ಕಾರ್ಮಿಕ ಸಮ್ಮಾನ ಪ್ರಶಸ್ತಿಗೆ ಆಯ್ಕೆ
ಉಡುಪಿ, ಫೆ. 27:ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಜಿಲ್ಲಾ ಮಟ್ಟದ ಕಾರ್ಮಿಕ ಸಮ್ಮಾನ ದಿನಾಚರಣೆ ಮಾ.1ರಂದು ಬೆಳಗ್ಗೆ 10:30ಕ್ಕೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಅಸಂಘಟಿತ ವಲಯದಲ್ಲಿ ವಿಶೇಷ ಸಾಧನೆ ಮಾಡಿದ ಕಾರ್ಮಿಕರ ಸಮ್ಮಾನ ಪ್ರಶಸ್ತಿಗೆ ವಿವಿಧ ವರ್ಗಗಳ ಕಾರ್ಮಿಕರನ್ನು ಆಯ್ಕೆ ಮಾಡಿದ್ದು, ಪ್ರತಿಯೊಂದು ವೃತ್ತಿಯಲ್ಲಿ ಒಬ್ಬ ಕಾರ್ಮಿಕನಿಗೆ ‘ಶ್ರಮ ಸಮ್ಮಾನ’ ಪ್ರಶಸ್ತಿಯಾಗಿ 10,000 ರೂ. ಹಾಗೂ 10 ಕಾರ್ಮಿಕರಿಗೆ ತಲಾ 1,000 ರೂ. ನಗದು ಪುರಸ್ಕಾರ, ಸ್ಮರಣಿಕೆ ಹಾಗೂ ಶ್ರಮ ಸಮ್ಮಾನ ಪ್ರಮಾಣ ಪತ್ರ ನೀಡಲಾಗುವುದು.
ಇದಕ್ಕಾಗಿ ಅಸಂಘಟಿತ ವಲಯದಲ್ಲಿ ವಿಶೇಷ ಸಾಧನೆ ಮಾಡಿದ ಕಾರ್ಮಿಕರನ್ನು ಆಯ್ಕೆ ಮಾಡಲಾಗಿದೆ. ವಿಶೇಷ ಸಾಧನೆಗಳಿಲ್ಲದಿದ್ದಲ್ಲಿ ಎಲ್ಲಾ ವರ್ಗಗಳ ಕಾರ್ಮಿಕರಲ್ಲಿ 60 ವರ್ಷದೊಳಗಿನ ಕಾರ್ಮಿಕರು, ವೃತ್ತಿಯಲ್ಲಿ ಹೆಚ್ಚು ಅನುವವುಳ್ಳ ಕಾರ್ಮಿಕರು, ಮಹಿಳೆಯರು, ಅಲ್ಪಸಂಖ್ಯಾತರು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನಾಧರಿಸಿ ಕಾರ್ಮಿಕರನ್ನು ಆಯ್ಕೆ ಮಾಡಲಾಗಿದೆ ಎಂದು ಕಾರ್ಮಿಕ ಇಲಾಖೆಯ ಪ್ರಕಟಣೆ ತಿಳಿಸಿದೆ.





