Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಡಿಯುವ ನೀರು ಕಾಮಗಾರಿ ಶೀಘ್ರ...

ಕುಡಿಯುವ ನೀರು ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ದಿನಕರ ಬಾಬು

ಮಣಿಪಾಲದಲ್ಲಿ ಮಾಸಿಕ ಕೆಡಿಪಿ ಸಭೆ

ವಾರ್ತಾಭಾರತಿವಾರ್ತಾಭಾರತಿ27 Feb 2019 8:02 PM IST
share
ಕುಡಿಯುವ ನೀರು ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ದಿನಕರ ಬಾಬು

ಉಡುಪಿ, ಫೆ.27: ಜಿಪಂ ವತಿಯಿಂದ ಕೈಗೊಂಡಿರುವ ಎಲ್ಲಾ ಕುಡಿಯುವ ನೀರಿನ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಿ, ಯಾವುದೇ ಕಾಮಗಾರಿಗಳನ್ನು ಬಾಕಿ ಇಡಬೇಡಿ ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರಬಾಬು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬುಧವಾರ ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ (ಕೆಡಿಪಿ)ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೈಗೊಂಡಿರುವ ಎಲ್ಲಾ ಕಾಮಗಾರಿಗಳನ್ನು ಮಾರ್ಚ್ ಅಂತ್ಯದ ವೇಳೆಗೆ ಯಾವುದೂ ಬಾಕಿ ಇಲ್ಲದಂತೆ ಪೂರ್ಣಗೊಳಿಸಿ. ಸಾರ್ವಜನಿಕರಿಗೆ ಅಗತ್ಯ ನೀರು ಒದಗಿಸಲು ಕ್ರಮಕೈಗೊಳ್ಳಿ. ಸಣ್ಣ ನೀರಾವರಿ ಇಲಾಖೆಯಿಂದ ಕಿಂಡಿ ಅಣೆಕಟ್ಟು ಗಳಿಗೆ ಹಾಕಿರುವ ಹಲಗೆಯಲ್ಲಿ ಕೆಲವು ಕಡೆಗಳಲ್ಲಿ ನೀರು ಸೋರಿಕೆಯಾಗುತ್ತಿದೆ ಇದನ್ನು ಸರಿಪಡಿಸಿ. ಕಾರ್ಕಳದ ಕಾಡುಹೊಳೆ-ಕಡ್ತಲದಲ್ಲಿ ನಿರ್ಮಿಸಿರುವ ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆಯಾಗುತ್ತಿದ್ದು ಕೂಡಲೇ ಸರಿಪಡಿಸಿ, ಅಲ್ಲದೇ ಉದ್ಯಾವರದಲ್ಲಿ ಕಿಂಡಿ ಅಣೆಕಟ್ಟೆಗೆ ಕೂಡಲೇ ಹಲಗೆ ಹಾಕುವಂತೆ ಅಧ್ಯಕ್ಷರು ಸಂಬಂಧಿತ ಇಲಾಖಾಧಿಕಾರಿಗಳಿಗೆ ಆದೇಶಿಸಿದರು.

 ಜಿಲ್ಲೆಯ ಎಲ್ಲಾ ಗ್ರಾಪಂಗಳ ತೆರಿಗೆ ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದ್ದು, ಎಲ್ಲಾ ಪಂಚಾಯತ್‌ಗಳು ಪರಿಷ್ಕೃತ ದರದಲ್ಲಿ ತೆರಿಗೆ ವಸೂಲು ಮಾಡಿ ಮಾರ್ಚ್ ಒಳಗೆ ಸಂಪೂರ್ಣ ಗುರಿ ಸಾಧಿಸುವಂತೆ ತಿಳಿಸಿದ ಅಧ್ಯಕ್ಷರು ಈ ಬಗ್ಗೆ ಎಲ್ಲಾ ತಾಪಂಗಳ ಕಾರ್ಯನಿರ್ವಹಣಾಧಿಕಾರಿಗಳು ನಿಗಾ ವಹಿಸುವಂತೆ ಸೂಚನೆಗಳನ್ನು ನೀಡಿದರು.

ಮರಳಿನ ಕೊರತೆ:   ಜಿಲ್ಲೆಯಲ್ಲಿ ಮರಳಿನ ಕೊರತೆಯಿಂದ ವಸತಿ ನಿರ್ಮಾಣ ಚಟುವಟಿಕೆ ಕುಂಠಿತವಾಗಿದ್ದು, ಮರಳು ಲ್ಯತೆಯ ಕುರಿತಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡುವಂತೆ ಅಧ್ಯಕ್ಷರು ಸೂಚಿಸಿದರು. ಇದಕ್ಕೆ ಉತ್ತರಿಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ, ಜಿಲ್ಲೆಯಲ್ಲಿರುವ ನಾನ್ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ 21 ಬ್ಲಾಕ್‌ಗಳನ್ನು ಲೋಕೋಪಯೋಗಿ, ನಿರ್ಮಿತಿ, ಕೆಆರ್‌ಐಡಿಎಲ್, ಪಿಆರ್‌ಇಡಿ, ಗ್ರಾಪಂ ಸೇರಿದಂತೆ ವಿವಿಧ ಸರಕಾರಿ ಸಂಸ್ಥೆಗಳಿಗೆ ಮರಳುಗಾರಿಕೆ ಮಾಡಲು ಅನುಮತಿ ನೀಡಲಾಗಿದೆ ಎಂದರು.

ಸಿಆರ್‌ಝಡ್ ವ್ಯಾಪ್ತಿಯಲ್ಲಿ 7 ಮರಳು ದಿಬ್ಬಗಳಿಗೆ ಕೆಸಿಝಡ್‌ಎಂಎನಿಂದ ಅನುಮೋದನೆ ದೊರೆತಿದ್ದು, ಇದರಲ್ಲಿ 7,96,522 ಮೆಟ್ರಿಕ್ ಟನ್ ಮರಳು ತೆರವುಗೊಳಿಸಲು ಅನುಮೋದನೆ ದೊರೆತಿದೆ. ಜಿಲ್ಲೆಯ 7 ಸದಸ್ಯರ ಮರಳು ಸಮಿತಿ ಸಭೆಯನ್ನು ಕರೆದು ಶೀಘ್ರದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಅಧಿಕಾರಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ದಿನಕರಬಾಬು, ಈ ಬಗ್ಗೆ ಶೀಘ್ರ ಕ್ರಮಕೈಗೊಂಡು ಸಾರ್ವಜನಿಕರಿಗೆ ಮರಳು ವಿತರಿಸುವಂತೆ ಸೂಚಿಸಿದರು.
ಗ್ರಾಪಂಗಳ ತೆರಿಗೆ ವಸೂಲಾತಿ ಪ್ರಮಾಣ ಕಡಿಮೆ ಇದ್ದು, ವಸೂಲಾದ ತೆರಿಗೆಯನ್ನು ಅದೇ ದಿನ ಜಮೆ ಮಾಡುವಂತೆ ತಿಳಿಸಿದ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ಬಿ. ರೂಪೇಶ್, ತೆರಿಗೆ ವಸೂಲಾತಿಯಲ್ಲಿ ಎಲ್ಲಾ ಗ್ರಾಪಂಗಳು ಸಂಪೂರ್ಣ ಗುರಿ ಸಾಧಿಸುವಂತೆ ತಿಳಿಸಿದರು.

ಗ್ರಾಪಂ ಕಟ್ಟಡಗಳ ಬಾಡಿಗೆ ವಸೂಲಾತಿ ಪ್ರಮಾಣ ಕಡಿಮೆ ಇದ್ದು, ಮಾರ್ಚ್ ಅಂತ್ಯದೊಳಗೆ ಸಂಪೂರ್ಣ ತೆರಿಗೆ ವಸೂಲಾತಿ ನಡೆಸುವಂತೆ ಸಿಇಓ ತಿಳಿಸಿದರು. ಅಲ್ಲದೇ ಎಸ್‌ಸಿಪಿ/ಟಿಎಸ್‌ಪಿ ಯೋಜನೆಗಳಲ್ಲಿ ಪ್ರಗತಿ ಕುಂಠಿತ ವಾದರೆ ಸಂಬಂದಪಟ್ಟ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ಮಂಗನ ಕಾಯಿಲೆ: ಮಂಗನ ಕಾಯಿಲೆ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ರಾಮರಾವ್ ಮಾತನಾಡಿ, ಜಿಲ್ಲೆಯಲ್ಲಿ ಮಂಗನ ಖಾಯಿಲೆ ನಿಯಂತ್ರಣದಲ್ಲಿದೆ. ಈವರೆಗೆ ಮನುಷ್ಯನಲ್ಲಿ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಮಂಗಗಳಲ್ಲಿ ಸೋಂಕು ಪತ್ತೆಯಾದ ಕಡೆಗಳಲ್ಲಿ ಮೆಥಲಿನ್ ಸಿಂಪಡಿಸಿ, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಮಂಗಗಳು ಹೆಚ್ಚು ಇರುವ ಕಡೆಗಳಲ್ಲಿ ಪ್ರವಾಸಿಗರು ಹೋಗದಂತೆ ಬ್ಯಾನರ್‌ಗಳನ್ನು ಹಾಕಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮುಂದಿನ ದಿನ ಗಳಲ್ಲಿ ನಿರ್ಮಿಸಲಾಗುವ ಶೌಚಾಲಯಗಳಲ್ಲಿ ಟ್ವಿನ್ ಪಿಟ್ ಟಾಯ್ಲೆಟ್ ನಿರ್ಮಿಸ ಬೇಕಿದ್ದು, ಈ ಕುರಿತಂತೆ ಎಲ್ಲಾ ಗ್ರಾಪಂ ಮತ್ತು ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದು ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹೇಳಿದರು.

ಜಿಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಶಶಿಕಾಂತ್ ಪಡುಬಿದ್ರೆ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಎಸ್. ಕೋಟ್ಯಾನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X