ಮಿಂಚಿನ ನೋಂದಣಿ: ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿದ ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಮಾ. 2: ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ “ಮಿಂಚಿನ ನೋಂದಣಿ” ನಡೆಯುತ್ತಿರುವುದರಿಂದ ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪತಿ ಅವರು ಶನಿವಾರ ಉಡುಪಿಯಲ್ಲಿ ತಮ್ಮ ಹೆಸರು ನೋಂದಣಿಗೆ ಅರ್ಜಿ ಸಲ್ಲಿಸಿದರು.
ಉಡುಪಿ ಅಜ್ಜರಕಾಡು ವಿವೇಕಾನಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತೆರಳಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ಸ್ಥಳೀಯ ಮತಗಟ್ಟೆ ಅಧಿಕಾರಿ (ಬಿಎಲ್ಒ) ಅವರಿಗೆ ಅರ್ಜಿ ಸಲ್ಲಿಸಿದರು.
Next Story







