Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ರೇಲ್‌ನಲ್ಲಿ ವಿಪಕ್ಷಗಳು ಸೇನೆಯನ್ನು...

ಇಸ್ರೇಲ್‌ನಲ್ಲಿ ವಿಪಕ್ಷಗಳು ಸೇನೆಯನ್ನು ಅವಮಾನಿಸುವುದಿಲ್ಲ: ವಿ.ಕೆ ಸಿಂಗ್

ವಾರ್ತಾಭಾರತಿವಾರ್ತಾಭಾರತಿ6 March 2019 9:38 PM IST
share
ಇಸ್ರೇಲ್‌ನಲ್ಲಿ ವಿಪಕ್ಷಗಳು ಸೇನೆಯನ್ನು ಅವಮಾನಿಸುವುದಿಲ್ಲ: ವಿ.ಕೆ ಸಿಂಗ್

ಹೊಸದಿಲ್ಲಿ, ಮಾ.6: ಉಗ್ರರನ್ನು ದಮನಿಸುವಲ್ಲಿ ಭಾರತ ಇಸ್ರೇಲನ್ನು ಅನುಸರಿಸಬೇಕು ಎಂದು ಜನರು ಬಯಸುತ್ತಾರೆ. ಆದರೆ ಇಸ್ರೇಲ್‌ನಲ್ಲಿ ವಿಪಕ್ಷಗಳು ಭಾರತದಂತೆ ಸೇನೆಯು ಯಾವುದೇ ದಾಳಿ ನಡೆಸಿದಾಗ ಪ್ರಶ್ನಿಸುವುದಿಲ್ಲ ಮತ್ತು ಅವಮಾನಿಸುವುದಿಲ್ಲ ಎಂದು ಕೇಂದ್ರ ಸಚಿವ ವಿ.ಕೆ ಸಿಂಗ್ ತಿಳಿಸಿದ್ದಾರೆ.

ಈ ಕುರಿತು ಫೇಸ್‌ ಬುಕ್‌ ನಲ್ಲಿ ಪೋಸ್ಟ್ ಹಾಕಿರುವ ಸಿಂಗ್, ಇಸ್ರೇಲ್ ಸೇನೆ ಆಪರೇಶನ್ ಮ್ಯೂನಿಚ್‌ನಂತ ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲಿ ಅಲ್ಲಿನ ವಿಪಕ್ಷಗಳು ಸೇನೆಯನ್ನು ಪ್ರಶ್ನಿಸುವ ಅಥವಾ ಅವಮಾನಿಸುವ ಕೆಲಸ ಮಾಡಲಿಲ್ಲ ಎಂದು ಹೇಳುತ್ತಾ, ಸರಕಾರದ ಟೀಕಾಕಾರರಾದ ವಿಪಕ್ಷಗಳು, ವಿದ್ಯಾರ್ಥಿ ನಾಯಕರು, ಹೋರಾಟಗಾರರು ಮತ್ತು ಮಾಧ್ಯಮದ ಮೇಲೆ ಹರಿಹಾಯ್ದರು. ಭಾರತದೊಳಗೆ ಇನ್ನೊಂದು ಸರ್ಜಿಕಲ್ ಸ್ಟ್ರೈಕ್‌ನ ಅಗತ್ಯವಿದೆ ಎಂದು ತಿಳಿಸಿದ ಸಿಂಗ್ ಅದು ನಡೆಯದಿದ್ದರೆ ಕಳ್ಳರು ದೋಚಲು ಸಿದ್ಧವಾಗಿದ್ದಾರೆ ಎಂದು ಎಚ್ಚರಿಸಿದ್ದಾರೆ. ವಿದ್ಯಾರ್ಥಿ ನಾಯಕರನ್ನು ಜಿಗಣೆಗೆ ಹೋಲಿಸಿದ ಮಾಜಿ ಸೇನಾ ಮುಖ್ಯಸ್ಥ ಉಗ್ರರನ್ನು ತೀವ್ರವಾದಿಗಳೆಂದು ಸಂಬೋಧಿಸಿದ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಂಥ ಘಟನೆಗಳು ಇಸ್ರೇಲ್‌ನಲ್ಲಿ ನಡೆಯುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪಾಕಿಸ್ತಾನದ ಬಾಲಕೋಟ್‌ನಲ್ಲಿ ಭಾರತೀಯ ವಾಯುಪಡೆ ನಡೆಸಿದ ದಾಳಿಯ ನಂತರ ಸರಕಾರ ಮತ್ತು ವಿಪಕ್ಷಗಳ ಮಧ್ಯೆ ನಡೆಯುತ್ತಿರುವ ಕೆಸರೆರಚಾಟದ ಮಧ್ಯೆ ಸಿಂಗ್ ತಮ್ಮ ಆಕ್ರೋಶವನ್ನು ಸಾಮಾಜಿಕ ಜಾಲತಾಣದಲ್ಲಿ ಹೊರಗೆಡವಿದ್ದಾರೆ. ಭಾರತ ಯಾಕೆ ಇಸ್ರೇಲ್ ಆಗಲು ಸಾಧ್ಯವಿಲ್ಲ ಎಂಬ ಶೀರ್ಷಿಕೆಯಡಿ ಬರೆದಿರುವ ಪೋಸ್ಟ್‌ನಲ್ಲಿ ವಿ.ಕೆ. ಸಿಂಗ್ ಇದಕ್ಕೆ ಹಲವು ಕಾರಣಗಳನ್ನು ನೀಡಿದ್ದಾರೆ. ಯಾಕೆಂದರೆ ಇಸ್ರೇಲ್‌ನಲ್ಲಿ ದೇಶವನ್ನು ಒಡೆಯಲು ಬೆಂಬಲ ಸೂಚಿಸಿ ಘೋಷಣೆಗಳನ್ನು ಕೂಗಲು ಯುವಕರಿಗೆ ಅವಕಾಶ ನೀಡುವ ಜೆಎನ್‌ಯುನಂತ ವಿಶ್ವವಿದ್ಯಾನಿಲಯಗಳಿಲ್ಲ. ಅಲ್ಲಿನ ಉಗ್ರರಿಗಾಗಿ ನ್ಯಾಯಾಲಯವನ್ನು ರಾತ್ರಿ ಎರಡು ಗಂಟೆಗೆ ತೆರೆಯಲಾಗುವುದಿಲ್ಲ ಅಥವಾ ಪತ್ರಕರ್ತರು ಉಗ್ರರ ಮಾನವ ಹಕ್ಕುಗಳಿಗಾಗಿ ಬೊಬ್ಬೆ ಹೊಡೆಯುವುದಿಲ್ಲ. ಇಸ್ರೇಲ್‌ನಲ್ಲಿ ದೇಶವೇ ಅತ್ಯುನ್ನತವಾದುದು, ಧರ್ಮ ಅಥವಾ ಜಾತಿಯಲ್ಲ. ಅಲ್ಲಿ ಜಾಟ್, ಗುಜ್ಜರ್ ಅಥವಾ ಮರಾಠ ಎಂದು ಜನರು ಬೀದಿಗಿಳಿದು ಸಾರ್ವಜನಿಕ ಸೊತ್ತುಗಳಿಗೆ ಹಾನಿ ಮಾಡುವುದಿಲ್ಲ ಎಂದು ವಿ.ಕೆ ಸಿಂಗ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X