Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ...

ಕೊಡಗು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ6 March 2019 9:25 PM IST
share
ಕೊಡಗು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್

ಬೆಂಗಳೂರು, ಮಾ.6: ಕೊಡಗು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪ್ರತಿ ವರ್ಷ ಸಂಭವಿಸುವ ಅನಪೇಕ್ಷಿತ ಹಾಗೂ ಅನೈಸರ್ಗಿಕ ಕಾಡ್ಗಿಚ್ಚು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಹಾಗೂ ಅರಣ್ಯ ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ಕಾಟಕೇರಿ ಗ್ರಾಮದ ನಿವಾಸಿ ಹಾಗೂ ಕಾವೇರಿ ಸೇನೆಯ ಪ್ರಧಾನ ಸಂಚಾಲಕ ಕೆ.ಎ. ರವಿ ಚೆಂಗಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಆಲೋಕ್ ಆರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿಗೆ ಸಂಬಂಧಿಸಿದ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿ, ವಿಚಾರಣೆಯನ್ನು ಮಾ.13ಕ್ಕೆ ಮುಂದೂಡಿತು. ಜಿಲ್ಲೆಯ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಕೋರಿ ಅರ್ಜಿದಾರರು 2017ರ ಮಾ.6ರಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಪರಿಗಣಿಸಬೇಕು. ಕಾಡ್ಗಿಚ್ಚಿನಿಂದ ಅರಣ್ಯ ಪ್ರದೇಶ, ವನ್ಯಜೀವಿಗಳನ್ನು ರಕ್ಷಿಸಲು ವಿಶೇಷ ಕಾರ್ಯಪಡೆ ರಚಿಸುವಂತೆ ರಾಜ್ಯ ಸರಕಾರ ಹಾಗೂ ಅರಣ್ಯ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಜಿಲ್ಲೆಯಲ್ಲಿ ಕಾಡ್ಗಿಚ್ಚು ಘಟನೆಗಳು ಹೆಚ್ಚಾಗುತ್ತಿವೆ. ಕಳೆದ ಹಲವು ವರ್ಷಗಳಿಂದ ಕೆಲವು ದುಷ್ಕರ್ಮಿಗಳು ಪ್ರತಿ ವರ್ಷ ಜನವರಿಯಿಂದ ಜೂನ್ ತಿಂಗಳ ನಡುವೆ ಕಾಡಿಗೆ ಬೆಂಕಿ ಹಾಕುತ್ತಾರೆ. ಇದರಿಂದ, ಹೆಕ್ಟೆರುಗಟ್ಟಲೆ ಅರಣ್ಯ ಭೂಮಿ ನಾಶವಾಗುತ್ತಿದೆ. ಈ ಕುರಿತು ಸಂಬಂಧಪಟ್ಟವರಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ, ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ. 2017ರ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಸಂಭವಿಸಿದ ಕಾಡ್ಗಿಚ್ಚಿಗೆ ಕುಶಾಲನಗರ, ಶುಂಠಿಕೊಪ್ಪ ಸುತ್ತಲಿನ 150 ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿತ್ತು. ಹೀಗಾಗಿ, ಇದನ್ನು ತಡೆಗಟ್ಟಲು ನಿರ್ದಿಷ್ಟ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆಯಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಅಗತ್ಯ ಕ್ರಮ ಕೈಗೊಳ್ಳಲಾಗಿದೆ: ಕೊಡಗು ಜಿಲ್ಲೆಯಲ್ಲಿ ಕಾಡ್ಗಿಚ್ಚು ಘಟನೆಗಳನ್ನು ತಡೆಯಲು ಎಲ್ಲ ರೀತಿಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾಡ್ಗಿಚ್ಚು ನಿಯಂತ್ರಣ ಹಾಗೂ ನಿರ್ವಹಣಾ ಯೋಜನೆ-2018-19 ಈಗಾಗಲೇ ರೂಪಿಸಲಾಗಿದೆ. ಪ್ರಸಕ್ತ ವರ್ಷ ಮಡಿಕೇರಿ ವಲಯವನ್ನು ಕಾಡ್ಗಿಚ್ಚು ಶೂನ್ಯ ಪ್ರದೇಶವನ್ನಾಗಿ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಫೆ.2ರಂದು ಸರಕಾರದ ಪರ ವಕೀಲರು ಪ್ರಮಾಣಪತ್ರ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X