Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಕ್ಷಣ ಕ್ಷೇತ್ರ ಉದ್ದಿಮೆಯಾಗಿ...

ಶಿಕ್ಷಣ ಕ್ಷೇತ್ರ ಉದ್ದಿಮೆಯಾಗಿ ರೂಪಾಂತರಗೊಂಡಿದೆ: ಡಾ.ಕಿಶೋರ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ26 Feb 2019 10:17 PM IST
share
ಶಿಕ್ಷಣ ಕ್ಷೇತ್ರ ಉದ್ದಿಮೆಯಾಗಿ ರೂಪಾಂತರಗೊಂಡಿದೆ: ಡಾ.ಕಿಶೋರ್ ಸಿಂಗ್

ಬೆಂಗಳೂರು, ಫೆ.26: ಇಂದಿನ ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಣ ಕ್ಷೇತ್ರವಿಂದು ಹಣ ಮಾಡುವ ಉದ್ದಿಮೆಯಾಗಿ ರೂಪಾಂತರಗೊಂಡಿದೆ ಎಂದು ವಿಶ್ವಸಂಸ್ಥೆಯ ಶಿಕ್ಷಣ ಹಕ್ಕುಗಳ ಮಾಜಿ ವಿಶೇಷ ವರದಿಗಾರ ಡಾ.ಕಿಶೋರ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದ ಶಿಕ್ಷಕರ ಸದನದಲ್ಲಿ ಮಗು ಮತ್ತು ಕಾನೂನು ಕೇಂದ್ರ, ನ್ಯಾಷನಲ್ ಲಾ ಸ್ಕೂಲ್ ಆಫ್ ಯೂನಿವರ್ಸಿಟಿ ಸಹಯೋಗದೊಂದಿಗೆ ಆಯೋಜಿಸಿದ್ದ ‘ಮೌಲ್ಯ ಬಿಕ್ಕಟ್ಟು ಮತ್ತು ಶಿಕ್ಷಣ ವ್ಯವಸ್ಥೆ- ಸಮಸ್ಯೆ ಹಾಗೂ ಸವಾಲುಗಳು’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಕ್ಕಳಿಗೆ ಮುಂದಿನ ಭವಿಷ್ಯಕ್ಕೆ ಭದ್ರಬುನಾದಿಯಾಗಬೇಕಿದ್ದ ಶಿಕ್ಷಣ ವ್ಯವಸ್ಥೆಯಿಂದು ಉಳ್ಳವರ ಪಾಲಾಗುತ್ತಿದೆ. ಸ್ಥಿತಿವಂತರಷ್ಟೇ ಶಿಕ್ಷಣ ಪಡಯಬೇಕು ಎಂಬ ಅನಾದಿಕಾಲದ ವ್ಯವಸ್ಥೆ ಮರು ಸ್ಥಾಪನೆಯಾಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಎಲ್ಲ ಕ್ಷೇತ್ರಗಳನ್ನು ಆಕ್ರಮಿಸಿಕೊಂಡಿರುವ ಕಾರ್ಪೋರೇಟ್ ವ್ಯವಸ್ಥೆ ಇಲ್ಲಿಗೂ ವಿಸ್ತರಣೆಯಾಗಿರುವುದು ದುರಂತ ಎಂದು ಹೇಳಿದರು.

ವಿಶ್ವದಾದ್ಯಂತ ಎಲ್ಲ ವಯಲಗಳಲ್ಲಿ ಬಂಡವಾಳಶಾಹಿಗಳ ಕೈವಾಡವಿದೆ. ಅದು ಶಿಕ್ಷಣ ಕ್ಷೇತ್ರವನ್ನೂ ಆವರಿಸಿಕೊಂಡಿದ್ದು, ಇದನ್ನು ಮಾರಾಟದ ಕ್ಷೇತ್ರವನ್ನಾಗಿ ಮಾಡಿಕೊಳ್ಳಲಾಗಿದೆ. ಹೀಗಾಗಿ, ಬಂಡವಾಳಶಾಹಿಗಳಿಂದ ಶಿಕ್ಷಣ ಕ್ಷೇತ್ರ ಬಿಡುಗಡೆಯಾಗಬೇಕು. ಎಲ್ಲರಿಗೂ ಶಿಕ್ಷಣ ಮತ್ತು ಆರೋಗ್ಯ ಸಿಕ್ಕಿದಾಗಲೇ ದೇಶ ಅಭಿವೃದ್ಧಿಯಾಗಲು ಸಾಧ್ಯ ಎಂದು ಅವರು ನುಡಿದರು.

ಭಾರತದಲ್ಲಿ ಶಿಕ್ಷಣವನ್ನು ದಾನ ಎಂದು ಹೇಳಲಾಗುತ್ತದೆ. ಅದರಲ್ಲೂ ಪ್ರಾಥಮಿಕ ಶಿಕ್ಷಣ ಸೇವೆ ಅತ್ಯಂತ ಮಹತ್ವದಾಗಿದೆ. ಇದೊಂದು ಪವಿತ್ರವಾದ ವೃತ್ತಿಯಾಗಿದ್ದು, ಇಲ್ಲಿ ಸೇವೆಸಲ್ಲಿಸುವ ಪ್ರತಿಯೊಬ್ಬರು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿಯುತ್ತಾರೆ ಎಂದು ತಿಳಿಸಿದರು.

ಶಿಕ್ಷಣ ಮಕ್ಕಳಿಗೆ ಅಕ್ಷರ ಜ್ಞಾನ ನೀಡುತ್ತದೆ. ಅದರ ಜತೆಗೆ, ಸೌಹಾರ್ದ, ಸಂಸ್ಕಾರ, ಸಮಾನತೆಯನ್ನೂ ಕಲಿಸುತ್ತದೆ. ಅಕ್ಷರ ಜ್ಞಾನವಿದ್ದರೆ ಮಾನವೀಯ ಮೌಲ್ಯಗಳು ಹಾಗೂ ವೈಚಾರಿಕ ಮನೋಭಾವ ಬೆಳೆಯಲು ಹೆಚ್ಚು ಸಹಕಾರವಾಗುತ್ತದೆ. ಆದುದರಿಂದಾಗಿ ಸರಕಾರಗಳು ಎಲ್ಲರಿಗೂ ಶಿಕ್ಷಣ ಸಿಗುವಂತೆ ಮಾಡಬೇಕು. ಸರಕಾರಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಆಗ್ರಹಿಸಿದರು.

ಒಂದು ದೇಶ ಬದಲಾವಣೆ ಕಾಣಬೇಕಾದರೆ ಶಿಕ್ಷಣ ಅತ್ಯಗತ್ಯ. ದೇಶದಲ್ಲಿ ಅನೇಕರು ಶಿಕ್ಷಣ ನೀಡುವ ಮೂಲಕ ಹಲವು ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡಲು ಶ್ರಮಿಸಿದ್ದಾರೆ. ಹೀಗಾಗಿ, ದೇಶದ ಬದಲಾವಣೆಗಾಗಿ ಹಾಗೂ ಉಜ್ಜಲ ಭವಿಷ್ಯಕ್ಕಾಗಿ ಎಲ್ಲರನ್ನೂ ಶಿಕ್ಷಿತರನ್ನಾಗಿ ಮಾಡಬೇಕು ಎಂದು ಅವರು ಕರೆ ನೀಡಿದರು.

ಶಿಕ್ಷಣ ತಜ್ಞ ಡಾ.ವಿ.ಪಿ.ನಿರಂಜನಾರಾಧ್ಯ ಮಾತನಾಡಿ, ದೇಶ ಮತ್ತು ರಾಜ್ಯದಲ್ಲಿನ ಶೈಕ್ಷಣಿಕ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿಗೆ. ಅವೈಜ್ಞಾನಿಕ ಪಠ್ಯ ಕ್ರಮಗಳು, ಬೋಧನಾ ವಿಧಾನಗಳಿಂದ ಗುಣಮಟ್ಟದ ಶಿಕ್ಷಣ ಸಿಗಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸರಕಾರಿ ಶಾಲೆಗಳು ಅತ್ಯಂತ ಸಂಕಷ್ಟದ ಸ್ಥಿತಿಯಲ್ಲಿವೆ. ಅಲ್ಲದೆ, ಅಧ್ಯಾಪಕರೂ ಹಲವು ಸಮಸ್ಯೆಗಳಿಂದ ನರಳುತ್ತಿದ್ದಾರೆ. ಇಂತಹ ದುಸ್ಥಿತಿಯಲ್ಲಿ ಸರಕಾರಿ ಶಾಲೆಗಳಿಂದ ಗುಣಾತ್ಮಕ ಶಿಕ್ಷಣ ನಿರೀಕ್ಷಿಸುವುದು ಕಷ್ಟ ಸಾಧ್ಯ. ಹೀಗಾಗಿ, ಆಳುವವರು ಬಡವರ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವುದರ ಕಡೆ ಗಮನ ಹರಿಸಬೇಕು. ಶಿಕ್ಷಕರು ಫಲಿತಾಂಶದ ಕಡೆಗೆ ಎದುರು ನೋಡದೇ ಮಕ್ಕಳ ಭವಿಷ್ಯವನ್ನು ನೋಡಬೇಕಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ, ನಿವೃತ್ತ ಶಿಕ್ಷಣ ಇಲಾಖೆಯ ನೌಕರರ ಸಂಘದ ತಿರುಮಲರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X