ಅಂತರ ಕಾಲೇಜು ಭಾಷಣ ಸ್ಪರ್ಧೆ: ವೈಕುಂಠ ಬಾಳಿಗಾ ಕಾಲೇಜಿಗೆ ಪ್ರಶಸ್ತಿ

ಉಡುಪಿ, ಮಾ.6: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಂಘದ ಆಶ್ರಯದಲ್ಲಿ ಕಾಲೇಜಿನ ಸಬಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಲಾದ ಮೊನ್ಸಿಂಜೊರ್ ಡಿ.ಜೆ.ಡಿಸೋಜ ಸ್ಮಾರಕ ಅಂತರ ಕಾಲೇಜು ಭಾಷಣ ಸ್ಪರ್ಧೆಯಲ್ಲಿ ಉಡುಪಿ ವೈಕುಂಠ ಬಾಳಿಗಾ ಕಾಲೇಜಿನ ಪ್ರಸನ್ನ ಕರ್ಮಾಕರ್ ಪ್ರಥಮ ಬಹುಮಾನವನ್ನು ಗೆದ್ದುಕೊಂಡಿದ್ದಾರೆ.
ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಸುಮುಖ ದ್ವಿತೀಯ ಹಾಗೂ ಉಡುಪಿ ವೈಕುಂಠ ಬಾಳಿಗಾ ಕಾಲೇಜಿನ ಐಶ್ವರ್ಯ ಎನ್.ಪಿ. ತೃತೀಯ ಬಹುಮಾನ ವನ್ನು ಪಡೆದುಕೊಂಡಿದ್ದಾರೆ. ಪರ್ಯಾಯ ಫಲಕವನ್ನು ವೈಕುಂಠ ಬಾಳಿಗಾ ಕಾಲೇಜಿನ ವಿ್ಯಾರ್ಥಿಗಳು ತನ್ನದಾಗಿಸಿಕೊಂಡರು.
ಸ್ಪರ್ಧೆಯನ್ನು ಉದ್ಘಾಟಿಸಿದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ಸುಬ್ರಹ್ಮಣ್ಯ ಜೋಶಿ ಮಾತನಾಡಿ, ತಾಂತ್ರಿಕತೆಯ ಪ್ರಭಾವದಿಂದ ಈಗಿನ ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಬಹಳ ವಿರಳವಾಗುತ್ತಿದೆ. ವಿದ್ಯಾರ್ಥಿ ಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ಹೆಚ್ಚು ತೊಡಗಿಸಿಕೊಂಡಿದ್ದಾರೆ. ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ಯೋಚನಾ ಶಕ್ತಿ ಅಭಿವೃದ್ಧಿಯಾಗುತ್ತದೆ ಎಂದರು.
ಸಂಘದ ನಿರ್ದೇಶಕ ಪ್ರೊ.ಅನ್ನಮ್ಮ, ಕ್ಷೇಮಪಾಲನಾ ಸಂಘದ ಅಧ್ಯಕ್ಷೆ ಪ್ರಜ್ವಲ್, ಕಾರ್ಯದರ್ಶಿ ನಾಗೇಶ್ ಉಪಸ್ಥಿತರಿದ್ದರು. ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್ ಆಳ್ವ ವಿಜೇತರಿಗೆ ಬಹುಮಾನ ವಿತರಿಸಿದರು. ವಿದ್ಯಾರ್ಥಿನಿ ಕಾವ್ಯ ಪೈ ಸ್ವಾಗತಿಸಿದರು. ಅಜ್ ಜಿ.ಪೂಜಾರಿ ವಂದಿಸಿದರು. ಹೀರಲ್ ಕಾ್ರಸ್ತಾ ಕಾರ್ಯಕ್ರಮ ನಿರೂಪಿಸಿದರು.







