ಕೊಣಾಜೆ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಕೊಣಾಜೆ, ಮಾ. 2: ಮಂಗಳೂರು ವಿವಿಯ ಉದ್ಯೋಗಸ್ಥರ ಕ್ವಾಟ್ರರ್ಸ್‍ನಲ್ಲಿ ವಿವಾಹಿತ ವ್ಯಕ್ತಿಯೊರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ನಡೆದಿದೆ.
ಹರೀಶ್ (40) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಕೊಠಡಿಯೊಳಗೆ ಫ್ಯಾನ್‍ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು ಬಳಿಕ ಕೆಲಸಕ್ಕೆ ತೆರಳದೆ ಮನೆಯಲ್ಲಿಯೇ ಇದ್ದರು ಎನ್ನಲಾಗಿದೆ. ಇವರ ತಾಯಿ ಮಂಗಳೂರು ವಿವಿಯಲ್ಲಿ ಸ್ವೀಪರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಕೊಣಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.
Next Story





