'23 ಕೋಟಿ ರೂ. ಮೊತ್ತದ ಕಾಮಗಾರಿಗೆ ಪ್ರಸ್ತಾವನೆ'
ಮಂಗಳೂರು, ಮಾ. 7: ಮಹಾನಗರಪಾಲಿಕೆಯ ಮೇಯರ್ ಆಗಿ ಅಧಿಕಾರ ವಹಿಸಿ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದ್ದು, ಈ ಅವಧಿಯಲ್ಲಿ ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು, ಎರಡನೇ ಹಂತದಲ್ಲಿ ಸುಮಾರು 23 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಿರ್ಗಮನ ಮೇಯರ್ ಭಾಸ್ಕರ ಕೆ. ಹೇಳಿದರು.
ಹಲವಾರು ಸಾಮರ್ಥ್ಯ ಅಭಿವೃದ್ಧಿ / ಹಲವಾರು ಸವಲತ್ತು ವಿತರಣೆ ಕಾರ್ಯಕ್ರಮಗಳು ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿ ನಿರ್ಮಾಣವನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಇದರೊಂದಿಗೆ ನಾಲ್ಕು ವರ್ಷಗಳಿಂದ ಪಾಲಿಕೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿ ಸಹಕಾರ ನೀಡಿದ ಎಲ್ಲ ಮಾಜಿ ಮೇಯರ್‌ಗಳ ಅವಯಲ್ಲಿ ಪ್ರಾರಂಭಿಸಿರುವ ಬಹುತೇಕ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ಮುಕ್ತಾಯಗೊಳಿಸಿದ್ದೇನೆ. ಇನ್ನೂ ಕೆಲವು ಕಾಮಗಾರಿ ಪ್ರಾರಂಭಿಸಿದ್ದು, ಪ್ರಗತಿಯಲ್ಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ಅವರು ತಿಳಿಸಿದರು.
ಅಮೃತ್ ಯೋಜನೆಯಡಿ ಒಳ ಚರಂಡಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯ 179.50 ಕೋಟಿ ರೂ. ಕಾಮಗಾರಿ ಪ್ರಗತಿಯಲ್ಲಿದೆ. ನಗರದ ನಾಲ್ಕು ಪಾರ್ಕ್‌ಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗಿದೆ. ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಮಳೆ ನೀರು ಚರಂಡಿ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ತಮ್ಮ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ವಿವರ ನೀಡಿದ ಅವರು,ಹಕಾರ ನೀಡಿದ ಉಪಮೇಯರ್, ಸ್ಥಾಯಿ ಸಮಿತಿ ಅಧ್ಯಕ್ಷರು, ಮುಖ್ಯ ಸಚೇತಕರು, ಪ್ರತಿಪಕ್ಷ ನಾಯಕರು, ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳಿಗೆ ಮೇಯ್ ಭಾಸ್ಕರ್ ಅಭಿನಂದನೆ ಸಲ್ಲಿಸಿದರು.
ಉಪಮೇಯರ್ ಮುಹಮ್ಮದ್ ಕೆ., ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಸ್ಥಾಯಿ ಸಮಿತಿ ಅಧ್ಯಕ್ಷರಾದ ನವೀನ್ ಡಿಸೋಜ, ಪ್ರವೀಣ್‌ಚಂದ್ರ ಆಳ್ವ, ಕಾರ್ಪೊರೇಟರ್‌ಗಳಾದ ಅಶೋಕ್ ಡಿ.ಕೆ., ಪ್ರತಿಭಾ ಕುಳಾಯಿ ಉಪಸ್ಥಿತರಿದ್ದರು.







