ನೂತನ ಜವಳಿ ನೀತಿಯ ಕುರಿತು ತರಬೇತಿ
ಉಡುಪಿ, ಫೆ.27: ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಉಡುಪಿ ಇವರ ಸಹಯೋಗದಲ್ಲಿ ನೂತನ ಜವಳಿ ನೀತಿ ಹಾಗೂ ಇಲಾಖೆಯ ವಿವಿಧ ಯೋಜನೆಗಳ ಕುರಿತು 2 ದಿನಗಳ ಉದ್ಯಮ ಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಮಾ.1 ಮತ್ತು 2ರಂದು ಶಿವಳ್ಳಿ ಕೈಗಾರಿಕಾ ಪ್ರದೇಶದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದಲ್ಲಿ ನಡೆಯಲಿದೆ.
ಮಾ.1ರಂದು ಬೆಳಗ್ಗೆ 11:00 ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
Next Story





