Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 10 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ...

10 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ: ಮುಖ್ಯಮಂತ್ರಿ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ28 Feb 2019 7:58 PM IST
share
10 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಫೆ.28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಸರಕಾರದ ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡು, 94 ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ 10 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಗುರುವಾರ ಕಂದಾಯ ಇಲಾಖೆಯು ಬೆಂಗಳೂರು ಜಿಲ್ಲಾಡಳಿತದ ವತಿಯಿಂದ ನಗರದ ಅರಮನೆ ಮೈದಾನದಲ್ಲಿರುವ ತ್ರಿಪುರ ವಾಸಿನಿಯಲ್ಲಿ ಆಯೋಜಿಸಿದ್ದ 10 ಸಾವಿರ ಹಕ್ಕು ಪತ್ರಗಳ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮದು ರೈತರ ಪರ, ಬಡವರ ಪರವಾದ ಸರಕಾರ. ಈ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ವೇಳೆ 2007ರಲ್ಲಿ ಬಾಬುಜಗಜೀವನ್‌ರಾಮ್ ಜನ್ಮದಿನಾಚರಣೆಯಂದು ಬಡವರಿಗೆ ಹಕ್ಕು ಪತ್ರ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು. ಈ ಸರಕಾರದಲ್ಲಿಯೂ ಬಡವರು 94 ಸಿ, 94 ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಮಾ.31ರವರೆಗೆ ವಿಸ್ತರಿಸಲಾಗಿದೆ ಎಂದು ಅವರು ಹೇಳಿದರು.

ಬೆಂಗಳೂರು ನಗರದಲ್ಲಿ ಬಡ ಕುಟುಂಬಗಳಿಗೆ ಒಂದು ಲಕ್ಷ ಮನೆಗಳನ್ನು ನಿರ್ಮಿಸಲು 1600 ಎಕರೆ ಸರಕಾರಿ ಭೂಮಿಯನ್ನು ರಾಜೀವ್‌ಗಾಂಧಿ ವಸತಿ ನಿಗಮಕ್ಕೆ ವರ್ಗಾಯಿಸಲಾಗಿದೆ. ಒಂದು ಲಕ್ಷ ಮನೆಗಳಿಗಾಗಿ ಸುಮಾರು 48 ಸಾವಿರ ಕುಟುಂಬಗಳು ಅರ್ಜಿ ಸಲ್ಲಿಸಿವೆ. ಆಟೋ ಚಾಲಕರು, ಬೀದಿ ವ್ಯಾಪಾರಿಗಳು, ಗಾರ್ಮೆಂಟ್ಸ್ ನೌಕರರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

1600 ಎಕರೆ ಭೂಮಿಯೊಂದಿಗೆ ರಾಜ್ಯ ಸರಕಾರದ ವತಿಯಿಂದ ತಲಾ ಒಂದು ಮನೆಗೆ 1.50 ಲಕ್ಷ ರೂ., ಕೇಂದ್ರ ಸರಕಾರದಿಂದ 1.50 ಲಕ್ಷ ರೂ., ಫಲಾನುಭವಿ ಮೂಲಕ 1 ಲಕ್ಷ ರೂ.ಗಳನ್ನು ಪಡೆದು, ಬ್ಯಾಂಕುಗಳಿಂದ 3-4 ಲಕ್ಷರೂ.ಗಳನ್ನು ಸರಕಾರದ ಭದ್ರತೆಯೊಂದಿಗೆ ಹಣ ಪಡೆದು ಈ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದರು.

ಬೆಂಗಳೂರು ನಗರದಲ್ಲಿ ರಸ್ತೆ, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯವಿರುವ ಮೂಲಭೂತ ಸೌಕರ್ಯ ಕಲ್ಪಿಸಲು ಸರಕಾರ ಬದ್ಧವಾಗಿದೆ. ಪೆರಿಫೆರಲ್ ರಸ್ತೆಯನ್ನು 17 ಸಾವಿರ ಕೋಟಿ ರೂ.ವೆಚ್ಚದಲ್ಲಿ ಚಾಲನೆ ನೀಡಲು ನಿರ್ಧರಿಸಲಾಗಿದೆ. ಬೆಂಗಳೂರು ನಗರದ ಒಳಭಾಗದಲ್ಲಿ 102 ಕಿ.ಮೀ.ಎಲಿವೇಟೆಡ್ ರಸ್ತೆಯನ್ನು 24 ಸಾವಿರ ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಮೊದಲ ಹಂತದಲ್ಲಿ 9 ಸಾವಿರ ಕೋಟಿ ರೂ.ವೆಚ್ಚದಲ್ಲಿ ಚಾಲನೆ ನೀಡಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಮೆಟ್ರೋ ರೈಲು ಯೋಜನೆಯನ್ನು ಇಡೀ ನಗರಕ್ಕೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಉಪ ನಗರ ರೈಲು ಯೋಜನೆಯನ್ನು ಕೇಂದ್ರ ಸರಕಾರದೊಂದಿಗೆ ಒಡಂಬಡಿಕೆ ಮಾಡಿಕೊಂಡು, ನಮ್ಮ ಪಾಲು 11,500 ಕೋಟಿ ರೂ., ಕೇಂದ್ರ ಸರಕಾರದ ಪಾಲು 11,500 ಕೋಟಿ ರೂ.ಗಳನ್ನು ಬಳಸಿಕೊಂಡು ಈ ಕಾರ್ಯಕ್ರಮ ಅನುಷ್ಠಾನ ಮಾಡಲು ಮುಂದಾಗಿದ್ದೇವೆ ಎಂದು ಅವರು ಹೇಳಿದರು.

ಬಡವರ ಬಂಧು ಎಂಬ ಯೋಜನೆಯನ್ನು ಜಾರಿಗೆ ತಂದು ರಾಜ್ಯದಲ್ಲಿರುವ 4.50 ಲಕ್ಷ ಬೀದಿ ವ್ಯಾಪಾರಿಗಳಿಗೆ 1 ಸಾವಿರ ರೂ.ಗಳಿಂದ 10 ಸಾವಿರ ರೂ.ಗಳವರೆಗೆ ಬಡ್ಡಿ ರಹಿತ ಸಾಲ ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಹಕ್ಕು ಪತ್ರಕ್ಕಾಗಿ ಆಗ್ರಹಿಸಿ ಬಡವರು, ದಲಿತರು ಹಲವಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಹೋರಾಟಕ್ಕೆ ಇಂದು ನ್ಯಾಯ ಸಿಕ್ಕಿದೆ. ಗ್ರಾಮೀಣ ಪ್ರದೇಶದಲ್ಲಿ 94 ಸಿ ಅಡಿಯಲ್ಲಿ ಈವರೆಗೆ 1,11,800 ಜನರಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗಿದೆ. ನಗರ ಪ್ರದೇಶದಲ್ಲಿ 45,193 ಮಂದಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, 31,140 ಪ್ರಕರಣ ವಿಲೇವಾರಿಗೆ ಬಾಕಿಯಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ.ಮುನಿರಾಜು, ರಾಜ್ಯಸಭಾ ಸದಸ್ಯ ಡಿ.ಕುಪೇಂದ್ರರೆಡ್ಡಿ, ಶಾಸಕರಾದ ರೋಷನ್‌ ಬೇಗ್, ಎಸ್.ಟಿ.ಸೋಮಶೇಖರ್, ಮುನಿರತ್ನ, ಆರ್.ಮಂಜುನಾಥ, ಪಿ.ಆರ್.ರಮೇಶ್, ರಿಝ್ವನ್ ಅರ್ಶದ್, ಬಿ.ಎಸ್.ಸುರೇಶ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ರಾಜ್‌ಕುಮಾರ್ ಖತ್ರಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯ್ ಶಂಕರ್ ಉಪಸ್ಥಿತರಿದ್ದರು.

ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮವು 12.32 ಕೋಟಿ ರೂ.ಗಳ ನಿವ್ವಳ ಲಾಭ ಗಳಿಸಿರುವ ಹಿನ್ನೆಲೆಯಲ್ಲಿ ನಿಗಮದ ಅಧ್ಯಕ್ಷ ಬಿ.ಎಸ್.ಸುರೇಶ್ ಇದೇ ವೇಳೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2.50 ಕೋಟಿ ರೂ.ಗಳ ಚೆಕ್ ಅನ್ನು ಹಸ್ತಾಂತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X