ಮಂತ್ರ ಎಂದರು. ಭಾರತೀಯ ವಿಕಾಸ ಟ್ರಸ್ಟ್‌ನ ಅಧಿಕಾರಿ ಅರುಣ್ ಪಟವರ್ಧನ್ ಸ್ವಾಗತಿಸಿ, ಹಳ್ಳಿಬೇರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಕೇಶವ ಮೂರ್ತಿ ವಂದಿಸಿದರು. ಶಿಕ್ಷಕ ಹರೀಶ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X