ಜೆಡಿಎಸ್-ಕಾಂಗ್ರೆಸ್ ನಡುವೆ ಸೀಟು ಹಂಚಿಕೆಯಲ್ಲಿ ಗೊಂದಲವಿಲ್ಲ: ಸಿಎಂ ಕುಮಾರಸ್ವಾಮಿ
ಲೋಕಸಭಾ ಚುನಾವಣೆ

ಬೆಂಗಳೂರು, ಫೆ.27: ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಲೋಕಸಭಾ ಕ್ಷೇತ್ರಗಳ ಸೀಟು ಹಂಚಿಕೆ ವಿಷಯದಲ್ಲಿ ಜೆಡಿಎಸ್, ಕಾಂಗ್ರೆಸ್ ನಡುವೆ ಯಾವುದೆ ಗೊಂದಲವಿಲ್ಲವೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಬುಧವಾರ ನಗರದ ಜಯದೇವ ಆಸ್ಪತ್ರೆಯ 300 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ನೂತನ ಕಟ್ಟಡ ಶಂಕು ಸ್ಥಾಪನೆ ನರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸಮರ್ಥವಾಗಿ ಎದುರಿಸಲು ಜೆಡಿಎಸ್-ಕಾಂಗ್ರೆಸ್ ಸಿದ್ದವಾಗುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆಗೆ ದೇವೇಗೌಡರು ಸ್ಪರ್ಧಿಸಬೇಕೆನ್ನುವ ಒತ್ತಡಗಳು ಅನೇಕ ಕಡೆಗಳಿಂದ ಬಂದಿವೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳಲಿದೆ. ಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಈ ಸಂಬಂಧ 3 ದಿನಗಳೊಳಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
Next Story





