ನಿಷೇಧಿತ ಮಾದಕ ವಸ್ತು ಸಾಗಾಟ: ಚೊಕ್ಕಬೆಟ್ಟುವಿನ ಯುವಕನ ಸೆರೆ
ಮಂಗಳೂರು, ಫೆ.28: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಚೊಕ್ಕಬೆಟ್ಟು ನಿವಾಸಿ ಮುಹಮ್ಮದ್ ಶಫೀಕ್(21) ಬಂಧಿತ ಆರೋಪಿ.
ಈತನಿಂದ 60 ಗ್ರಾಂ ತೂಕದ 1,80,000 ರೂ. ಮೌಲ್ಯದ ಮಾದಕ ವಸ್ತು ಹಾಗೂ ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯು ಮಾದಕ ವಸ್ತು ಅನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಮಂಗಳೂರು ಸಿಸಿಬಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಯನ್ನು ಹೆಚ್ಚಿನ ತನಿಖೆಗಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್‌ಸ್ಪೆಕ್ಟರ್ ಶಾಂತಾರಾಮ, ಪಿಎಸ್ಸೈ ಶ್ಯಾಮ್ ಸುಂದರ್, ಕಬ್ಬಾಳ್ ರಾಜ್ ಹಾಗೂ ಸಿಬ್ಬಂದಿ ವರ್ಗವು ಪಾಲ್ಗೊಂಡಿತ್ತು.
Next Story





