ಯೆನೆಪೊಯ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನ-2019

ಮಂಗಳೂರು, ಫೆ.28: ಯೆನೆಪೊಯ (ಪರಿಗಣಿತ ವಿಶ್ವವಿದ್ಯಾನಿಲಯ)ದ ದೇರಳಕಟ್ಟೆಯ ಕಾಲೇಜು ಆವರಣದಲ್ಲಿ ರಾಷ್ಟ್ರೀಯ ವಿಜ್ಞಾನ ದಿನ-2019ನ್ನು ಆಯೋಜಿಸಲಾಯಿತು.
ಈ ವರ್ಷದ ವಿಷಯ, ಜನರಿಗಾಗಿ ವಿಜ್ಞಾನ ಮತ್ತು ವಿಜ್ಞಾನಕ್ಕಾಗಿ ಜನರು ಆಗಿತ್ತು. ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು ಇದರ ನ್ಯಾನೊ ವಿಜ್ಞಾನ ಮತ್ತು ಇಂಜಿನಿಯರಿಂಗ್ ಕೇಂದ್ರದ ಮುಖ್ಯಸ್ಥ ಮತ್ತು ಉಪನ್ಯಾಸಕ ಡಾ. ನವಕಾಂತ ಭಟ್ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿಜ್ಞಾನದ ಅಭಿವೃದ್ಧಿಗಾಗಿ ವೈಯಕ್ತಿಕ ಅಹಂ ಅನ್ನು ತ್ಯಜಿಸಬೇಕು. ವಿಜ್ಞಾನವನ್ನು ಸಮಾಜಕ್ಕೆ ತಲುಪಿಸುವ ಕಾರ್ಯದಲ್ಲಿ ತೊಡಗಬೇಕು ಎಂದು ಕರೆ ನೀಡಿದರು.
ವಿವಿಧ ಶೈಕ್ಷಣಿಕ ಸಂಸ್ಥೆಗಳ 200ಕ್ಕಿಂತಲೂ ಅಧಿಕ ವೈದ್ಯರು, ವಿಜ್ಞಾನಿಗಳು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಹಾಯಕ ಕುಲಪತಿ ಫರ್ಹದ್ ಯೆನೆಪೊಯ ಕಾರ್ಯಕ್ರಮದ ಗೌರವ ಅತಿಥಿಯಾಗಿದ್ದರು. ಉಪಕುಲಪತಿ ಡಾ.ಎಂ.ವಿಜಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಡಾ. ಕೆ.ಗಂಗಾಧರ ಸೋಮಯಾಜಿ, ಪ್ರೊ.ಬಿ.ಎಸ್ ರಾವ್ ಮತ್ತು ಪ್ರೊ.ಅಬ್ದುಲ್ ರಹ್ಮಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯೆನೆಪೊಯ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕಿ ಡಾ. ರೇಖಾ ಪಿ.ಡಿ ಮುಖ್ಯ ಅತಿಥಿಗಳನ್ನು ಸನ್ಮಾನಿಸಿದರು.







