Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜಕೀಯ ಏಕತೆಯಿಂದಾಗಿ ದ.ಕ. ಜಿಲ್ಲೆಯ...

ರಾಜಕೀಯ ಏಕತೆಯಿಂದಾಗಿ ದ.ಕ. ಜಿಲ್ಲೆಯ ಅಭಿವೃದ್ಧಿ: ಆರ್.ವಿ.ದೇಶಪಾಂಡೆ

ಮೂಡುಬಿದಿರೆ ತಾಲೂಕು ಉದ್ಘಾಟನೆ, ಮಿನಿ ವಿಧಾನ ಸೌಧಕ್ಕೆ ಶಂಕುಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ8 March 2019 11:03 PM IST
share
ರಾಜಕೀಯ ಏಕತೆಯಿಂದಾಗಿ ದ.ಕ. ಜಿಲ್ಲೆಯ ಅಭಿವೃದ್ಧಿ: ಆರ್.ವಿ.ದೇಶಪಾಂಡೆ

ಮೂಡುಬಿದಿರೆ: ರಾಜಕೀಯ ಚುನಾವಣೆಗೆ ಮಾತ್ರ ಸೀಮಿತವಾಗಬೇಕು. ಅಭಿವೃದ್ಧಿಯ ವಿಚಾರ ಬಂದಾಗ ಏಕತೆಯಿಂದ ಸ್ಪಂದಿಸಬೇಕು. ಈ ಕಾರಣ ದಿಂದಾಗಿಯೇ ದಕ್ಷಿಣ ಕನ್ನಡ ಜಿಲ್ಲೆ ನಿರಂತರ ಅಭಿವೃದ್ಧಿಯ ಪಥದಲ್ಲಿ ಮುನ್ನಡೆದಿದೆ. ಟಿ.ಎ.ಪೈ, ಟಿ.ಎಂ.ಎ.ಪೈ, ಯು.ಶ್ರೀನಿವಾಸ ಮಲ್ಯ ಅವರು ಈ ನಿಟ್ಟಿನಲ್ಲಿ ಹಾಕಿಕೊಟ್ಟಿರುವ ಆದರ್ಶದ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಿ ಎಂದು ರಾಜ್ಯ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.

ಅವರು ಶುಕ್ರವಾರ ಅಪರಾಹ್ನ ಪದ್ಮಾವತಿ ಕಲಾ ಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ಸಮಾರಂಭದಲ್ಲಿ ಮೂಡುಬಿದಿರೆ ತಾಲೂಕು ಉದ್ಘಾಟನೆ ಯನ್ನು ಶಿಲಾಫಲಕಗಳು, ಮಿನಿ ವಿಧಾನ ಸೌಧದ ಮಾದರಿ ಚಿತ್ರ, ತಾಲೂಕು ನಕಾಶೆಯ ಪರದೆ ಸರಿಸಿ, ಜ್ಯೋತಿ ಬೆಳಗಿಸಿ ಮಾತನಾಡಿದರು. ಇದಕ್ಕೂ  ಮೊದಲು ತಹಶೀಲ್ದಾರ್ ಕಛೇರಿಯ ಆವರಣದಲ್ಲಿ ಮಿನಿವಿಧಾನ ಸೌಧ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಮೂಡುಬಿದಿರೆ ತಾಲೂಕಿನ ಮಿನಿವಿಧಾನ ಸೌಧಕ್ಕೆ ಈಗಾಗಲೇ 10 ಕೋಟಿ ರೂಪಾಯಿಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿ ತಾಲೂಕು ಉದ್ಘಾಟಿಸುತ್ತಿದ್ದೇನೆ. ಮೂಡುಬಿದಿರೆ, ಮೂಲ್ಕಿ ತಾಲೂಕುಗಳು ರಾಜ್ಯಕ್ಕೆ ಮಾದರಿಯಾಗಿ ಮೂಡಿಬರಲಿ ಎಂದ ಸಚಿವರು ಹೌಸಿಂಗ್ ಬೋರ್ಡ್ ಮೂಲಕ ನಡೆಯುವ ಈ ಕಾಮಗಾರಿಗೆ ತಕ್ಷಣ ಟೆಂಡರ್ ಕರೆದು ಪಾರದರ್ಶಕ, ಗುಣಮಟ್ಟದ ಕೆಲಸ ನಡೆಸುವಂತೆ ಜಿಲ್ಲಾಧಿಕಾರಿಯವರಿಗೆ ಸೂಚಿಸಿದರು. ಕೃಷಿ ಭೂಮಿ ಪರಿವರ್ತನೆಯ ಪ್ರಕ್ರಿಯೆಯನ್ನು ಆನ್ ಲೈನ್ ಮೂಲಕ ಸರಳೀಕರಣ ಮಾಡಿರುವುದು ದೇಶದಲ್ಲೇ ರಾಜ್ಯದ ಮೊದಲ ಹೆಜ್ಜೆ. 94ಸಿಸಿ ಪ್ರಕರಣಗಳಲ್ಲಿ ಅರ್ಜಿ ಹಾಕಲು ಮಾರ್ಚ್31ರವರೆಗೆ ಅವಕಾಶ ವಿಸ್ತರಿಸಲಾಗಿದೆ. ಬಗರ್‍ಹುಕುಂನಲ್ಲಿ ಫಾರ್ಮ್ 50,53ಕ್ಕೆ 2020ರ ಎ20ರವರೆಗೆ ಅವಕಾಶವಿದೆ. ಫಾರ್ಮ್57,58ರ ಪ್ರಕರಣಗಳ  ಅರ್ಜಿಗೆ ಮಾರ್ಚ್16 ಅಂತಿಮ ಅವಕಾಶವಿದೆ ಎಂದರು. ಬಗರ್ ಹುಕುಂ ಭೂಮಿಯನ್ನು 25 ವರ್ಷಗಳ ಬಳಿಕ ಪರಾಧೀನಕ್ಕೆ ಅವಕಾಶ ನೀಡುವ ಚಿಂತನೆ ಸರ್ಕಾರದ ಮುಂದಿದೆ ಎಂದವರು ಹೇಳಿದರು.

ಜಿಲ್ಲೆಯಲ್ಲಿ ಮೂಡುಬಿದಿರೆ ಮತ್ತು ಮುಲ್ಕಿ ತಾಲೂಕು ರಚನೆಯಿಂದ ಮಂಗಳೂರು ತಾಲೂಕಿನ ಒತ್ತಡ ಇಳಿದಂತಾಗಿದೆ. ಯೋಜಿತ ಬದ್ಧತೆಯಿಂದ ಪರಂಪರೆಯ ಮೂಡುಬಿದಿರೆಯನ್ನು ಉಳಿಸಿ ಬೆಳೆಸಬೇಕಾಗಿದೆ. ದೂರದರ್ಶಿತ್ವದಿಂದ ಮೂಡುಬಿದಿರೆಯಲ್ಲಿ ಆಡಳೀತಾತ್ಮಕ ಕಛೇರಿಗಳನ್ನು ಯೋಜಿಸಿ ಬೆಳೆಸಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು. ಬೆಳ್ತಂಗಡಿ ತಾಲೂಕಿನ ಒತ್ತಡ ನಿವಾರಿಸುವ ನಿಟ್ಟಿನಲ್ಲಿ ಧರ್ಮಸ್ಥಳವನ್ನೂ ತಾಲೂಕಾಗಿ ಘೋಷಿಸುವಂತೆ ಅವರು ಕಂದಾಯ ಸಚಿವರನ್ನು ವಿನಂತಿಸಿದರು.

ಮೂಡುಬಿದಿರೆ ಶಾಸಕ ಎ. ಉಮಾನಾಥ ಕೋಟ್ಯಾನ್ ಅಧ್ಯಕ್ಷತೆವಹಿಸಿ ಜನತೆಯ ಪರವಾಗಿ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರನ್ನು ಅಭಿನಂದಿ ಸಿದರು. ತಾಲೂಕು ಉದ್ಘಾಟನೆಗೈದ ಕಂದಾಯ ಸಚಿವರು, ತಾಲೂಕು ರಚನೆಗಾಗಿ ಶ್ರಮಿಸಿದ ಮಾಜಿ ಸಚಿವರುಗಳಾದ ಕೆ. ಅಮರನಾಥ ಶೆಟ್ಟಿ ಹಾಗೂ ಕೆ. ಅಭಯಚಂದ್ರ ಜೈನ್ ಅವರನ್ನು ಸಮ್ಮಾನಿಸಲಾಯಿತು. ಮುಖ್ಯಮಂತ್ರಿಯವರ ಸಂಸದೀಯ (ಕಂದಾಯ) ಕಾರ್ಯದರ್ಶಿ ಐವನ್ ಡಿ.ಸೋಜಾ, ಶಾಸಕ ಕೆ.ಹರೀಶ್ ಕುಮಾರ್, ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು, ಜಿ.ಪಂ.ಸದಸ್ಯ ಕೆ.ಪಿ.ಸುಚರಿತ ಶೆಟ್ಟಿ, ಪುರಸಭಾಧ್ಯಕ್ಷೆ ಹರಿಣಾಕ್ಷಿ ಸುವರ್ಣ, ದ.ಕ ಜಿಲ್ಲಾದಿಕಾರಿ ಎಸ್.ಸಸಿಕಾಂತ ಸೆಂಥಿಲ್ ಉಪಸ್ಥಿತರಿದ್ದರು.

ಮಂಗಳೂರು ಉಪವಿಭಾಗ ಸಹಾಯಕ ಆಯುಕ್ತ ರವಿಚಂದ್ರ ನಾಯಕ್ ಸ್ವಾಗತಿಸಿದರು. ತಹಶೀಲ್ದಾರ್ ಸುದರ್ಶನ ಬಿ.ಕೆ. ಅತಿಥಿಗಳನ್ನು ಗೌರವಿಸಿ ವಂದಿಸಿದರು. ಅಂಡಾರು ಗುಣಪಾಲ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಆರಂಭದಲ್ಲಿ ಜೈನ್ ಹೈಸ್ಕೂಲ್ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಹಕ್ಕು ಪತ್ರ, ಪಿಂಚಣಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸೌಲಭ್ಯಗಳ ವಿತರಣೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X