ಚುನಾವಣಾ ಆಯೋಗದ ಆದೇಶದ ವಿರುದ್ಧ ದಿನಕರನ್ ಅರ್ಜಿ ದಿಲ್ಲಿ ಹೈಕೋರ್ಟ್‌ನಲ್ಲಿ ವಜಾ
ಎಐಎಡಿಎಂಕೆಯ ‘ಎರಡು ಎಲೆಗಳ ಚಿಹ್ನೆ

ಹೊಸದಿಲ್ಲಿ,ಫೆ.28: ‘ಎರಡು ಎಲೆಗಳ ’ ಚುನಾವಣಾ ಚಿಹ್ನೆಯನ್ನು ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ.ಪನ್ನೀರಸೆಲ್ವಂ ನೇತೃತ್ವದ ಎಐಎಡಿಎಂಕೆ ಬಣವು ಬಳಸಿಕೊಳ್ಳಲು ಅವಕಾಶ ನೀಡಿದ್ದ ಚುನಾವಣಾ ಆಯೋಗದ ನಿರ್ಧಾರವನ್ನು ದಿಲ್ಲಿ ಉಚ್ಚ ನ್ಯಾಯಾಲಯವು ಗುರುವಾರ ಎತ್ತಿ ಹಿಡಿದಿದೆ. ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಮಾಜಿ ಎಐಎಡಿಎಂಕೆ ನಾಯಕ ಟಿಟಿವಿ ದಿನಕರನ್ ಮತ್ತು ವಿ.ಕೆ.ಶಶಿಕಲಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಅದು ವಜಾಗೊಳಿಸಿದೆ.
ದಿನಕರನ್ ಬಣವು ಅಮ್ಮಾ ಮಕ್ಕಳ್ ಮುನ್ನೇತ್ರ ಕಳಗಂ ಹೆಸರಿನಿಂದ ಕರೆಯಲ್ಪಡುತ್ತಿದೆ.
ಚುನಾವಣಾ ಆಯೋಗ ಮತ್ತು ಉಭಯ ಬಣಗಳ ವಾದಗಳನ್ನು ಆಲಿಸಿದ ಬಳಿಕ ಫೆ.8ರಂದು ಉಚ್ಚ ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.
Next Story





