ಮತದಾನ ಜಾಗೃತಿ- ಚಿತ್ರಕಲಾ ಶಿಬಿರ
ಉಡುಪಿ, ಫೆ. 28: ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಉಡುಪಿ ಜಿಲ್ಲೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಚಿತ್ರಕಲಾ ಮಂದಿರ ಕಲಾ ವಿದ್ಯಾಲಯ ಉಡುಪಿ ಹಾಗೂ ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಗಳ ಅಂಗವಾಗಿ ಮಾ. 2ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್‌ನಲ್ಲಿ ಒಂದು ದಿನದ ಚಿತ್ರಕಲಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿಂಧು ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





