ಕರ್ಕಶ ಹಾರ್ನ್ ವಿರುದ್ಧ ಕಾರ್ಯಾಚರಣೆ

ಕಾರ್ಕಳ, ಫೆ.26: ಕರ್ಕಶ ಹಾರ್ನ್ ಬಳಕೆ ಮಾಡುತ್ತಿರುವ ವಿವಿಧ ವಾಹನ ಗಳ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸರು ಇಂದು ಬಜಗೋಳಿಯಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.
ಕಾರ್ಕಳ ವೃತ್ತ ನಿರೀಕ್ಷಕ ಹಾಲಮೂರ್ತಿ ರಾವ್ ಹಾಗೂ ಕಾರ್ಕಳ ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೇನ್ ನೇತೃತ್ವದಲ್ಲಿ ಸುಮಾರು 55 ಖಾಸಗಿ ಬಸ್, ಲಾರಿ ಸೇರಿದಂತೆ ವಿವಿಧ ವಾಹನಗಳಲ್ಲಿನ ಕರ್ಕಶ ಹಾರ್ನ್‌ಗಳನ್ನು ತೆಗೆದು ದಂಡ ವಿಧಿಸಿರುವುದಾಗಿ ಪ್ರಕಟಣೆ ತಿಳಿಸಿದೆ.
Next Story





