Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ ಮೈತ್ರಿ ಸರಕಾರದಿಂದ ಅಭಿವೃದ್ಧಿ...

ರಾಜ್ಯದ ಮೈತ್ರಿ ಸರಕಾರದಿಂದ ಅಭಿವೃದ್ಧಿ ನಿರೀಕ್ಷೆ ಅಸಾಧ್ಯ: ಮ.ಪ್ರದೇಶ ಮಾಜಿ ಸಿಎಂ ಶಿವರಾಜ್‍ ಸಿಂಗ್‍ ಚೌಹಾಣ್

ತುಮಕೂರು: ರೈತ ಮೋರ್ಚಾದಿಂದ ರೈತ ಸಂವಾದ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 March 2019 10:23 PM IST
share
ರಾಜ್ಯದ ಮೈತ್ರಿ ಸರಕಾರದಿಂದ ಅಭಿವೃದ್ಧಿ ನಿರೀಕ್ಷೆ ಅಸಾಧ್ಯ: ಮ.ಪ್ರದೇಶ ಮಾಜಿ ಸಿಎಂ ಶಿವರಾಜ್‍ ಸಿಂಗ್‍ ಚೌಹಾಣ್

ತುಮಕೂರು,ಮಾ.8: ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ಯಾವಾಗ ಬೀಳುತ್ತದೆಯೋ ಗೊತ್ತಿಲ್ಲ, ಅಂತಹ ಸರ್ಕಾರದಿಂದ ಅಭಿವೃದ್ಧಿಯನ್ನು ನಿರೀಕ್ಷಿಸಲು ಸಾಧ್ಯವೆ ? ದೇಶದ ಅಭಿವೃದ್ಧಿ ಆಗಬೇಕೆಂದರೆ ಅದು ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ ಎಂದು ಮಧ್ಯಪ್ರದೇಶ ಮಾಜಿ ಸಿಎಂ ಹಾಗೂ ಬಿಜೆಪಿ ಚುನಾವಣಾ ಪ್ರಣಾಳಿಕೆ ಅಧ್ಯಕ್ಷ ಶಿವರಾಜ್‍ ಸಿಂಗ್‍ ಚೌಹಾಣ್ ತಿಳಿಸಿದ್ದಾರೆ.

ನಗರದ ಹೊರವಲಯದ ಕಲ್ಯಾಣ ಮಂಟಪದಲ್ಲಿ ರೈತ ಮೋರ್ಚಾ ವತಿಯಿಂದ ನಡೆದ ರೈತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಲೂಟಿ ಮತ್ತು ಹಂಚಿಕೆ ಸರ್ಕಾರದೊಂದಿಗೆ ಮಿತ್ರ ಪಕ್ಷಗಳು ಸೇರಿ ರಚಿಸಿಕೊಂಡಿರುವ ಘಟಬಂಧನ್‍ನಲ್ಲಿ ಸೇನಾಧಿಪತಿ ಇಲ್ಲದೇ ಚುನಾವಣೆ ಎದುರಿಸುವ ಮೂಲಕ ಬಿಜೆಪಿ ಸೇನಾಧಿಪತಿಯನ್ನು ಸೋಲಿಸಲು ಮುಂದಾಗುತ್ತಿವೆ, ರೈತರು ಮೋದಿ ಬೆಂಬಲಕ್ಕೆ ನಿಲ್ಲಬೇಕು ಎಂದು ಕರೆ ನೀಡಿದರು.

ನರೇಂದ್ರ ಮೋದಿ ಅವರ ಸರ್ಕಾರ ಪಾರದರ್ಶಕ ಆಡಳಿತವನ್ನು ನೀಡಿದೆ. ಶ್ಯಾಮ್‍ ಮುಖರ್ಜಿ, ದೀನ್‍ ದಯಾಳ್ ಉಪಾಧ್ಯಾಯ ಅವರ ಆಶಯಗಳನ್ನು ಮೋದಿ, ಅಮಿತ್ ಶಾ ಜೋಡಿ ಈಡೇರಿಸುತ್ತಿದೆ. ನವ ಭಾರತವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸ್ವಚ್ಛ ಭಾರತ, ಆಯುಷ್ಮಾನ್ ಭಾರತದಂತಹ ಕಾರ್ಯಕ್ರಮಗಳು ದೇಶದ ಅಭಿವೃದ್ಧಿಗೆ ಕಾರಣವಾಗಿವೆ. ಯುವ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದಾರೆ. ನವ ಭಾರತ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ ಎಂದರು.

ನವ ಭಾರತದ ಬೆನ್ನುಲುಬಾಗಿರುವ ರೈತರ ಅಭಿವೃದ್ಧಿಗಾಗಿ ಈಗಾಗಲೇ ಕಿಸಾನ್ ಸಮ್ಮಾನ್, ಫಸಲ್ ಭೀಮಾದಂತಹ ಯೋಜನೆಗಳನ್ನು ಜಾರಿಗೆ ತಂದಿದ್ದು, ರೈತರ ಅಭಿಪ್ರಾಯವನ್ನು ಸಂಗ್ರಹಿಸುವ ಮೂಲಕ ಪಕ್ಷದ ಪ್ರಣಾಳಿಕೆ ಸಿದ್ಧ ಪಡಿಸುವ ಜೊತೆಗೆ ರೈತಸ್ನೇಹಿ ಸರ್ಕಾರವನ್ನು ಮುಂದಿನ ದಿನಗಳಲ್ಲಿ ನರೇಂದ್ರ ಮೋದಿ ಅವರು ನಡೆಸಲಿದ್ದಾರೆ. ಅದಕ್ಕಾಗಿ ದೇಶದ ಎಲ್ಲೆಡೆಯಿಂದ ರೈತರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದ್ದು, ರೈತರು ತಮ್ಮ ಅಮೂಲ್ಯವಾದ ಸಲಹೆಗಳನ್ನು ನೀಡುವಂತೆ ವಿನಂತಿಸಿಕೊಂಡರು.

ಕಾರ್ಯಕ್ರಮದಲ್ಲಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಲಕ್ಷ್ಮಣ್ ಸವದಿ ಮಾತನಾಡಿ, ಸ್ವಾಮಿನಾಥನ್ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತಂದಿರುವುದು ಪ್ರಧಾನಿ ನರೇಂದ್ರ ಮೋದಿ ಮಾತ್ರ. 22 ಬೆಳೆಗಳಿಗೆ ಬೆಂಬಲ ಬೆಲೆಯನ್ನು ಘೋಷಿಸಿದ್ದು, ಸ್ವಾತಂತ್ರ್ಯ ನಂತರದ ಅವೈಜ್ಞಾನಿಕ ನೀತಿಯಿಂದಾಗಿ ಇಂದು ರೈತರು ಸಾಲದ ಕೂಪದಲ್ಲಿ ಮುಳುಗಿದ್ದಾರೆ. ವಾಜಪೇಯಿ ಅವರು ಗಂಗಾ ನದಿ ಜೋಡಣೆಯ ಕನಸು ಕಂಡಿದ್ದರು. ಮೋದಿ ಮತ್ತೊಮ್ಮೆ ಪ್ರಧಾನಿಯಾಗುವ ಮೂಲಕ ಅಟಲ್‍ ಜೀ ಕನಸು ಈಡೇರಿಸಲಿದ್ದಾರೆ ಎಂದು ಹೇಳಿದರು.

ರೈತರಿಗೆ ಬೇಕಿರುವುದು ಸಾಲಮನ್ನಾವಲ್ಲ. ಸೈನಿಕರು, ರೈತರು ಶ್ರೇಷ್ಠ ಸಮುದಾಯದವರು. ಅವರು ಯಾರಿಂದಲೂ ಬೇಡುವುದಿಲ್ಲ. ಆದರೆ ರೈತರು ಈ ಮೈತ್ರಿ ಸರ್ಕಾರದ ಮುಂದೆ ಸಾಲಮನ್ನಾಕ್ಕಾಗಿ ಬೇಡುವಂತಹ ಸ್ಥಿತಿ ನಿರ್ಮಾಣವಾಗಿದೆ. ರೈತರು ಬೆಂಬಲ ನೀಡಿದರೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಗಂಗಾನದಿಯನ್ನು ಕೃಷ್ಣೆಯೊಂದಿಗೆ ಜೋಡಿಸುವ ಮೂಲಕ ಇಡೀ ವಿಶ್ವಕ್ಕೆ ಆಹಾರವನ್ನು ನೀಡುವಷ್ಟು ಶಕ್ತರನ್ನಾಗಿ ರೈತರನ್ನು ಮಾಡಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಭಾರತಿ ಮುಗದಮ್, ಸುರೇಶ್‍ಗೌಡ, ಶಾಸಕರಾದ ಮಾಧುಸ್ವಾಮಿ, ಜ್ಯೋತಿಗಣೇಶ್, ಮಸಾಲೆ ಜಯರಾಮ್, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಕಿರಣ್‍ ಕುಮಾರ್, ಮಾಜಿ ವಿಧಾನಪರಿಷತ್ ಸದಸ್ಯ ಹುಲಿನಾಯ್ಕರ್, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಮುಖಂಡರಾದ ಎಂ.ಬಿ.ನಂದೀಶ್, ದತ್ತಾತ್ರೇಯ, ಬ್ಯಾಟರಂಗೇಗೌಡ, ಮಲ್ಲಪ್ಪಗೌಡ, ಬೆಟ್ಟಸ್ವಾಮಿ, ಶಾರದಾ ನರಸಿಂಹಮೂರ್ತಿ, ಹುಚ್ಚಯ್ಯ, ರಾಮಾಂಜಿನಪ್ಪ, ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ನಂದೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X