Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಾರಿ ಢಿಕ್ಕಿ ಹೊಡೆಸಿ ಓರ್ವನ ಸಾವು...

ಲಾರಿ ಢಿಕ್ಕಿ ಹೊಡೆಸಿ ಓರ್ವನ ಸಾವು ಪ್ರಕರಣ: ಆರೋಪಿಗೆ ಎರಡು ವರ್ಷ ಜೈಲು ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ1 March 2019 10:21 PM IST
share

ಮಂಗಳೂರು, ಮಾ.1: ‘ಅಪಘಾತ ಸಂಭವಿಸಿ ಮಾನವ ಹತ್ಯೆ ಆಗಬಹುದು’ ಎಂದು ಅರಿವಿದ್ದರೂ ಮದ್ಯ ಸೇವಿಸಿ ನಿರ್ಲಕ್ಷದಿಂದ ಲಾರಿ ಚಲಾಯಿಸಿ ಅಪಘಾತ ಎಸಗಿ ಓರ್ವರ ಸಾವಿಗೆ ಕಾರಣವಾದ ಅಪರಾಧಿಗೆ ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಮಧ್ಯಪ್ರದೇಶದ ಮುಕೇಶ್ ಯಾದವ್(33) ಶಿಕ್ಷೆಗೊಳಗಾದವರು.

ಈತ ಮದ್ಯ ಸೇವನೆ ಮಾಡಿ ನಿರ್ಲಕ್ಷದಿಂದ ಲಾರಿ ಚಲಾಯಿಸಿ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಪಿಕಪ್‌ನಲ್ಲಿದ್ದ ರಾಮಚಂದ್ರ ಠಾಕೂರು (41) ಎಂಬವರು ಮೃತಪಟ್ಟಿದ್ದರು.

ಪ್ರಕರಣದ ಹಿನ್ನೆಲೆ: 2015ರ ಜೂನ್ 19ರಂದು ಸಂಜೆ 5 ಗಂಟೆಗೆ ಮುಕೇಶ್ ಯಾದವ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರು ಕಡೆಯಿಂದ ಲಾರಿ ಚಲಾಯಿಸಿಕೊಂಡು ಬಂದಿದ್ದಾನೆ. ಬೈಕಂಪಾಡಿ ಜೋಕಟ್ಟೆ ಕ್ರಾಸ್ ಬಳಿ ಸಂಚಾರ ಪೊಲೀಸರ ಸೂಚನೆ ಮೇರೆಗೆ ನಿಲ್ಲಿಸಿದ್ದ ಕಾರಿನ ಹಿಂಬದಿಗೆ ಲಾರಿ ಢಿಕ್ಕಿ ಹೊಡೆದಿದೆ. ಲಾರಿ ನಿಲ್ಲಿಸುವಂತೆ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಮುಂದಕ್ಕೆ ಚಲಾಯಿಸಿಕೊಂಡು ಹೋಗಿ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮುಂಗಾರು ವೃತ್ತದಲ್ಲಿ ಎದುರಿನಿಂದ ಬಂದ ಪಿಕಪ್‌ಗೆ ಢಿಕ್ಕಿ ಹೊಡೆದಿದ್ದಾನೆ.

ಈ ಸಂದರ್ಭ ಪಿಕಪ್ ಪಲ್ಟಿಯಾಗಿದೆ. ಅದರಡಿಗೆ ಸಿಲುಕಿದ ರಾಮಚಂದ್ರ ಠಾಕೂರು ಗಂಭೀರ ಗಾಯಗೊಂಡು ಮರುದಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಪೊಲೀಸರು ಹಾಗೂ ಸಾರ್ವಜನಿಕರು ಆರೋಪಿ ಲಾರಿ ಚಾಲಕ ಮುಕೇಶ್ ಯಾದವ್‌ನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ಕರೆ ತಂದಿದ್ದರು. ವೈದ್ಯರು ಪರೀಕ್ಷಿಸಿದಾಗ ಆತ ಮದ್ಯ ಸೇವಿಸಿರುವುದು ದೃಢಪಟ್ಟಿತು. ಈ ಬಗ್ಗೆ ಸುರತ್ಕಲ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಇನ್‌ಸ್ಪೆಕ್ಟರ್ ಮಂಜುನಾಥ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಐಪಿಸಿ ಸೆಕ್ಷನ್ 279 ಸಾರ್ವಜನಿಕ ರಸ್ತೆಯಲ್ಲಿ ನಿರ್ಲಕ್ಷದ ಚಾಲನೆಗೆ 3 ತಿಂಗಳು ಜೈಲು, ಐಪಿಸಿ ಸೆಕ್ಷನ್ 304 ಅಪಘಾತವಾಗಿ ಮಾನವ ಹತ್ಯೆ ಆಗಬಹು ದೆಂದು ಅರಿವಿದ್ದರೂ ಲಾರಿ ಚಲಾಯಿಸಿ ಓರ್ವನ ಸಾವಿಗೆ ಕಾರಣವಾಗಿರುವುದಕ್ಕೆ 2 ವರ್ಷ ಜೈಲು ಶಿಕ್ಷೆ, ಮೋಟಾರು ವಾಹನ ಕಾಯ್ದೆ 134ಎಬಿ ಅಡಿಯಲ್ಲಿ 1 ತಿಂಗಳು ಶಿಕ್ಷೆ ವಿಧಿಸಿ ನ್ಯಾಯಾಧೀಶ ಮಲ್ಲನಗೌಡ ತೀರ್ಪು ನೀಡಿದ್ದಾರೆ.

ಮೃತಪಟ್ಟ ರಾಮಚಂದ್ರ ಠಾಕೂರು ಅವರನ್ನು ಅವಲಂಬಿತ ಕುಟುಂಬಕ್ಕೆ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ಪಡೆಯಲು ಅರ್ಹರು ಎಂದು ಶಿಫಾರಸು ಮಾಡಿದ್ದಾರೆ. ಪ್ರಕರಣದಲ್ಲಿ ಒಟ್ಟು 20 ಸಾಕ್ಷಿ ವಿಚಾರಣೆ ನಡೆಸಲಾಗಿತ್ತು. ಸರಕಾರದ ಪರವಾಗಿ ಹರಿಶ್ಚಂದ್ರ ಉದ್ಯಾವರ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X