ಮಂಡ್ಕೂರು ಬಳಿ ಅಕ್ರಮ ಮರಳುಗಾರಿಕೆ: ಏಳು ಮಂದಿ ಬಂಧನ, ಐದು ಟಿಪ್ಪರ್ ವಶ

ಉಡುಪಿ, ಮಾ.8: ಮುಂಡ್ಕೂರು ಗ್ರಾಮದ ಪೊಸ್ರಾಲು ಎಂಬಲ್ಲಿ ಶಾಂಭವಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ದಾಳಿ ನಡೆಸಿದ ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕ ಕೃಷ್ಣಕಾಂತ್ ನೇತೃತ್ವದ ತಂಡ ಏಳು ಮಂದಿಯನ್ನು ಬಂಧಿಸಿ, 5 ಟಿಪ್ಪರ್ ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದೆ.
ಬಂಧಿತರನ್ನು ಸಂದೀಪ್ ಶೆಟ್ಟಿ, ಮಂಜುನಾಥ್ ಪೂಜಾರಿ, ವಿಲ್ಫ್ರೇಡ್ ಮಸ್ಕರೇನಸ್, ಬೀಮಪ್ಪ, ಮರಿಯಪ್ಪ, ವಾಲ್ಟರ್, ಲಕ್ಷ್ಮಣ್ ಎಂದು ಗುರುತಿಸಲಾಗಿದೆ. ದಾಳಿ ವೇಳೆ ದೀಪಕ್ ಕೋಟಿಯಾನ್ ಇನ್ನಾ ಎಂಬಾತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ರಮ ಮರಳುಗಾರಿಕೆಗೆ ಬಳಸಿದ್ದ ಐದು ಟಿಪ್ಪರ್, ಒಂದು ಬೈಕ್, ಆರು ಬೋಟುಗಳು ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯದ 79.75 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





