Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ. 9ರಂದು ಗೃಹ ಸಚಿವ ರಾಜನಾಥ್ ಸಿಂಗ್...

ಮಾ. 9ರಂದು ಗೃಹ ಸಚಿವ ರಾಜನಾಥ್ ಸಿಂಗ್ ಪೊಳಲಿಗೆ: ಶಾಸಕ ರಾಜೇಶ್ ನಾಯ್ಕ್

ವಾರ್ತಾಭಾರತಿವಾರ್ತಾಭಾರತಿ8 March 2019 7:50 PM IST
share
ಮಾ. 9ರಂದು ಗೃಹ ಸಚಿವ ರಾಜನಾಥ್ ಸಿಂಗ್ ಪೊಳಲಿಗೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ, ಮಾ. 8: ಕಾರ್ಯಕ್ರಮದ ನಿಮಿತ್ತ ಮಾ. 9ರಂದು ಮಂಗಳೂರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸಂಜೆ 4ಗಂಟೆಗೆ ಬ್ರಹ್ಮಕಲಶ ಸಡಗರದಲ್ಲಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೂ ಅಗಮಿಸಿ ದೇವರದರ್ಶನ ಪಡೆಯಲಿದ್ದಾರೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ತಿಳಿಸಿದ್ದಾರೆ.

ಶುಕ್ರವಾರ ಕ್ಷೇತ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ.ಕ.ಜಿಲ್ಲೆಗೆ ಆಗಮಿಸುತ್ತಿರುವ ರಾಜನಾಥ್ ಸಿಂಗ್ ಅವರು ಪೊಳಲಿ ಕ್ಷೇತ್ರಕ್ಕೂ ಭೇಟಿ ನೀಡಬೇಕು ಎಂದು ಸಂಸದ ನಳಿನ್ ಕುಮಾರ್ ರವರ ಮೂಲಕ ಮಾಡಿರುವ ಮನವಿಗೆ ಸಚಿವರು ಪೊಳಲಿ ಕ್ಷೇತ್ರಕ್ಕೆ   ಆಗಮಿಸಲು ಒಪ್ಪಿದ್ದಾರೆ ಎಂದು ಹೇಳಿದರು.

ಮಂಗಳೂರು ಕಾರ್ಯಕ್ರಮ ಮುಗಿಸಿ ಕ್ಷೇತ್ರಕ್ಕೆ ಆಗಮಿಸುವ ಅವರು ದೇವರ ದರ್ಶನ ಪಡೆದು ಇಲ್ಲಿಂದಲೇ ನೇರವಾಗಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಅವರು ಆಗಮಿಸುವ ವೇಳೆ ಹೆಚ್ಚಿನ ಭದ್ರತೆ ಇದ್ದು, ಈ ಸಮಯದಲ್ಲಿ ಕೆಲ ಹೊತ್ತು ಅಗುವ ಅಡಚಣೆಗೆ ಭಕ್ತರು ಸಹಕರಿಸುವಂತೆ ಮನವಿ ಮಾಡಿದ ಶಾಸಕರು, ಈಗಾಗಲೇ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಭದ್ರತಾ ವ್ಯವಸ್ಥೆ ಕೈಗೊಳ್ಳಲಿದ್ದಾರೆ ಎಂದರು.

ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಸೇರಿದಂತೆ ಮೊದಲಾದ ಗಣ್ಯರು ಪಾಲ್ಗೊಳ್ಳಲಿದ್ದಾರೆ ಮಾ. 12ರಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.

ಕ್ಷೇತ್ರದ ಬ್ರಹ್ಮಕಲಶೋತ್ಸವದಲ್ಲಿ ಮೊದಲ 5 ದಿನಗಳಲ್ಲಿ ನಿತ್ಯವೂ ಜಿಲ್ಲೆ, ಹೊರಜಿಲ್ಲೆಯಿಂದ  ಸಾವಿರಾರು ಮಂದಿ ಪಾಲ್ಗೊಂಡಿದ್ದು, ಎಲ್ಲಾ ದೃಷ್ಟಿಯಿಂದಲೂ ಸಕಲ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ಶುಕ್ರವಾರವು ಸುಮಾರು 50 ಸಾವಿರ ಮಂದಿ ಅನ್ನ ಪ್ರಸಾದ ಸ್ವೀಕರಿಸಿದ್ದಾರೆ. ಮಾ.10 ಹಾಗೂ 13 ರಂದು ಲಕ್ಷಾಂತರ ಮಂದಿ ಭಕ್ತರು ಅಗಮಿಸಿವ ನಿರೀಕ್ಷೆ ಇದೆ ಎಂದರು.

ಈ ವೇಳೆ ಯು.ತಾರಾನಾಥ ಆಳ್ವ, ಯು.ಸುಭಾಷ್ ನಾಯ್ಕ್, ಕೃಷ್ಣಕುಮಾರ್ ಪೂಂಜ ಫರಂಗಿಪೇಟೆ, ಕೃಷ್ಣರಾಜ ಮಾರ್ಲ ಮುತ್ತೂರು ಮೊದಲಾದವರಿದ್ದರು.

ಐಜಿಪಿ-ಎಸ್ಪಿ ಪರಿಶೀಲನೆ: ಕೇಂದ್ರ ಗೃಹ ಸಚಿವರ ಭೇಟಿಯ ಹಿನ್ನೆಲೆಯಲ್ಲಿ ಶುಕ್ರವಾರ ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಅವರು ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ಭದ್ರತೆಯ ಕುರಿತು ಪರಿಶೀಲನೆ ನಡೆಸಿದರು. ಆರಂಭದಲ್ಲಿ ದೇವರ ದರ್ಶನ ಪಡೆದು ಬಳಿಕ ಕ್ಷೇತ್ರದ ವಿವಿಧ ಭಾಗಗಳಿಗೆ ಭೇಟಿ ನೀಡಿ ಶಾಸಕ ರಾಜೇಶ್ ನಾಯ್ಕ್ ಅವರಿಂದ ಮಾಹಿತಿ ಪಡೆದರು.

ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಜೊತೆಗಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಲಕ್ಷ್ಮೀಪ್ರಸಾದ್ ಅವರಿಗೆ ಸೂಚಿಸಿದರು. ಬಂಟ್ವಾಳ ಎಎಸ್ಪಿ ಸೈದುಲು ಅಡಾವತ್, ಬಂಟ್ವಾಳ ಗ್ರಾಮಾಂತರ ಪಿಎಸ್ಸೈ ಪ್ರಸನ್ನ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X