Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದ ಅಭಿವೃದ್ಧಿಗೆ ಕಾರ್ಮಿಕರ ಶ್ರಮವೇ...

ದೇಶದ ಅಭಿವೃದ್ಧಿಗೆ ಕಾರ್ಮಿಕರ ಶ್ರಮವೇ ಮೂಲ ಕಾರಣ: ಈಶ್ವರ್‌ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ1 March 2019 7:30 PM IST
share
ದೇಶದ ಅಭಿವೃದ್ಧಿಗೆ ಕಾರ್ಮಿಕರ ಶ್ರಮವೇ ಮೂಲ ಕಾರಣ: ಈಶ್ವರ್‌ ಖಂಡ್ರೆ

ಬೆಂಗಳೂರು, ಮಾ.1: ಇವತ್ತು ಭಾರತ ಸಾಮಾಜಿಕ, ಆರ್ಥಿಕ ಹಾಗೂ ಆಧುನೀಕರಣ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ ಆಮೂಲಾಗ್ರವಾಗಿ ಮುಂದುವರೆದಿರುವುದಕ್ಕೆ ಕಾರ್ಮಿಕರ ಶ್ರಮವೇ ಮೂಲ ಕಾರಣವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದರು.

ಶುಕ್ರವಾರ ದೇವರಾಜ ಅರಸು ಭವನದಲ್ಲಿ ಕೆಪಿಸಿಸಿ ಕಾರ್ಮಿಕ ವಿಭಾಗದ ವತಿಯಿಂದ ಆಯೋಜಿಸಿದ್ದ ಬೃಹತ್ ಕಾರ್ಮಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರಗಳ ಅಭಿವೃದ್ದಿ, ರಾಷ್ಟ್ರೀಯ ಹೆದ್ದಾರಿಗಳು, ಬೃಹತ್ ಕಟ್ಟಡಗಳು, ಕಾರ್ಖಾನಗೆಳ ಅಭಿವೃದ್ಧಿಯ ಹಿಂದೆ ಕಾರ್ಮಿಕರ ಶ್ರಮವಿದೆ ಎಂದು ತಿಳಿಸಿದರು.

ಇವತ್ತು ಅಸಂಘಟಿತ ಕಾರ್ಮಿಕರ ದಿನಾಚರಣೆ ಆಯೋಜಿಸಿರುವುದು ಮಹತ್ವದಾಗಿದೆ. ಈ ದಿನವನ್ನು ಕಾರ್ಮಿಕರ ಸ್ಥಿತಿ-ಗತಿ ಏನಿದೆ ಎಂದು ಚಿಂತನೆ ನಡೆಸಬೇಕು. ಜೊತೆಗೆ ಎಲ್ಲಾ ವರ್ಗದ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ಉತ್ತಮವಾದ ಯೋಜನೆಗಳನ್ನು ಹಾಕಿಕೊಳ್ಳಬೇಕಿದೆ ಎಂದು ಅವರು ಹೇಳಿದರು.

12ನೆ ಶತಮಾನದಲೇ ಕಾಯಕ ಯೋಗಿ ಬಸವಣ್ಣ ಕಾಯಕವೇ ಕೈಲಾಸ ಎಂದು ಸಂದೇಶ ಸಾರಿದ್ದು, ಅವರ ಚಿಂತನೆಗಳನ್ನು ಕಾಂಗ್ರೆಸ್ ಸಿದ್ಧಾಂತವಾಗಿ ರೂಪಿಸಿಕೊಂಡಿದೆ. ಹೀಗಾಗಿ ಕಾರ್ಮಿಕರ ಅಭಿವೃದ್ಧಿಗೆ ಮತ್ತಷ್ಟು ಕಾರ್ಯಕ್ರಮಗಳನ್ನು ರೂಪಿಸಲು ಬದ್ಧರಾಗಿದ್ದೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಎಸ್.ಎಸ್.ಪ್ರಕಾಶಂ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕೆಪಿಸಿಸಿ ಕಾರ್ಮಿಕರ ಘಟಕ ನಿರಂತರವಾಗಿ ಶ್ರಮಿಸುತ್ತಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಕಾರ್ಮಿಕ ಘಟಕ ಕಳೆದ 25 ವರ್ಷಗಳಿಂದ ಉತ್ತಮವಾಗಿ ಸೇವೆ ಸಲ್ಲಿಸುತ್ತಿದೆ. ರಾಜ್ಯದಲ್ಲಿ 14ಲಕ್ಷ ಜನ ಕಾರ್ಮಿಕ ವಿಭಾಗದ ಸದಸ್ಯರಾಗಿದ್ದಾರೆ. ನಾನಾ ಕಾರ್ಮಿಕ ವಿಭಾಗಗಳಿಂದ ಹಾಗೂ ಅಸಂಘಟಿತ ಕಾರ್ಮಿಕರು ಸೇರಿದಂತೆ ರಾಜ್ಯದ 30 ಜಿಲ್ಲೆಗಳು, 176 ತಾಲೂಕುಗಳಲ್ಲಿ ಹಾಗೂ 198 ಬಿಬಿಎಂಪಿ ವಾರ್ಡ್‌ಗಳಲ್ಲಿ ಕಾರ್ಮಿಕರ ಘಟಕ ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.

ಸಮಾವೇಶದಲ್ಲಿ ಪರಿಷತ್ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಮಾಜಿ ಮುಖ್ಯ ಸಚೇತಕ ಆರ್.ವಿ.ವೆಂಕಟೇಶ್, ಓಬಿಸಿ ವಿಭಾಗದ ಅಧ್ಯಕ್ಷ ಲಕ್ಷ್ಮಿ ನಾರಾಯಣ್ ಸೇರಿದಂತೆ ಪ್ರಮುಖರಿದ್ದರು.

ಕಾರ್ಮಿಕರಿಗೆ 2 ಟಿಕೆಟ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಬ್ಬರು ಕಾರ್ಮಿಕ ಮುಖಂಡರಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಮೂಲಕ ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡಲಿ. ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಮಾತನಾಡಲಿದ್ದೇನೆ.
-ಎಸ್.ಎಸ್.ಪ್ರಕಾಶಂ, ಅಧ್ಯಕ್ಷ, ಕೆಪಿಸಿಸಿ ಕಾರ್ಮಿಕ ವಿಭಾಗ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X