ರೌಡಿಶೀಟರ್ ಲಕ್ಷ್ಮಣ್ ಹತ್ಯೆ

ಬೆಂಗಳೂರು, ಮಾ.7: ಕಳವು, ದರೋಡೆ, ಕೊಲೆ, ಕೊಲೆ ಯತ್ನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ನಗರದ ಮಹಾಲಕ್ಷ್ಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜ್ಞಾನಭಾರತಿ ನಿವಾಸಿ ಲಕ್ಷ್ಮಣ್ ಕೊಲೆಯಾದ ರೌಡಿಶೀಟರ್ ಆಗಿದ್ದು, ಸ್ಕಾರ್ಪಿಯೋ ಕಾರಿನಲ್ಲಿ ಬಂದ ಐವರು ದುಷ್ಕರ್ಮಿಗಳ ತಂಡವು ಕೊಲೆ ಮಾಡಿ ಪರಾರಿಯಾಗಿದೆ. ಕೊಲೆಯಾದ ಲಕ್ಷ್ಮಣ್ ಮಿರ್ಲೆ ವರದರಾಜ್‌ನ ಭೂ ಕಬಳಿಕೆ ಪ್ರಕರಣಕ್ಕೆ ಬೇಕಾಗಿದ್ದ ಪ್ರಮುಖ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಡಿಸಿಪಿ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಆರೋಪಿಗಳ ಪತ್ತೆ ಹಾಗೂ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story





