Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶರೀಫರ ತತ್ವಪದಗಳಲ್ಲಿ ಮಾನವೀಯತೆ...

ಶರೀಫರ ತತ್ವಪದಗಳಲ್ಲಿ ಮಾನವೀಯತೆ ಅನಾವರಣಗೊಳ್ಳುತ್ತದೆ: ಸಾಹಿತಿ ಶ್ರೀದರ್ ಶೇಟ್

ವಾರ್ತಾಭಾರತಿವಾರ್ತಾಭಾರತಿ9 March 2019 11:26 PM IST
share
ಶರೀಫರ ತತ್ವಪದಗಳಲ್ಲಿ ಮಾನವೀಯತೆ ಅನಾವರಣಗೊಳ್ಳುತ್ತದೆ: ಸಾಹಿತಿ ಶ್ರೀದರ್ ಶೇಟ್

ಭಟ್ಕಳ : ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ ಭಾಷಾ ಸಂಘದ ಸಹಯೋಗದಲ್ಲಿ ಸಂತ ಶಿಶುನಾಳ ಶರೀಫ್ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸಾಹಿತಿ ಶ್ರೀಧರ ಶೇಟ್ ಮಾತನಾಡಿ, ಸಂತ ಶಿಶುನಾಳ ಶರೀಫ ಓರ್ವ ದಾರ್ಶನಿಕ, ಚಿಂತಕ, ಸಮಾಜ ಸುಧಾರಕ, ಮಾತ್ರವಲ್ಲ ತಮ್ಮ ತತ್ವಪದಗಳ ಮೂಲಕ ಜೀವನಪಾಠವನ್ನು ಸಾರ್ಥಕ ಬದುಕಿನ ತತ್ವವನ್ನು ಬೋಧಿಸಿದ ಮಹಾನುಭಾವ. ವ್ಯಕ್ತಿ ಮತ್ತು ಸಮಾಜದಲ್ಲಿನ ಕೊರತೆಗಳನ್ನು ನೀಗುವಲ್ಲಿ ಅವರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದರು. 

ಶರೀಫರ ಕೋಡಗನ ಕೋಳಿ ನುಂಗಿತ್ತ, ಸೋರುತಿಹುದು ಮನೆಯ ಮಾಳಗಿ, ತರವಲ್ಲ ತಗಿ ನಿನ್ನ ತಂಬೂರಿ, ಬಿದ್ದಿಯಬ್ಬೆ ಮುದುಕಿ ಬಿದ್ದಿಯಬ್ಬೆ ಎಂಬ ಗೀತೆಗಳನ್ನು ಉಲ್ಲೇಖಿಸಿ ಅತ್ಯಂತ ಗೂಢವಾಗಿ ವಿವಿಧ ಪ್ರತಿಮೆಗಳ ಮೂಲಕ ಜೀವನ ಮೌಲ್ಯವನ್ನು ಬೋಧಿಸುತ್ತವೆ ಎಂದು ನುಡಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಆರ್.ನರಸಿಂಹ ಮೂರ್ತಿ ಮಾತನಾಡಿ ಶಿಶುನಾಳ ಶರೀಫರವರ ಬದುಕು, ಅವರ ಬರೆಹ ಎಲ್ಲರಿಗೂ ಮಾರ್ಗದರ್ಶಿ. ಅವರ ತತ್ವ ಪದಗಳ ಹಿಂದಿನ ಚಿಂತನೆಗಳನ್ನು ಅರ್ಥೈಸಿಕೊಂಡು ಬದುಕಲ್ಲಿ ಅಳವಡಿಸಿಕೊಂಡಾಗ ಸಾರ್ಥಕ ಬದುಕು ನಮ್ಮದಾಗುತ್ತದೆ. ವಿದ್ಯಾರ್ಥಿಗಳ ವಿಚಾರ, ಚಿಂತನೆಗಳನ್ನು ವಿಸ್ತರಿಸಿಕೊಳ್ಳಲು ಪುರಕವಾಗುವ ಇಂತಹ ಕಾರ್ಯಕ್ರಮಗಳನ್ನು ಸಂಘಟಿಸಿದ ಭಾಷಾ ಸಂಘ ಹಾಗೂ ಸಾಹಿತ್ಯ ಪರಿಷತ್ತಿನ ಕಾರ್ಯವನ್ನು ಶ್ಲಾಘಿಸಿದರು.

ಕಸಾಪ ತಾಲೂಕಾಧ್ಯಕ್ಷ, ಹಾಗೂ ಭಾಷಾ ಸಂಘದ ಕಾರ್ಯಾಧ್ಯಕ್ಷ ಗಂಗಾಧರ ನಾಯ್ಕ ಪ್ರಾಸ್ತಾವಿಕ ನುಡಿಗಳನ್ನಾಡಿ ಕನ್ನಡ ನೆಲದ ಸಾಹಿತ್ಯ ಪರಂಪರೆಯನ್ನು ಪರಿಚಯಿಸುವುದು ಹಾಗೂ ಲೋಕದ ಒಳಿತಿಗಾಗಿ ನೂರಾರು ತತ್ವಪದಗಳನ್ನು ನೀಡಿದ ಕರ್ನಾಟಕದ ಕಬೀರರೆಂದೇ ಹೆಸರಾದ, ಮೊದಲ ಮುಸ್ಲೀಂ ಅನುಭಾವಿ ಕವಿಯಾದ ಶಿಶುನಾಳ ಷರೀಫರ ಬದುಕು, ಅವರ ತತ್ವಪದಗಳನ್ನು ಮತ್ತು ಅದರ ಹಿಂದಿನ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ದಾಟಿಸುವುದು ಇಂತಹ ಕಾರ್ಯಕ್ರಮದ ಉದ್ದೇಶ ಎಂದು ತಿಳಿಸಿದರು.

ಶಿಶುನಾಳ ಶರೀಫ್ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪ್ರಶಿಕ್ಷಣಾರ್ಥಿ ಸುಮನಾ, ಸಿಂಧು ನಾಯ್ಕ, ಮಂಗಲಾ ಶೇಟ್, ರೋಹಿಣಿ, ರಾಧಿಕಾ ಮತ್ತು ಭಾರತಿ ನಾಯ್ಕ ಮುಂತಾದವರರು ಶರೀಫರ ಗೀತೆಗಳನ್ನು ಪ್ರಸ್ತುತ ಪಡಿಸಿದರೆ ಸಹನಾ ಬಂಡಾರಿ ಗೀತೆಗಳ ಹಿನ್ನೆಲೆಯನ್ನು ತಿಳಿಸಿದರು. ಪವಿತ್ರಾ ನಾಯ್ಕ ಷರೀಫರ ಬದುಕಿನ ಬಗೆಗೆ ಪರಿಚಯಿಸಿದರು. 

ವೇದಿಕೆಯಲ್ಲಿ ಉಪಸ್ಥಿತರಿದ್ದ ಭಾಷಾ ಸಂಘದ ಕಾರ್ಯದರ್ಶಿ ಪಿ.ಜಿ,ಚೈತನ್ಯ ಅತಿಥಿಗಳನ್ನು ಪರಿಚಯಿಸಿದರು. ಭಾಷಾ ಸಂಘದ ಸದಸ್ಯೆ ವಿದ್ಯಾ ನಾಯ್ಕ ಸ್ವಾಗತಿಸಿದರೆ ಸಿಂಧು ಹಾಗೂ ಸಂಗಡಿಗರು ಶರೀಫರ ತತ್ವ ಪದಗಳ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಸಂತ .ಭಾಷಾ ಸಂಘದ ಸದಸ್ಯೆ ಕು, ಚಂದ್ರಪ್ರಭಾ ಕೊಡಿಯಾ ಕಾರ್ಯಕ್ರಮ ನಿರೂಪಿಸಿದರೆ ರಾಧಿಕಾ ವಂದಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವೃಂದದವರು ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X