Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲೋಕಸಭೆ ಚುನಾವಣೆಗೂ ಮುನ್ನ ಶುರುವಾಗಿದೆ...

ಲೋಕಸಭೆ ಚುನಾವಣೆಗೂ ಮುನ್ನ ಶುರುವಾಗಿದೆ ಬಗರ್ ಹುಕುಂ 'ಪೊಲಿಟಿಕಲ್ ವಾರ್..!

ಬಿಜೆಪಿಯಿಂದ ರಾಜ್ಯ ಸರ್ಕಾರದ ವಿರುದ್ಧ, ಕಾಂಗ್ರೆಸ್-ಜೆಡಿಎಸ್‍ನಿಂದ ಕೇಂದ್ರದ ವಿರುದ್ಧ ಟೀಕಾಪ್ರಹಾರ

ವರದಿ: ಬಿ.ರೇಣುಕೇಶ್ವರದಿ: ಬಿ.ರೇಣುಕೇಶ್26 Feb 2019 11:56 PM IST
share
ಲೋಕಸಭೆ ಚುನಾವಣೆಗೂ ಮುನ್ನ ಶುರುವಾಗಿದೆ ಬಗರ್ ಹುಕುಂ ಪೊಲಿಟಿಕಲ್ ವಾರ್..!

ಶಿವಮೊಗ್ಗ, ಫೆ. 26: ಬಿಸಿಲ ಬೇಗೆಯ ರೀತಿಯಲ್ಲಿ, ರಾಜಕೀಯ ಮೇಲಾಟ ಕೂಡ ಕಾವೇರಲಾರಂಭಿಸಿದೆ. ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ, ಪ್ರಮುಖ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ಕೂಡ ರಂಗೇರಲಾರಂಭಿಸಿದೆ. ಈ ನಡುವೆ 'ಬಗರ್ ಹುಕುಂ ಸಾಗುವಳಿಯು, ಸದ್ಯದ ರಾಜಕೀಯ ಸಮರಾಂಗಣದ ಚರ್ಚೆಯ ವಿಷಯವಾಗಿದೆ. 

ಇತ್ತೀಚೆಗೆ ಬಗರ್ ಹುಕುಂ ಸಾಗುವಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಹೊರಡಿಸಿದ ಆದೇಶವು, ಮಲೆನಾಡು ಸೇರಿದಂತೆ ರಾಜ್ಯದ ಲಕ್ಷಾಂತರ ಬಗರ್ ಹುಕುಂ ಸಾಗುವಳಿದಾರರ ನಿದ್ದೆಗೆಡಿಸಿದೆ. ಹಾಗೆಯೇ ರಾಜಕೀಯ ಪಕ್ಷಗಳ ಪರಸ್ಪರ ಕೆಸರೆರಚಾಟಕ್ಕೂ ವೇದಿಕೆಯಾಗಿದೆ. ಭಾರೀ ಹೈಡ್ರಾಮಾಕ್ಕೂ ಸಾಕ್ಷಿಯಾಗಿದೆ. ಒಬ್ಬರ ಮೇಲೊಬ್ಬರು ಗೂಬೆ ಕೂರಿಸುವ ಕಾರ್ಯ ನಡೆಸಲಾರಂಭಿಸಿದ್ದಾರೆ. ಬೀದಿಗಿಳಿದು ಹೋರಾಟ ಮಾಡಲಾರಂಭಿಸಿದ್ದಾರೆ. 
ಒಂದೆಡೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು, 'ಬಗರ್ ಹುಕುಂ ಸಾಗುವಳಿದಾರರ ಹಿತರಕ್ಷಣೆ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಈ ಕಾರಣದಿಂದಲೇ ಸುಪ್ರೀಂ ತೀರ್ಪು ಹೊರಬೀಳುವಂತಾಗಿದೆ' ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸುತ್ತಿವೆ. ಮತ್ತೊಂದೆಡೆ ಬಿಜೆಪಿ ಪಕ್ಷವು, 'ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಬಗರ್ ಹುಕುಂ ರೈತರ ಹಿತರಕ್ಷಣೆ ಮಾಡುವಲ್ಲಿ ವಿಫಲವಾಗಿದೆ. ಯಾವುದೇ ಕಾರಣಕ್ಕೂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ' ಎಂದು ಸಮ್ಮಿಶ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸುತ್ತಿದೆ. 

ಇತ್ತೀಚೆಗೆ ಶಿವಮೊಗ್ಗ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಬಿಜೆಪಿ ಪಕ್ಷದ ಮಾಜಿ ಶಾಸಕರೋರ್ವರು, 'ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ರಾಜ್ಯ ಸರ್ಕಾರ ಮುಂದಾದರೆ ರಕ್ತಪಾತವೇ ಆದೀತು' ಎಂಬ ಹೇಳಿಕೆ ನೀಡಿದ್ದರು. ಇದೆಲ್ಲ ಗಮನಿಸಿದರೆ ಬಗರ್ ಹುಕುಂ ಸಾಗುವಳಿ ವಿಷಯವು, ಲೋಕಸಭೆ ಚುನಾವಣೆಯಲ್ಲಿ ಭಾರೀ ಸದ್ದು ಮಾಡುವ ಎಲ್ಲ ಲಕ್ಷಣಗಳು ಗೋಚರವಾಗಲಾರಂಭಿಸಿದೆ.  

ಸುಪ್ರೀಂ ಆದೇಶವೇನು?: ಅರಣ್ಯ ಹಕ್ಕು ಕಾಯ್ದೆಯಡಿ ಅರಣ್ಯವಾಸಿಗಳು ಎಂದು ಹಕ್ಕು ಮಂಡಿಸಿ ಅದು ತಿರಸ್ಕೃತವಾಗಿರುವವರನ್ನು, ಜುಲೈ 24 ರೊಳಗೆ ಅರಣ್ಯ ಪ್ರದೇಶದಿಂದ ತೆರವುಗೊಳಿಸಬೇಕು. ಇದಕ್ಕೂ ಮುನ್ನ ಜುಲೈ 12 ರೊಳಗೆ ಮಾಹಿತಿಯಿರುವ ಪ್ರಮಾಣಪತ್ರ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಫೆ. 21 ರಂದು ಕರ್ನಾಟಕ ಸೇರಿದಂತೆ 21 ರಾಜ್ಯಗಳಿಗೆ ಆದೇಶ ಹೊರಡಿಸಿತ್ತು. 

ಲಭ್ಯ ಮಾಹಿತಿಯ ಅನುಸಾರ, ಕರ್ನಾಟಕ ಸೇರಿದಂತೆ 21 ರಾಜ್ಯಗಳಲ್ಲಿ 11 ಲಕ್ಷಕ್ಕೂ ಅಧಿಕ ಪರಿಶಿಷ್ಟ ಪಂಗಡ ಮತ್ತು ಇತರೆ ಪಾರಂಪರಿಕ ಅರಣ್ಯ ನಿವಾಸಿಗಳು ಕಾಯ್ದೆಯಡಿ ಸಲ್ಲಿಸಿದ ಅರ್ಜಿಗಳು ತಿರಸ್ಕೃತವಾಗಿದ್ದವು. ಇವರೆಲ್ಲರನ್ನು ಅರಣ್ಯ ಭೂಮಿಯಿಂದ ತೆರವುಗೊಳಿಸಬೇಕು ಎಂದು ಸುಪ್ರೀಂ ಖಡಕ್ ಸೂಚನೆ ನೀಡಿದೆ. 

ಮೇಲಾಟ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿಯೇ ಸುಪ್ರೀಂ ಕೋರ್ಟ್ ನೀಡಿರುವ ಈ ಆದೇಶವು, ರಾಜಕೀಯ ಮೇಲಾಟಕ್ಕೆ ಕಾರಣವಾಗುತ್ತಿದೆ. ಈ ಆದೇಶದ ವಿರುದ್ಧ ಪುನರ್ ಮೇಲ್ಮನವಿ ಸಲ್ಲಿಸಬೇಕೆಂಬ ಒತ್ತಾಯ, ಆಗ್ರಹಗಳು ಹೆಚ್ಚಾಗಲಾರಂಭಿಸಿದೆ. ಲೋಕಸಭೆ ಚುನಾವಣೆಯಲ್ಲಿ ಇದು ಇನ್ಯಾವ ತಿರುವು ಪಡೆದುಕೊಳ್ಳಲಿದೆ ಎಂಬುವುದನ್ನು ಇನ್ನಷ್ಟೆ ಕಾದು ನೋಡಬೇಕಾಗಿದೆ. 

ಪರಿಶೀಲನಾ ಅರ್ಜಿ ಸಲ್ಲಿಸಲು ಒತ್ತಾಯಿಸಿ ಕೇಂದ್ರಕ್ಕೆ ಮನವಿ: ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್
ಬಗರ್ ಹುಕುಂ ಸಾಗುವಳಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವು ಬುಡಕಟ್ಟು ಹಾಗೂ ಆದಿವಾಸಿಗಳ ಪಾಲಿಗೆ ಮರಣಶಾಸನವಾಗಿದೆ. ಕೇಂದ್ರ ಸರ್ಕಾರ ಈ ತೀರ್ಪಿನ ಬಗ್ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಆಗ್ರಹಿಸಿ, ಜಿಲ್ಲಾ ಜೆಡಿಎಸ್ ಪಕ್ಷವು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಕ್ಷದ ಮುಖಂಡ ಮಧು ಬಂಗಾರಪ್ಪ ನೇತೃತ್ವದಲ್ಲಿ ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಅರ್ಪಿಸಿದೆ. ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಭೂ ಮಾಲಕತ್ವ ನಿರಾಕರಿಸಲಾದ 12 ಲಕ್ಷ ಅರಣ್ಯ ವಾಸಿ ಕುಟುಂಬಗಳನ್ನು ಒಕ್ಕಲೆಬ್ಬಿಸುವಂತೆ ಸುಪ್ರೀಂ ಆದೇಶಿಸಿದೆ. ಈ ತೀರ್ಪು ಶಿವಮೊಗ್ಗ ಜಿಲ್ಲೆಯಲ್ಲಿಯಲ್ಲಿಯೂ ಸಾವಿರಾರು ಬಡ ಬಗರ್ ಹುಕುಂ ಸಾಗುವಳಿದಾರರಲ್ಲಿ ಆತಂಕ ಉಂಟು ಮಾಡಿದೆ. ತಕ್ಷಣವೇ ಕೇಂದ್ರ ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಿ ಸಾಗುವಳಿದಾರರ ನೆರವಿಗೆ ಧಾವಿಸಬೇಕು' ಎಂದು ಜೆಡಿಎಸ್ ಪಕ್ಷದ ಮುಖಂಡ ಎಂ.ಶ್ರೀಕಾಂತ್ ಆಗ್ರಹಿಸಿದ್ದಾರೆ. 

ಸುಪ್ರೀಂಗೆ ಮನವರಿಕೆ ಮಾಡುವಲ್ಲಿ ವಿಫಲ: ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಹಕ್ರೆ

ಬಗರ್ ಹುಕುಂ ರೈತರ ಹಿತರಕ್ಷಣೆ ಉದ್ದೇಶದಿಂದಲೇ, ಈ ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಅತ್ಯಂತ ಮಹತ್ವದ ಅರಣ್ಯ ಹಕ್ಕು ಕಾಯ್ದೆ ಜಾರಿಗೆ ತರಲಾಗಿತ್ತು. ಆದರೆ ಕಾಯ್ದೆಯ ಅನುಷ್ಠಾನ ಪರಿಣಾಮಕಾರಿಯಾಗಿ ನಡೆಯುತ್ತಿಲ್ಲ. ಮತ್ತೊಂದೆಡೆ ಇತ್ತೀಚೆಗೆ ಸುಪ್ರೀಂಕೋರ್ಟ್ ಹೊರಡಿಸಿರುವ ಆದೇಶವು ಬಗರ್ ಹುಕುಂ ರೈತರಲ್ಲಿ ತೀವ್ರ ಆತಂಕ ಉಂಟು ಮಾಡಿದೆ. ಕೇಂದ್ರ ಸರ್ಕಾರವು ತನ್ನ ವಕೀಲರ ಮೂಲಕ, ಸುಪ್ರೀಂಗೆ ವಾಸ್ತವ ಸ್ಥಿತಿಗತಿ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾದ ಕಾರಣದಿಂದ ಈ ಆದೇಶ ಹೊರಬಂದಿದೆ. ತಕ್ಷಣವೇ ಕೇಂದ್ರ ಸರ್ಕಾರ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಬೇಕು' ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಹಕ್ರೆ ಆಗ್ರಹಿಸಿದ್ದಾರೆ. 'ಶಿವಮೊಗ್ಗ ಜಿಲ್ಲೆಯಲ್ಲಿ ಕಾಯ್ದೆಯಡಿ ಸಾಗುವಳಿ ಕೋರಿ ಸಲ್ಲಿಕೆಯಾದ 89 ಸಾವಿರ ಅರ್ಜಿಗಳ ವಿಲೇ ಬಾಕಿಯಿದೆ. ಅರ್ಜಿಗಳ ವಿಲೇವಾರಿಯಾಗುವವರೆಗೂ ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು' ಎಂದು ಇದೇ ಸಂದರ್ಭದಲ್ಲಿ ಮಲ್ಲಿಕಾರ್ಜುನ ಹಕ್ರೆ ಒತ್ತಾಯಿಸಿದ್ದಾರೆ. 

ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯಿಂದ ಜಾಥಾ

ಆದಿವಾಸಿಗಳ ಒಕ್ಕಲೆಬ್ಬಿಸುವುದನ್ನು ವಿರೋಧಿಸಿ ಹಾಗೂ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸುವಂತೆ ಒತ್ತಾಯಿಸಿ ಬಿಜೆಪಿ ಪಕ್ಷವು ಫೆ. 27 ರಂದು ಶಿವಮೊಗ್ಗ ನಗರದಲ್ಲಿ ಅರಣ್ಯವಾಸಿಗಳ, ಬಗರ್ ಹುಕುಂ ಸಾಗುವಳಿದಾರರ ಬೃಹತ್ ಜಾಥಾ ಆಯೋಜಿಸಿದೆ. ಸುಪ್ರೀಂಕೋರ್ಟ್ ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಅರ್ಜಿ ಸಲ್ಲಿಸಬೇಕು. ತಜ್ಞ ವಕೀಲರ ನೇಮಕ ಮಾಡಬೇಕು. ಬಗರ್ ಹುಕುಂ ಸಾಗುವಳಿದಾರರಿಗೆ ನ್ಯಾಯ ಕಲ್ಪಿಸಬೇಕು. ಸಕಾರಣವಿಲ್ಲದೆ ತಿರಸ್ಕರಿಸಲಾಗಿರುವ ಅರ್ಜಿಗಳ ಪುನರ್ ಪರಿಶೀಲನೆ ನಡೆಸಿ, ನಿಯಮಾನುಸಾರ ಹಕ್ಕುಪತ್ರ ನೀಡಬೇಕು. ಯಾವುದೇ ಕಾರಣಕ್ಕೂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು. ಅವರ ವಿರುದ್ಧ ಪ್ರಕರಣ ದಾಖಲಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಪಕ್ಷ ಒತ್ತಾಯಿಸಿದೆ. 

ಉಭಯ ಸಂಕಟದಲ್ಲಿ ಅಧಿಕಾರಿ ವರ್ಗ
ಅರಣ್ಯ ಹಾಗೂ ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸುವಂತೆ ಸುಪ್ರೀಂ-ಹೈಕೋರ್ಟ್‍ಗಳು, ಈ ಹಿಂದೆಯೇ ಅರಣ್ಯ ಇಲಾಖೆ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ಹೊರಡಿಸಿವೆ. ಒತ್ತುವರಿಯಾಗಿರುವ ಸರ್ಕಾರಿ ಭೂಮಿ ಸಂರಕ್ಷಣೆ ಮಾಡದಿದ್ದರೆ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧವೇ ಕೇಸ್ ದಾಖಲಿಸುವ ಎಚ್ಚರಿಕೆ ನೀಡಿವೆ. ಮತ್ತೊಂದೆಡೆ ಭೂ ಕಬಳಿಕೆಗೆ ಸಂಬಂಧಿಸಿದಂತೆ ಪ್ರತ್ಯೇಕ ಕಾನೂನು ಜಾರಿಯಲ್ಲಿದೆ. ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡ ಪ್ರಕರಣಗಳ ವಿಚಾರಣೆಗೆಂದೇ ಬೆಂಗಳೂರಿನಲ್ಲಿ ವಿಶೇಷ ನ್ಯಾಯಾಲಯ ಕೂಡ ಸ್ಥಾಪಿಸಲಾಗಿದೆ. 'ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಲು ಮುಂದಾದರೆ, ರಾಜಕಾರಣಿಗಳು-ರೈತರ ಕೆಂಗಣ್ಣಿಗೆ ತುತ್ತಾಗಬೇಕಾಗುತ್ತದೆ. ಸುಮ್ಮನಿದ್ದರೆ ಹಿರಿಯ ಅಧಿಕಾರಿಗಳಿಂದ ಶಿಸ್ತುಕ್ರಮಕ್ಕೆ ಗುರಿಯಾಗಬೇಕಾಗುತ್ತದೆ. ಈ ವಿಷಯದಲ್ಲಿ ಅಡಕತ್ತರಿಯಲ್ಲಿ ಸಿಲುಕಿದಂತ ಸ್ಥಿತಿ ಅಧಿಕಾರಿಗಳದ್ದಾಗಿದೆ' ಎಂದು ಅರಣ್ಯ ಇಲಾಖೆಯ ಅಧಿಕಾರಿಯೋರ್ವರು ತಮ್ಮ ಅಳಲು ತೋಡಿಕೊಳ್ಳುತ್ತಾರೆ. 

share
ವರದಿ: ಬಿ.ರೇಣುಕೇಶ್
ವರದಿ: ಬಿ.ರೇಣುಕೇಶ್
Next Story
X