ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿಲ್ಲ: ಸಚಿವೆ ಜಯಮಾಲಾ

ಬೆಂಗಳೂರು, ಫೆ.27: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್ ನಾಯಕರು ಯಾವುದೇ ಚರ್ಚೆ ನಡೆಸಿಲ್ಲವೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಇಂದಿಲ್ಲಿ ಹೇಳಿದರು.
ಬುಧವಾರ ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯ ತಿಥಿ ಅಂಗವಾಗಿ ವಿಧಾನಸೌಧದ ಬಳಿಯ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ಪಕ್ಷ ಏನು ಹೇಳುತ್ತದೋ ಅದನ್ನು ಪಾಲಿಸುತ್ತೇನೆ. ಪಕ್ಷ ಹೇಳಿದಂತೆ ನಡೆದುಕೊಳ್ಳುತ್ತೇನೆ. ಸಚಿವೆಯಾಗಿ ಸದ್ಯಕ್ಕೆ ಖುಷಿಯಾಗಿದ್ದೇನೆ. ಲೋಕಸಭೆ ಚುನಾವಣೆಗೆ ಟಿಕೆಟ್ ನೀಡುವ ವಿಚಾರ ಬಂದಾಗ ಒಪ್ಪಿಕೊಳ್ಳುವುದೋ ಬಿಡುವುದೋ ಎಂಬುದನ್ನು ಯೋಚಿಸುತ್ತೇನೆ ಎಂದರು.
ಅಕ್ಟೋಬರ್ 12ರಂದು ಮೈಸೂರು ದಿನಾಚರಣೆಯನ್ನಾಗಿ ಆಚರಿಸುವಂತೆ ಕೆ.ಸಿ.ರೆಡ್ಡಿ ಕುಟುಂಬಸ್ಥರು ಮನವಿ ಸಲ್ಲಿಸಿದ್ದು, ಈ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
Next Story





