ಇನ್ನೆರಡು ದಿನ ದಕ್ಷಿಣ ಒಳನಾಡಿನ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಬೆಂಗಳೂರು, ಮಾ.2: ಈ ತಿಂಗಳ ಮೊದಲ ವಾರದಲ್ಲಿಯೆ ಬಿಸಿಲಿನ ತಾಪಮಾನ ಏರಿಕೆ ಕಾಣುತ್ತಿರುವುದರಿಂದ ರಾಜ್ಯದ ದಕ್ಷಿಣ ಒಳನಾಡಿನ ಕೆಲವಡೆ ರವಿವಾರ ಮತ್ತು ಸೋಮವಾರ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್.ಶ್ರೀನಿವಾಸ ರೆಡ್ಡಿ ಮುನ್ಸೂಚನೆ ನೀಡಿದ್ದಾರೆ.
ಬಿಸಿಲಿನ ಪ್ರಖರತೆ ಹೆಚ್ಚಾಗಿರುವುದರಿಂದ ಮಂಡ್ಯ, ಮೈಸೂರು ಹಾಗೂ ಹಾಸನ ಭಾಗಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕಳೆದ ನಾಲ್ಕು ದಿನಗಳಲ್ಲಿ ರಾಜ್ಯದ ಕೆಲವೆಡೆ 40ಡಿಗ್ರಿಗೂ ಹೆಚ್ಚಿನ ತಾಪಮಾನ ಏರಿಕೆಯಾಗಿತ್ತು. ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Next Story





