ಮಾಜಿ ಕೇಂದ್ರ ಸಚಿವ ಧನಂಜಯ ಕುಮಾರ್ ನಿಧನ

ಮಂಗಳೂರು, ಮಾ. 4: ಕೇಂದ್ರದ ಮಾಜಿ ಸಚಿವ, ಮಾಜಿ ಲೋಕಸಭಾ ಸದಸ್ಯ ಧನಂಜಯ ಕುಮಾರ್ ಸೋಮವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮಂಗಳವಾರ ಬೆಳಗ್ಗೆ 7 ಗಂಟೆಯಿಂದ 10ರವರೆಗೆ ನಗರದ ಕದ್ರಿಕಂಬಳದಲ್ಲಿ ಇರುವ ಅವರ ನಿವಾಸದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಬಹುದು ಬಳಿಕ ವೇಣೂರಿಗೆ ಅವರ ಮೃತದೇಹ ಕೊಂಡೊಯ್ದು ಅಂತಿಮ ಸಂಸ್ಕಾರ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
Next Story





