Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೋದಿ ಅಧಿಕಾರಕ್ಕೆ ಬಂದರೆ ದೇಶ ಸರ್ವನಾಶ:...

ಮೋದಿ ಅಧಿಕಾರಕ್ಕೆ ಬಂದರೆ ದೇಶ ಸರ್ವನಾಶ: ಮಾಜಿ ಶಾಸಕ ಶ್ರೀರಾಮರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ2 March 2019 10:19 PM IST
share
ಮೋದಿ ಅಧಿಕಾರಕ್ಕೆ ಬಂದರೆ ದೇಶ ಸರ್ವನಾಶ: ಮಾಜಿ ಶಾಸಕ ಶ್ರೀರಾಮರೆಡ್ಡಿ

ಬೆಂಗಳೂರು, ಮಾ.2: ದೇಶದಲ್ಲಿ ಎಲ್ಲ ಸಾಂವಿಧಾನಿಕ ಕೇಂದ್ರಗಳಲ್ಲಿ ಮನುವಾದಿ ಸಿದ್ಧಾಂತದವರಿಂದ ಆಳಲ್ಪಡುತ್ತಿದೆ. ಇದಕ್ಕೆ ಇಂದಿನ ಪ್ರಧಾನಿ ಮೋದಿಯೇ ನೇರ ಕುಮ್ಮಕ್ಕು ನೀಡುತ್ತಿದ್ದು, ಮತ್ತೊಂದು ಬಾರಿ ಅವರೇ ಅಧಿಕಾರಕ್ಕೆ ಬಂದರೆ ದೇಶ ಸರ್ವನಾಶವಾಗಲಿದೆ ಎಂದು ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಹೇಳಿದ್ದಾರೆ.

ಶನಿವಾರ ನಗರದ ಶಾಸಕರ ಭವನದಲ್ಲಿ ದಲಿತ ಹಕ್ಕುಗಳ ಸಮಿತಿ ವತಿಯಿಂದ ಆಯೋಜಿಸಿದ್ದ ಜಾತಿ ಮತ್ತು ಸಂಪ್ರದಾಯದ ಹೆಸರಿನಲ್ಲಿ ನಡೆಯುವ ಅಪರಾಧ ತಡೆ ಕಾಯ್ದೆ 2018 ಕುರಿತ ದುಂಡು ಮೇಜಿನ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದಲ್ಲಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಮೇಲೆ ದಲಿತರ ರಕ್ಷಣೆಗಾಗಿ, ಕಾರ್ಮಿಕರ ರಕ್ಷಣೆಯಾಗಿ ಇದ್ದ ಕಾನೂನುಗಳನ್ನು, ಕಾಯ್ದೆಗಳನ್ನು ಸಂಪೂರ್ಣವಾಗಿ ನಾಶ ಮಾಡಲು ಮುಂದಾಗಿದ್ದಾರೆ. ಈ ಮೂಲಕ ಶೋಷಿತರನ್ನು ಮತ್ತೊಮ್ಮೆ ಗುಲಾಮಗಿರಿಗೆ ಕೊಂಡೊಯ್ಯುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ, ಅವರೇ ಮುಂದೊಂದು ಬಾರಿ ಅಧಿಕಾರಕ್ಕೆ ಬಂದರೆ ದಲಿತ, ದಮನಿತರಿಗೆ ಉಳಿಗಾಲವಿಲ್ಲ ಎಂದು ತಿಳಿಸಿದರು.

21 ಶತಮಾನದಲ್ಲಿ ಭಾರತ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿಯಾಗಿದೆ. ವೈಜ್ಞಾನಿಕವಾಗಿ, ಆರ್ಥಿಕವಾಗಿ ಬೆಳೆದಿದ್ದೇವೆ. ಆದರೆ, ಅದೇ ಸಂದರ್ಭದಲ್ಲಿ ಅದರ ಎರಡು ಪಟ್ಟು ಜಾತೀಯತೆಯ ಕ್ರೌರ್ಯ, ಹೆತ್ತ ಮಕ್ಕಳನ್ನೇ ಕೊಲ್ಲುವ ವಿಕೃತಿ ಮನಸ್ಥಿತಿಗಳೂ ಬೆಳೆದಿದೆ. ಕೀಳು ಮಟ್ಟದ ಮನೋಭಾವ ಬೇರೂರಿ ಬಿಟ್ಟಿದೆ. ಇಂದು ಪುರೋಹಿತಶಾಹಿ ವ್ಯವಸ್ಥೆ ಗಟ್ಟಿಯಾಗಿ ಬೇರೂರಿದೆ ಎಂದು ಹೇಳಿದರು.

ದೇಶದಲ್ಲಿ ಅಂತರ್‌ಜಾತೀಯ ದೌರ್ಜನ್ಯ ಕಾಯ್ದೆಗಳಿದ್ದರೂ ದೌರ್ಜನ್ಯಗಳು ಕಡಿಮೆಯಾಗಿಲ್ಲ. ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗುತ್ತಿಲ್ಲ. ಅಸ್ಪಶ್ಯತೆ ನಿರ್ಮೂಲನೆಗೆ ಅಧಿಕಾರಕ್ಕೆ ಬಂದ ಯಾವ ಸರಕಾರಗಳೂ ಗಂಭೀರವಾದ ಪ್ರಯತ್ನ ಮಾಡಲಿಲ್ಲ ಎಂದ ಅವರು, ಇದಕ್ಕೆ ಪರಿಹಾರ ಎಲ್ಲರೂ ಒಟ್ಟಾಗಿ ಹೋರಾಡಬೇಕಿದೆ. ಆದರೆ, ಇಂದಿನ ದಲಿತ ಸಂಘಟನೆಗಳಲ್ಲಿಯೂ ಎಡ-ಬಲ ಎಂಬಂತಾಗಿದೆ. ಇದು ಮುಂದುವರಿದರೆ ಅತ್ಯಂತ ಸಂಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ ಎಂದು ಸೂಚಿಸಿದರು.

ವಕೀಲ ವೆಂಕಟೇಶ್ ದೊಡ್ಡೇರಿ ಮಾತನಾಡಿ, ಪ್ರಪಂಚಾದ್ಯಂತ 5 ಸಾವಿರ ಮರ್ಯಾದೆ ಹತ್ಯೆಗಳು ವರದಿಯಾಗಿವೆ. 200-300 ಭಾರತದಲ್ಲಿ ವರದಿಯಾಗಿದ್ದು, ಇನ್ನು ವರದಿಯಾಗದೆ ಉಳಿದ ಅನೇಕ ಪ್ರಕರಣಗಳಿವೆ. ಮರ್ಯಾದೆ ಹತ್ಯೆ ಬಗ್ಗೆ ಪೂನಾದ ವಿದ್ಯಾರ್ಥಿಗಳೆಲ್ಲ ಸೇರಿ ಸರಕಾರಕ್ಕೆ ವರದಿ ಸಲ್ಲಿಸುತ್ತಾರೆ. ಆದರೆ, ಅದನ್ನು ಕೇಂದ್ರ ಸರಕಾರ ಸ್ವೀಕರಿಸಲು ಮುಂದಾಗಿಲ್ಲ ಎಂದು ದೂರಿದರು.

ತಾಯಿ ಜಾತಿ ಪ್ರಧಾನವೋ ತಂದೆ ಜಾತಿ ಪ್ರಧಾನವೋ ಎಂಬ ಚರ್ಚೆಯಲ್ಲಿದೆ. ಎಲ್ಲ ಜಾತಿಗಳು ನೋಂದಣಿಯಾಗಬೇಕು. ಹತ್ಯೆ, ಬಹಿಷ್ಕಾರಗಳನ್ನು ಇಲ್ಲವಾಗಿಸಬೇಕು. ಅಂತರ್‌ಜಾತಿ ವಿವಾಹವಾಗುವ ದಂಪತಿಗಳಿಗೆ ಪುನರ್ವಸತಿ ವ್ಯವಸ್ಥೆ ಕಲ್ಪಿಸಬೇಕು. ಅದರ ಜತೆಗೆ ಸೂಕ್ತ ರಕ್ಷಣೆ ನೀಡಿ, ಬದುಕಲು ಅವಕಾಶವಾಗುವಂತಹ ಉದ್ಯೋಗಾವಕಾಶಕ್ಕೆ ಅವಕಾಶ ನೀಡಬೇಕು ಎಂದು ನುಡಿದರು.

ಸಭೆಯಲ್ಲಿ ರಾಜ್ಯದಲ್ಲಿನ ದಲಿತರ ಮೇಲಿನ ಸಮಸ್ಯೆಗಳನ್ನಾಧರಿಸಿ ಒಂದು ನೂತನ ಕಾನೂನು ರೂಪಿಸಬೇಕು. ಅಂತರ್ಜಾತಿ ವಿವಾಹಿತರಿಗೆ ಮೀಸಲಾತಿ ಕಲ್ಪಿಸಬೇಕು. 1965ರಲ್ಲಿ ಕಾಯ್ದೆಯಲ್ಲಿನ ಅಂಶಗಳ ತಿದ್ದುಪಡಿಯಾಗಬೇಕು. ಮರ್ಯಾದೆ ಹತ್ಯೆಹೆಸರಿನಲ್ಲಿ ದೌರ್ಜನ್ಯ, ದಬ್ಬಾಳಿಕೆ ಅಂತ್ಯವಾಗಬೇಕಾದರೆ ಬಲವಾದ ಕಾನೂನು ರೂಪುಗೊಳ್ಳಬೇಕು. ಇದರಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಬೇಕು ಸೇರಿದಂತೆ ಹಲವು ಅಂಶಗಳ ಕುರಿತು ಚರ್ಚೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X