Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಔರಾದ್ಕರ್ ವರದಿ ಜಾರಿ ಕುರಿತು ಶೀಘ್ರವೇ...

ಔರಾದ್ಕರ್ ವರದಿ ಜಾರಿ ಕುರಿತು ಶೀಘ್ರವೇ ಉನ್ನತ ಅಧಿಕಾರಿಗಳ ಸಭೆ: ಎಂ.ಬಿ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ6 March 2019 10:29 PM IST
share
ಔರಾದ್ಕರ್ ವರದಿ ಜಾರಿ ಕುರಿತು ಶೀಘ್ರವೇ ಉನ್ನತ ಅಧಿಕಾರಿಗಳ ಸಭೆ: ಎಂ.ಬಿ ಪಾಟೀಲ್

ದಾವಣಗೆರೆ,ಮಾ.6: ಸಿಎಂ ಅವರು ಔರಾದ್ಕರ್ ಸಮಿತಿ ವರದಿ ಜಾರಿ ಕುರಿತಂತೆ ಶೀಘ್ರವೇ ಉನ್ನತ ಅಧಿಕಾರಿಗಳ ಸಭೆ ಕರೆಯಲಿದ್ದಾರೆಂದು ಗೃಹ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಇಲ್ಲಿನ ಎಸ್ಪಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಔರಾದ್ಕರ್ ಸಮಿತಿ ವರದಿ ಅನುಷ್ಟಾನ ಸೇರಿದಂತೆ ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ತರಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಆದಷ್ಟು ಬೇಗ ಇಲಾಖೆಯಲ್ಲಿ ಸಾಕಷ್ಟು ಮಾರ್ಪಾಡು ತರುವುದು, ಇಲಾಖೆ ಭಡ್ತಿ ಸೇರಿದಂತೆ ಸಾಕಷ್ಟು ವಿಷಯಕ್ಕೆ ಒತ್ತು ನೀಡಿದ್ದೇವೆ ಎಂದರು. ನಿರಂತರ ಒತ್ತಡದಲ್ಲೇ ಕಾರ್ಯ ನಿರ್ವಹಿಸಬೇಕಾದ ಇಲಾಖೆ ಇದಾಗಿದ್ದು, ಇಂತಹ ಪೊಲೀಸ್ ಅಧಿಕಾರಿ, ಸಿಬ್ಬಂದಿ ಜೀವನವ ಮಟ್ಟ ಸುಧಾರಣೆ ಆಗಬೇಕು. ಇಲಾಖೆಯಲ್ಲಿ ಭಡ್ತಿ ಪಡೆದ ನಂತರ ಎಕ್ಸಿಕ್ಯೂಟಿವ್ ಹುದ್ದೆ 4 ವರ್ಷ, ನಾನ್ ಎಕ್ಸಿಕ್ಯೂಟಿವ್ ಹುದ್ದೆಯಲ್ಲಿ 2 ಸೇವೆ ಸಲ್ಲಿಸಬೇಕು. ಇಂತಹ ಸಾಕಷ್ಟು ವಿಚಾರಕ್ಕೆ ಗಮನ ಹರಿಸಿದ್ದೇವೆ ಎಂದರು.

ಪೊಲೀಸ್ ಸಬ್ ಇನ್ಸಪೆಕ್ಟರ್ ಗಳು ಎಕ್ಸಿಕ್ಯೂಟಿವ್, ನಾನ್ ಎಕ್ಸಿಕ್ಯೂಟಿವ್ ಹುದ್ದೆ ಹೀಗೆ ಎಲ್ಲಾ ಕಡೆ ಕೆಲಸ ಮಾಡಬೇಕಾಗುತ್ತದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಮುಂದೆ ಪ್ರತಿ ಠಾಣೆಗೆ ಕಾನೂನು-ಸುವ್ಯವಸ್ಥೆಗೆ ಒಬ್ಬ ಎಸ್‍ಐ, ಅಪರಾಧ ವಿಭಾಗಕ್ಕೆ ಒಬ್ಬ ಎಸ್‍ಐ ನೇಮಿಸಲಿದ್ದೇವೆ ಎಂದರು.

ಹಾವೇರಿ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳ ಎಸ್ಪಿ, ಎಎಸ್ಪಿ, ಡಿಎಸ್ಪಿ, ಎಸ್‍ಐಗಳೊಂದಿಗೆ ಸಭೆ ನಡೆಸಿ, ಪರಿಶೀಲನೆ ನಡೆಸಿದ್ದು, ಮಂಗಳೂರು, ಹುಬ್ಬಳ್ಳಿ, ಮೈಸೂರಲ್ಲಿ ಸಭೆ ನಡೆದಿದೆ. ಇಂದು ದಾವಣಗೆರೆ ಸಭೆಗೆ ಬಂದಿದ್ದೇನೆ. ಜೂಜಾಟ, ಕಳ್ಳತನ, ಹಲ್ಲೆ, ಹತ್ಯೆ, ಅತ್ಯಾಚಾರ, ಅಪಹರಣ, ದರೋಡೆ, ಆನ್‍ಲೈನ್ ವಂಚನೆ ಪ್ರಕರಣಕ್ಕೆ ಕಡಿವಾಣ ಹಾಕಲು ಇಲಾಖೆ ಬದ್ಧವಾಗಿದೆ ಎಂದರು. 

ಈ ಸಂದರ್ಭ ಪೂರ್ವ ವಲಯದ ಪ್ರಭಾರ ಐಜಿಪಿ, ದಾವಣಗೆರೆ ಎಸ್ಪಿ ಆರ್.ಚೇತನ್, ಶಿವಮೊಗ್ಗ ಎಸ್ಪಿ ಡಾ.ಅಶ್ವಿನಿ, ಚಿತ್ರದುರ್ಗ ಎಸ್ಪಿ ಡಾ.ಕೆ.ಅರುಣ, ಹಾವೇರಿ ಎಸ್ಪಿ ಕೆ.ಪರಶುರಾಮ್ ಇದ್ದರು.

ಸೈಬರ್ ಕ್ರೈಂ ಕಡಿವಾಣಕ್ಕೆ ಇನ್ಫೋಸಿಸ್ ನೆರವು
ದಿನದಿನಕ್ಕೂ ಸೈಬರ್ ಕ್ರೈಂ ಪ್ರಕರಣ ಹೆಚ್ಚುತ್ತಿದ್ದು, ಇನ್ಫೋಸಿಸ್ ಸಂಸ್ಥೆಯ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಜೊತೆಗೆ ಸೈಬರ್ ಕ್ರೈಂ ತಡೆ ಬಗ್ಗೆ ಚರ್ಚೆ ನಡೆಸಿದ್ದೇವೆ. ಫೇಸ್‍ಬುಕ್, ಟ್ವಿಟರ್, ವಾಟ್ಸಪ್ ಕಂಪನಿಗಳಿಗೆ ಕಿವಿಗೊಡುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆಯ ಸೈಬರ್ ಕ್ರೈಂ ವಿಭಾಗ ಮತ್ತಷ್ಟು ಬಲಿಷ್ಟಗೊಳಿಸುವ ನಿಟ್ಟಿನಲ್ಲಿ ಇನ್ಫೋಸಿಸ್ ಸಂಸ್ಥೆಯ ತಂತ್ರಜ್ಞರ ನೆರವು ಇಲಾಖೆ ಪಡೆಯಲಿದೆ. ಆನ್‍ಲೈನ್ ವಂಚನೆ ತಡೆಯುವುದು ನಮ್ಮ ಗುರಿ. 22 ಕೋಟಿ ವೆಚ್ಚದಲ್ಲಿ 5 ವರ್ಷ ಕಾಲ ಇನ್ಫೋಸಿಸ್ ಸಂಸ್ಥೆಯವರೇ ತರಬೇತಿ ನೀಡಿ, ನಿರ್ವಹಣೆ ಮಾಡಲಿದ್ದಾರೆ ಎಂದು ವಿವರಿಸಿದರು. 

ಪೊಲೀಸ್ ಇಲಾಖೆ ದಾವಣಗೆರೆ ಕಮೀಷನರೇಟ್ ಮಾಡುವ ಬಗ್ಗೆ ಹಿಂದಿನಿಂದಲೂ ಬೇಡಿಕೆ ಇದೆ. ರಾಜ್ಯದ ಮಹಾ ನಗರ ಪಾಲಿಕೆಗಳಲ್ಲಿ ಕಮೀಷನರೇಟ್ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಕಮೀಷನರೇಟ್ ಮಾಡಲು ಕೆಲ ಮಾನದಂಡಗಳೂ ಇವೆ. ಅವುಗಳನ್ನೆಲ್ಲಾ ಪರಿಶೀಲಿಸಿ, ಸೂಕ್ತವೆನಿಸಿದ್ದು ಕಂಡು ಬಂದರೆ ದಾವಣಗೆರೆ ಕಮೀಷನರೇಟ್ ಮಾಡಲಾಗುವುದು.
-ಎಂ.ಬಿ. ಪಾಟೀಲ್, ಗೃಹ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X