ವಾಹನ ಢಿಕ್ಕಿ: ಅಪರಿಚಿತ ಮೃತ್ಯು
ಉಡುಪಿ, ಮಾ.8: ನಿಟ್ಟೂರು ಸಮೀಪದ ಹನುಮಂತನಗರ ಪ್ರಾಥಮಿಕ ಶಾಲೆಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾ.8ರಂದು ಬೆಳಗ್ಗೆ 6.30ರ ಸುಮಾರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಕರಾವಳಿ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದ ವಾಹನವೊಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮಾರು 35 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ 8 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





