ಉಡುಪಿ: ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ವಸ್ತು ಪ್ರದರ್ಶನ

ಉಡುಪಿ, ಫೆ. 28: ರಾಜ್ಯ ಸರಕಾರವು ಕಳೆದ 7 ತಿಂಗಳ ಅವಧಿಯಲ್ಲಿ ರೂಪಿಸಿದ ಅಭಿವೃದ್ಧಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿ, ಸಾರ್ವಜನಿಕರು ಈ ಯೋಜನೆಗಳ ಪ್ರಯೋಜನ ಪಡೆಯುವ ನಿಟ್ಟಿನಲ್ಲಿ, ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತ ವಸ್ತು ಪ್ರದರ್ಶನ ವನ್ನು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಆಯೋಜಿಸಲಾಗಿದೆ.
ಪ್ರದರ್ಶನವನ್ನು ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದ ಆವರಣದಲ್ಲಿ ಮಾ.1ರಿಂದ 3ರವರೆಗೆ ಏರ್ಪಡಿಸಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಸ್ತು ಪ್ರದರ್ಶನ ವೀಕ್ಷಿಸಿ, ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಯೋಜನ ಪಡೆಯುವಂತೆ ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಷಾ ಕೋರಿದ್ದಾರೆ.
Next Story





