Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಷ್ಟು ಮಂದಿ ಸತ್ತಿದ್ದಾರೆಂದು ನಾವು...

ಎಷ್ಟು ಮಂದಿ ಸತ್ತಿದ್ದಾರೆಂದು ನಾವು ಲೆಕ್ಕ ಹಾಕಿಲ್ಲ: ಐಎಎಫ್ ಮುಖ್ಯಸ್ಥ ಧನೋವಾ

ಉಗ್ರತಾಣಗಳ ಮೇಲೆ ವಾಯುಪಡೆಯ ದಾಳಿ

ವಾರ್ತಾಭಾರತಿವಾರ್ತಾಭಾರತಿ4 March 2019 1:29 PM IST
share
ಎಷ್ಟು ಮಂದಿ ಸತ್ತಿದ್ದಾರೆಂದು ನಾವು ಲೆಕ್ಕ ಹಾಕಿಲ್ಲ: ಐಎಎಫ್ ಮುಖ್ಯಸ್ಥ ಧನೋವಾ

   ಹೊಸದಿಲ್ಲಿ, ಮಾ.4: ಪಾಕಿಸ್ತಾನದ ಬಾಲಕೋಟ್‌ನಲ್ಲಿ ಭಯೋತ್ಪಾದಕರ ನೆಲೆಯ ಮೇಲೆ ವಾಯುಪಡೆ ನಡೆಸಿದ ದಾಳಿಯಲ್ಲಿ ಎಷ್ಟು ಮಂದಿ ಉಗ್ರರು ಸತ್ತಿದ್ದಾರೆ ಎಂದು ವಾಯುಪಡೆ ಲೆಕ್ಕ ಹಾಕುತ್ತಾ ಕೂರಲಾಗದು. ಈ ಬಗ್ಗೆ ಸರಕಾರ ಮಾಹಿತಿ ನೀಡುತ್ತದೆ ಎಂದು ವಾಯುಪಡೆ ಮುಖ್ಯಸ್ಥ ಏರ್‌ಚೀಫ್ ಮಾರ್ಷಲ್ ಬಿಎಸ್ ಧನೋವಾ ಹೇಳಿದ್ದಾರೆ.

ಎಷ್ಟು ಮಂದಿ ಸತ್ತಿದ್ದಾರೆ ಎಂದು ನಾವು ಲೆಕ್ಕ ಹಾಕಲಾಗದು. ಅಲ್ಲಿ ಎಷ್ಟು ಮಂದಿ ಇದ್ದರು ಎಂಬುದನ್ನು ಅದು ಅವಲಂಬಿಸಿರುತ್ತದೆ ಎಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಧನೋವಾ ಹೇಳಿದರು. ಬಾಲಕೋಟ್‌ನ ಉಗ್ರರ ಶಿಬಿರದ ಮೇಲೆ ವಾಯುಪಡೆಯ ವಿಮಾನ ನಡೆಸಿದ್ದ ದಾಳಿ ಗುರಿ ತಪ್ಪಿದೆ . ಸರಕಾರ 300ಕ್ಕೂ ಹೆಚ್ಚು ಉಗ್ರರು ಸತ್ತಿರುವುದಾಗಿ ಸುಳ್ಳು ಹೇಳುತ್ತಿದೆ ಎಂದು ಕೆಲವು ರಾಜಕೀಯ ಮುಖಂಡರು ನೀಡಿರುವ ಹೇಳಿಕೆಗಳಿಗೆ ಅವರು ಪ್ರತಿಕ್ರಿಯಿಸುತ್ತಿದ್ದರು.

 ನಮಗೆ ನೀಡಲಾಗಿರುವ ಗುರಿಯ ಮೇಲೆ ದಾಳಿ ನಡೆಸಿದ್ದೇವೆಯೇ , ಇಲ್ಲವೇ ಎಂಬುದಷ್ಟೇ ನಮಗೆ ಮುಖ್ಯವಾಗಿದೆ. ನಾವು ಗುರಿಯ ಮೇಲೆ ದಾಳಿ ನಡೆಸಿದ್ದೇವೆ. ಇದರಲ್ಲಿ ಅನುಮಾನವಿಲ್ಲ. ಎಷ್ಟು ಸಾವು ನೋವು ಸಂಭವಿಸಿದೆ ಎಂಬುದು ಸರಕಾರಕ್ಕೆ ಬಿಟ್ಟ ವಿಷಯವಾಗಿದೆ . ದಾಳಿ ನಡೆಸುವ ಮುನ್ನ ಎಷ್ಟು ಗುರಿಯ ಮೇಲೆ ಬಾಂಬ್ ದಾಳಿ ನಡೆಸಬೇಕು ಎಂದು ನಿರ್ಧರಿಸಿರುತ್ತೇವೆ. ಇದನ್ನು ಸಾಧಿಸಿದ್ದೇವೆಯೇ ಎಂಬುದನ್ನು ಬಳಿಕ ಪರಿಶೀಲನೆ ನಡೆಸುತ್ತೇವೆ ಎಂದು ಧನೋವಾ ಹೇಳಿದರು.

ಯಾವ ಗುರಿ ನಿಗದಿಯಾಗಿತ್ತು ಮತ್ತು ಈ ಗುರಿಯ ಮೇಲಿನ ದಾಳಿ ಯಶಸ್ವಿಯಾಗಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಯಾವ ಗುರಿ ನಿಗದಿಯಾಗಿತ್ತು ಎಂಬ ಬಗ್ಗೆ ವಿದೇಶ ವ್ಯವಹಾರ ಇಲಾಖೆಯ ಕಾರ್ಯದರ್ಶಿಯ ಹೇಳಿಕೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಉದ್ದೇಶಿತ ಗುರಿಯ ಮೇಲೆಯೇ ಹೊಡೆದಿದ್ದೇವೆ, ಇಲ್ಲವಾದರೆ ಪಾಕಿಸ್ತಾನದವರೇಕೆ ಪ್ರತಿಕ್ರಿಯೆ ನೀಡುತ್ತಿದ್ದರು. ನಾವು ಅರಣ್ಯ ಪ್ರದೇಶಕ್ಕೆ ಬಾಂಬ್ ಹಾಕಿದ್ದರೆ ಅವರು ಪ್ರತಿಕ್ರಿಯೆ ನೀಡುವ ಅಗತ್ಯವೇ ಇರಲಿಲ್ಲ ಎಂದರು. ಈ ಮೂಲಕ ವಾಯುಪಡೆಯ ದಾಳಿ ಗುರಿ ತಪ್ಪಿದೆ ಎಂಬ ಸುದ್ದಿಯನ್ನು ಅಧಿಕೃತವಾಗಿ ತಳ್ಳಿಹಾಕಿದರು.

 ಉಗ್ರರ ನೆಲೆಯ ಮೇಲಿನ ದಾಳಿ ಯಶಸ್ವಿಯಾಗಿದೆ ಎಂದು ಸರಕಾರ ಹೇಳಿಕೆ ನೀಡಿದ್ದರೂ ದಾಳಿಯಲ್ಲಿ ಎಷ್ಟು ಮಂದಿ ಉಗ್ರರು ಹತರಾಗಿದ್ದಾರೆ ಎಂಬ ಕುರಿತು ಅಧಿಕೃತವಾಗಿ ತಿಳಿಸಿಲ್ಲ. ದಾಳಿ ನಡೆದ ದಿನದಂದು ಸುದ್ದಿ ಮಾಧ್ಯಮಗಳಲ್ಲಿ 300 ಉಗ್ರರು ಸತ್ತಿರುವುದಾಗಿ ಸುದ್ದಿ ಪ್ರಸಾರವಾಗಿತ್ತು. ಬಳಿಕ ಹೇಳಿಕೆ ನೀಡಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ 250 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದಿದ್ದರು.

ಈಗ ಅತ್ಯಾಧುನಿಕ ಯುದ್ಧವಿಮಾನಗಳ ಯುಗವಾಗಿದ್ದರೂ ಭಾರತೀಯ ವಾಯುಪಡೆಯ ಪೈಲಟ್‌ಗಳು ಈಗಲೂ ಮಿಗ್-21 ಬೈಸನ್ ವಿಮಾನಗಳನ್ನು ಬಳಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಧನೋವಾ, ಈಗ ಪ್ರಗತಿಯಲ್ಲಿರುವ ಕಾರ್ಯಾಚರಣೆಯ ಕುರಿತು ತಾನು ಪ್ರತಿಕ್ರಿಯಿಸುವುದಿಲ್ಲ. ಮಿಗ್-21 ಬೈಸನ್ ಸಮರ್ಥ, ಸುಧಾರಿತ ಹಾಗೂ ಅತ್ಯುತ್ತಮ ಯುದ್ಧವಿಮಾನವಾಗಿದೆ ಎಂದರು.

   ಅಭಿನಂದನ್ ವರ್ಧಮಾನ್ ಕರ್ತವ್ಯಕ್ಕೆ ಮರಳುವ ಕುರಿತ ಪ್ರಶ್ನೆಗೆ, ಇದು ಅವರ ಚೇತರಿಕೆಯನ್ನು ಅವಲಂಬಿಸಿದೆ. ತ್ವರಿತವಾಗಿ ಚೇತರಿಸಿಕೊಂಡರೆ ವಿಮಾನದ ಕಾಕ್‌ಪಿಟ್‌ಗೆ ತಕ್ಷಣ ಮರಳಬಹುದು. ಯುದ್ಧ ವಿಮಾನದ ಪೈಲಟ್‌ನ ಫಿಟ್‌ನೆಸ್ ವಿಷಯದಲ್ಲಿ ಯಾವುದೇ ರಿಸ್ಕ್ ತೆಗೆದುಕೊಳ್ಳಲು ನಾವು ಇಚ್ಚಿಸುವುದಿಲ್ಲ ಎಂದುತ್ತರಿಸಿದರು.

 ರಫೇಲ್ ಯುದ್ಧವಿಮಾನ ಒಪ್ಪಂದದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅವರು, ರಾಜಕೀಯ ವಿಷಯದ ಬಗ್ಗೆ ತನ್ನಲ್ಲಿ ಉತ್ತರವಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X