ದ್ವಿತೀಯ ಪಿಯುಸಿ ಪರೀಕ್ಷೆ: ಸಾಮಾನ್ಯ, ವೇಗದೂತ ಬಸ್ಸುಗಳಲ್ಲಿ ಉಚಿತ ಪ್ರಯಾಣ
ಮಂಗಳೂರು, ಫೆ.28: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಮಾ.1ರಿಂದ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ವಾಸಸ್ಥಳಕ್ಕೆ ಹಿಂದಿರುಗುವಾಗ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿದೆ.
ಹಾಗಾಗಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ವಿದ್ಯಾರ್ಥಿಗಳು ಇದರ ಸೌಲಭ್ಯ ಪಡೆಯಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





