ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ: ಮಾಜಿ ಸಚಿವ ಮಹದೇವಪ್ಪ ಸ್ಪಷ್ಟನೆ

ಮೈಸೂರು,ಮಾ.1: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಯಾವುದೇ ಕ್ಷೇತ್ರದಲ್ಲೂ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದರು.
ಮೈಸೂರಿನಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಹೆಸರು ಹಲವು ಕ್ಷೇತ್ರಗಳಲ್ಲಿ ಕೇಳಿಬರುತ್ತಿದೆ. ನನ್ನ ಸ್ಪರ್ಧೆ ವಿಚಾರ ನಮ್ಮ ಪಕ್ಷದ ಹೈಕಮಾಂಡ್‍ಗೆ ಬಿಟ್ಟಿದ್ದು, ಸದ್ಯಕ್ಕೆ ನಾನು ಚುನಾವಣೆಗೆ ಸ್ಪಧೆ ಮಾಡುವ ಅಸೆ ಇಲ್ಲ, ನಾನು ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡುತ್ತೇನೆ, ನಾನು ಪಕ್ಷದ ಕಾರ್ಯಕರ್ತ ಎಂದು ಹೇಳಿದರು.
Next Story





