ವಿಟ್ಲ: ಅಕ್ರಮ ಕೋಳಿ ಅಂಕಕ್ಕೆ ದಾಳಿ
ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ವಿಟ್ಲಮುಡ್ನೂರು ಗ್ರಾಮದ ಅಬೀರಿ ಎಂಬಲ್ಲಿ ಕೋಳಿ ಅಂಕಕ್ಕೆ ದಾಳಿ ನಡೆಸಿ ಮೂವರು ಆರೋಪಿಗಳು ಸಹಿತ 5 ಕೋಳಿ, 7 ದ್ವಿಚಕ್ರವಾಹನವನ್ನು ವಶಕ್ಕೆ ಪಡೆದ ಘಟನೆ ರವಿವಾರ ನಡೆದಿದೆ.
ದಾಮೋದರ ಗೌಡ, ಈಶ್ವರ ಗೌಡ, ಗಿರಿಯಪ್ಪ ಗೌಡ ಅವರನ್ನು ವಶಕ್ಕೆ ಪಡೆಯಲಾಗಿದೆ. ಸುಮಾರು 3020ರೂ, 5 ಹುಂಜಾ ಕೋಳಿ, ಕೋಳಿ ಬಾಳು ಹಾಗೂ 7 ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Next Story





