Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜಕಾರಣಿಗಳು ಮತದಾರರನ್ನು...

ರಾಜಕಾರಣಿಗಳು ಮತದಾರರನ್ನು ಭ್ರಷ್ಟರನ್ನಾಗಿಸುತ್ತಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ

‘ಶಾಂತವೇರಿ ಗೋಪಾಲಗೌಡ’ ಜೀವನ ಚರಿತ್ರೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ7 March 2019 9:11 PM IST
share
ರಾಜಕಾರಣಿಗಳು ಮತದಾರರನ್ನು ಭ್ರಷ್ಟರನ್ನಾಗಿಸುತ್ತಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾ.7: ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ರಹಿತ ರಾಜಕಾರಣ ಮರೆಯಾಗಿದ್ದು, ಮತದಾರರನ್ನು ರಾಜಕಾರಣಿಗಳು ಭ್ರಷ್ಟರನ್ನಾಗಿ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ನಗರದ ಕಸಾಪದಲ್ಲಿ ಶಾಂತವೇರಿ ಗೋಪಾಲಗೌಡ ವಿಚಾರ ಸಂಸ್ಥೆ ವತಿಯಿಂದ ಆಯೋಜಿಸಿದ್ದ ನಟರಾಜ್ ಹುಳಿಯಾರ್ ಅವರ ‘ಶಾಂತವೇರಿ ಗೋಪಾಲಗೌಡ’ ಜೀವನ ಚರಿತ್ರೆಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಹಿಂದಿನ ಕಾಲದಲ್ಲಿ ಶಾಂತವೇರಿ ಗೋಪಾಲಗೌಡರು ಚುನಾವಣೆ ಸ್ಪರ್ಧಿಸುವುದು ಎಂದರೆ ರಾಜಕಾರಣಿ ಹಾಗೂ ಮತದಾರರು ಇಬ್ಬರೂ ಭ್ರಷ್ಟರಾಗಬಾರದು ಎಂದು ನಂಬಿದ್ದ ವ್ಯಕ್ತಿ. ಅವರ ಮೊದಲ ಚುನಾವಣೆಯನ್ನು ಅತ್ಯಂತ ಪ್ರಭಾವಿ ವ್ಯಕ್ತಿಯ ವಿರುದ್ಧ ಕೇವಲ ಐದು ಸಾವಿರ ಹಣ ಖರ್ಚು ಮಾಡಿ ಗೆದ್ದವರು. ಆದರೆ, ಅವರ ನಂತರದ ಕಾಲಘಟ್ಟ ಅದಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು.

ಗೋಪಾಲಗೌಡರು ಚುನಾವಣೆಗೆ ಸ್ಪರ್ಧಿಸಿದ 10 ವರ್ಷದ ಬಳಿಕ ನಾನು ಚುನಾವಣೆಗೆ ಸ್ಪರ್ಧೆ ಮಾಡಿದ್ದೆ. ಅಂದು ನಾನು 63 ಸಾವಿರ ಖರ್ಚು ಮಾಡಿದ್ದೆ. ಅಲ್ಲದೆ, ಅಂದಿನ ದಿನಗಳಲ್ಲಿ ಬೂತ್ ಮಟ್ಟದಲ್ಲಿ ಏಜೆಂಟ್‌ಗಳ ಖರ್ಚನ್ನೂ ಅವರೇ ನೋಡಿಕೊಳ್ಳುತ್ತಿದ್ದರು. ಆದರೆ, ಇಂದಿನ ಸ್ಥಿತಿ ಏನಾಗಿದೆ, ನಾಚಿಕೆಯಾಗುತ್ತದೆ ಎಂದ ಅವರು, ಇದನ್ನು ನೋಡಿದ್ದರೆ ಗೋಪಾಲಗೌಡರು ರಾಜಕೀಯ ನಿವೃತ್ತಿ ಪಡೆಯುತ್ತಿದ್ದರು. ನಾವಾಗಿರುವುದಕ್ಕೆ ರಾಜೀ ಮಾಡಿಕೊಂಡು ಹೋಗುತ್ತಿದ್ದೇವೆ ಎಂದರು.

ಇಂದಿನ ನಮ್ಮ ಚುನಾವಣಾ ವ್ಯವಸ್ಥೆಯಲ್ಲಿ ಪ್ರಾಮಾಣಿಕರು ಚುನಾವಣೆಗೆ ನಿಂತು ಗೆಲ್ಲುವುದು ಅತ್ಯಂತ ಕಷ್ಟದ ಪರಿಸ್ಥಿತಿಯಿದೆ. ಗೋಪಾಲಗೌಡರ ಬದುಕು ಇಂದಿನ ಎಲ್ಲ ರಾಜಕೀಯ ಪಕ್ಷಗಳು ಹಾಗೂ ರಾಜಕಾರಣಿಗಳು ಚಿಂತನೆ ಮಾಡಬೇಕು. ಈ ವ್ಯವಸ್ಥೆಯನ್ನು ಹೀಗೆ ಮುಂದುವರಿಸಿದರೆ ಪ್ರಾಮಾಣಿಕತೆ, ಬದ್ಧತೆ ಎಂಬುದೇ ಇಲ್ಲದಂತಾಗುತ್ತದೆ ಎಂದು ನುಡಿದರು.

ಬಡವರು, ದಲಿತರ, ರೈತರ ಪರವಾದ ಕಾಳಜಿಯಿದ್ದ ಗೋಪಾಲಗೌಡರು ಅತ್ಯುತ್ತಮ ಸಂಸದೀಯ ಪಟುವಾಗಿದ್ದರು. ಅವರು ವಿಧಾನಸೌಧದೊಳಗೆ ಮಾತನಾಡಿದರೆ ಸರಕಾರಕ್ಕೆ ನಡುಕ ಶುರುವಾಗುತ್ತಿತ್ತು. ಇಂದು ಶಾಸಕರು ಸದನದೊಳಗೆ ಬಾವಿಗಿಳಿದು ಹೋರಾಡುವ ಸ್ಥಿತಿಗೆ ತಲುಪಿದೆ. ಜತೆಗೆ, ಶಾಸಕರನ್ನು, ಸಚಿವರನ್ನು ಕರೆದು ತಂದು ಕೂರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಮಾತನಾಡಿ, ಶಾಲೆಯ ದಿನಗಳಲ್ಲಿಯೇ ಸ್ವಾತಂತ್ರ ಚಳವಳಿಗೆ ಬಂದಿದ್ದ ಗೋಪಾಲಗೌಡರು ದೇಶದಲ್ಲಿಯೇ ಅತ್ಯುತ್ತಮ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದು ಒಂದು ಪವಾಡದಂತಿದೆ. ಅವರ ಜೀವನದ ಕುರಿತು ನಟರಾಜ್ ಹುಳಿಯಾರ್ ಸಂಶೋಧನೆಯ ರೀತಿಯಲ್ಲಿ ಆಳವಾಗಿ ಅವರ ಹೋರಾಟದ ಸಂಘರ್ಷದ ಸಾಹಸವನ್ನು ಪುಸ್ತಕದಲ್ಲಿ ಕಟ್ಟಿಕೊಟ್ಟಿದ್ದಾರೆ ಎಂದು ಬಣ್ಣಿಸಿದರು.

ರೈತ ಚಳವಳಿಯ ಮೂಲಕ ಬೆಳೆದ ಗೋಪಾಲಗೌಡರು ಗೇಣಿದಾರರ ವಿರುದ್ಧ ಪ್ರಬಲ ಚಳವಳಿಯನ್ನು ಕಟ್ಟಿದ್ದಾರೆ. ಅವರು ಜನ ನಾಯಕರಾಗಿ ಬೆಳೆದು ಹಣಬಲ, ತೋಳ್ಬಲವಿದ್ದ ಅಂದಿನ ಕಾಂಗ್ರೆಸ್ ನಾಯಕ ಬದರಿ ನಾರಾಯಣರ ವಿರುದ್ಧ ಗೆದ್ದು ಇತಿಹಾಸ ನಿರ್ಮಿಸಿದ್ದರು. ಮೊದಲ ಚುನಾವಣೆಯಲ್ಲಿ ಗೆದ್ದರು, ಎರಡನೇ ಚುನಾವಣೆಯಲ್ಲಿ ಸೋತು, ಮೂರನೇ ಚುನಾವಣೆಯಲ್ಲಿ ಗೆದ್ದಿದ್ದರು. ಆದರೆ, ಇಂದು ಹಣವಿದ್ದವರಷ್ಟೇ ಚುನಾವಣೆಗೆ ನಿಲ್ಲಲು ಸಾಧ್ಯವಾಗುತ್ತಿದೆ. ಪ್ರಜಾಪ್ರಭುತ್ವ ಎಲ್ಲಿಗೆ ಬಂದು ನಿಂತಿದೆ ಎಂದರು. ಕಾರ್ಯಕ್ರಮದಲ್ಲಿ ಲೇಖಕ ನಟರಾಜ್ ಹುಳಿಯಾರ್ ಹಾಗೂ ಸೋನಕ್ಕ ಗೋಪಾಲಗೌಡ ಉಪಸ್ಥಿತರಿದ್ದರು.

ಇಂದಿನ ಚುನಾವಣಾ ವ್ಯವಸ್ಥೆ ಹಾಗೂ ಜನರನ್ನು ಕೆಡಿಸಿದ್ದೇವೆ. ಹೋರಾಟದ ಜೀವನದ ಮೂಲಕ ರಾಜಕೀಯಕ್ಕೆ ಬಂದ ಗೋಪಾಲಗೌಡರು ಎರಡಕ್ಕೂ ಪರಸ್ಪರ ಸಂಬಂಧ ಹೊಂದಿದ್ದರು. ಆದರೆ, ಇಂದು ರಿಯಲ್ ಎಸ್ಟೇಟ್ ಮಾಡುವವರು ರಾಜಕಾರಣಕ್ಕೆ ಬರುತ್ತಿದ್ದಾರೆ. ಪ್ರಾಮಾಣಿಕತೆಗೆ ಬೆಲೆಯೇ ಇಲ್ಲದಂತಾಗಿದೆ.

-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X