ರಾಷ್ಟ್ರದ ಭದ್ರತೆಗಾಗಿ ಒಗ್ಗಟ್ಟು ಪ್ರದರ್ಶಿಸಬೇಕು: ಎಚ್.ಡಿ ಕುಮಾರಸ್ವಾಮಿ

ಹಾಸನ ಫೆ.27: ರಾಷ್ಟ್ರದ ಭದ್ರತೆ ವಿಷಯದಲ್ಲಿ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲೇಬೇಕು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ಚಾಮಿ ಅವರು ತಿಳಿಸಿದ್ದಾರೆ.
ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರದ ಭದ್ರತೆ ವಿಚಾರದಲ್ಲಿ ಎಲ್ಲಾ ಒಂದಾಗಲೇಬೇಕು. ದೇಶದ ಗಡಿಯಲ್ಲಿನ ಉದ್ವಿಗ್ನತೆ ಹಿನ್ನಲೆಯಲ್ಲಿ ರಾಜ್ಯದಲ್ಲೂ ಭದ್ರತಾ ವ್ಯವಸ್ಥೆಯನ್ನು ಇನ್ನಷ್ಟು ಜಾಗ್ರತೆಗೊಳಿಸಲಾಗಿದೆ. ಎಲ್ಲಾ ಸೂಕ್ಷ್ಮ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ ಎಂದರು.
ಜಿಲ್ಲೆಯ ತೆಂಗು ಬೆಳೆ ಪುನಶ್ಚೇತನಕ್ಕೆ ಕ್ರಮವಹಿಸಲಾಗಿದ್ದು, ಪ್ರತಿ ಮರಕ್ಕೆ 400 ರೂ. ಗಳಂತೆ ಸುಮಾರು 200 ಕೋಟಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದರು.
Next Story





