ಗಾಂಜಾ ಸೇವನೆ: ಆರೋಪಿ ಬಂಧನ
ಮಂಗಳೂರು, ಫೆ.27: ಕಸಬಾ ಬೆಂಗ್ರೆಯಲ್ಲಿ ಗಾಂಜಾ ಸೇವಿಸುತ್ತಿದ್ದ ಆರೋಪದಲ್ಲಿ ಯುವಕನನ್ನು ಬುಧವಾರ ಪಣಂಬೂರು ಪೊಲೀಸರು ಬಂಧಿಸಿದ್ದಾರೆ.
ಕಸಬಾ ಬೆಂಗ್ರೆ ನಿವಾಸಿ ಮೊಯಿದ್ದೀನ್ ಶಫೀಜ್(19) ಬಂಧಿತ ಆರೋಪಿ. ಈ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಆಕ್ಟ್‌ನಂತೆ ಪ್ರಕರಣ ದಾಖಲಾಗಿದೆ.
ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ್ ಗೌಡ ಮಾರ್ಗದರ್ಶನದಂತೆ ಪಣಂಬೂರು ಠಾಣಾ ಪೊಲೀಸ್ ಇನ್‌ಸ್ಪೆಕ್ಟರ್ ರಫೀಕ್ ಕೆ.ಎಂ. ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್ಸೈ ಉಮೇಶ್ ಕುಮಾರ್ ಎಂ.ಎನ್. ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
Next Story





