Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಳೆದು ಹೋದ ಅವಕಾಶಗಳ ಬಗ್ಗೆ ಚಿಂತಿಸಿ...

ಕಳೆದು ಹೋದ ಅವಕಾಶಗಳ ಬಗ್ಗೆ ಚಿಂತಿಸಿ ಫಲವಿಲ್ಲ: ಸಚಿವ ಖಾದರ್

ದ.ಕ.ಜಿಲ್ಲಾ ಯುವ ಸಮಾವೇಶ- ಕ್ರೀಡಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ9 March 2019 6:28 PM IST
share
ಕಳೆದು ಹೋದ ಅವಕಾಶಗಳ ಬಗ್ಗೆ ಚಿಂತಿಸಿ ಫಲವಿಲ್ಲ: ಸಚಿವ ಖಾದರ್

ಮಂಗಳೂರು, ಮಾ.9: ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವ ಕುರಿತು ವಿದ್ಯಾರ್ಥಿ ಜೀವನದಲ್ಲೇ ಸಿದ್ಧತೆ ಮಾಡಿಕೊಳ್ಳಬೇಕು. ವಯಸ್ಸಾದ ಬಳಿಕ ಕಳೆದು ಹೋದ ಅವಕಾಶಗಳ ಬಗ್ಗೆ ಚಿಂತಿಸಿ ಫಲವಿಲ್ಲ. ಹಾಗಾಗಿ ನಮ್ಮೆಳಗಿರುವ ಸಂಕುಚಿತ ಮನೋಭಾವವನ್ನು ಬದಿಗೊತ್ತಿ ದೇಶದ ಅಭಿವೃದ್ಧಿಗೆ ನಮ್ಮಿಂದಾಗುವಷ್ಟು ಕೊಡುಗೆ ನೀಡಲು ಮುಂದಾಗಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.

ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರೂ ಯುವ ಕೇಂದ್ರ ಮಂಗಳೂರು, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇವುಗಳ ಸಹಯೋಗದಲ್ಲಿ ಶನಿವಾರ ನಗರದ ರವೀಂದ್ರ ಕಲಾ ಭವನದಲ್ಲಿ ಜರುಗಿದ ಜಿಲ್ಲಾ ಯುವ ಸಮಾವೇಶ, ಜಿಲ್ಲಾ ಯುವ ಮಂಡಲ ಪ್ರಶಸ್ತಿ ಪ್ರದಾನ, ಕ್ರೀಡಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದಲ್ಲೇ ಹಲವು ಕಂಪೆನಿಗಳು ಉದ್ಯೋಗವಕಾಶಗಳನ್ನು ಸೃಷ್ಟಿಸುತ್ತದೆ. ಸ್ವಂತ ಉದ್ಯೋಗ ಮಾಡಲು ಸಾಲ ಇನ್ನಿತರ ಅವಕಾಶಗಳನ್ನು ನೀಡುತ್ತಿದೆ. ಆದರೆ ಬಹುತೇಕ ಯುವಕರು ವಿದೇಶಗಳಿಗೆ ಉದ್ಯೋಗ ಅರಸಿ ಹೋಗುತ್ತಿದ್ದಾರೆ. ದೇಶದ ಸಂಸ್ಕೃತಿ, ಆಚಾರ-ವಿಚಾರಗಳ ಮೌಲ್ಯ ವಿದೇಶಗಳಿಗೆ ಹೋದಾಗ ಅರಿವಾಗುತ್ತದೆ. ಜಗತ್ತಿನಲ್ಲೇ ಭಾರತವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಯುವಜನಾಂಗ ಪಣ ತೊಡಬೇಕಾಗಿದೆ ಎಂದು ಯು.ಟಿ.ಖಾದರ್ ನುಡಿದರು.

ಅಪ್ಪ ಶಾಸಕನೆಂದು ಕುಳಿತಿದ್ದರೆ...

ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಪದವಿ ಮಾಡುತ್ತಿದ್ದ ವೇಳೆ ನಾನು ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯನಾಗಿದ್ದೆ. ಅದರಲ್ಲೂ ಎನ್ನೆಸ್ಸೆಸ್ ಶಿಬಿರಗಳಲ್ಲಿ ತಪ್ಪದೆ ಭಾಗವಹಿಸುತ್ತಿದ್ದೆ. ರಸ್ತೆಗಳಿಲ್ಲದ ಊರುಗಳಲ್ಲಿ ರಸ್ತೆ ಮಾಡಲು ಎನ್ನೆಸ್ಸೆಸ್ ವಿದ್ಯಾರ್ಥಿಗಳಾದ ನಾವು ಹೋಗುತ್ತಿದ್ದೆವು. ತಂದೆ ಶಾಸಕರಾಗಿದ್ದ ಆ ಕಾಲದಲ್ಲಿ ನಾನೂ ರಸ್ತೆ ಅಗೆಯುತ್ತಿದ್ದೆ. ನೆಲದ ಮೇಲೆ ಮಲಗುತ್ತಿದ್ದೆ. ನನ್ನ ಸಹಪಾಠಿಗಳು ಶಾಸಕನ ಮಗನಾದ ನಿನಗೆ ಇದೆಲ್ಲಾ ಬೇಕಾ ಎಂದು ಕೇಳುತ್ತಿದ್ದರು. ಅದಕ್ಕೆಲ್ಲಾ ನಾನು ತಲೆ ಕೆಡಿಸಿಕೊಳ್ಳದೆ ನನ್ನ ಕೆಲಸ ಮಾಡುತ್ತಿದ್ದೆ. ಅಂದು ನಾನು ಸುಮ್ಮನೆ ಕುಳಿತಿದ್ದರೆ ಇಂದು ನಾನು ಸಚಿವನಾಗುತ್ತಿರಲಿಲ್ಲ. ಹಾಗಾಗಿ ವಿದ್ಯಾರ್ಥಿ ಜೀವನದಲ್ಲೇ ಭವಿಷ್ಯದ ಕನಸು ಕಾಣಬೇಕು ಎಂದು ಯು.ಟಿ.ಖಾದರ್ ಎಂದರು.

ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಉದಯ್ ಕುಮಾರ್ ಇರ್ವತ್ತೂರು ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿ ಡಾ. ಕೆ. ಕಿಶೋರಿ ನಾಯಕ್, ಜಿಲ್ಲಾ ಯುವಜನ ಒಕ್ಕೂಟದ ಸುರೇಶ್ ರೈ, ಎನ್ನೆಸ್ಸೆಸ್ ವಿಭಾಗದ ವಿನಿತಾ, ನೆಹರೂ ಯುವ ಕೇಂದ್ರದ ರಘುವೀರ್ ಸೂಟರ್‌ಪೇಟೆ, ಎನ್.ಜಿ. ಮೋಹನ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X