Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಳಲಿ ರಾಜರಾಜೇಶ್ವರಿ ದೇವಳಕ್ಕೆಭೇಟಿ...

ಪೊಳಲಿ ರಾಜರಾಜೇಶ್ವರಿ ದೇವಳಕ್ಕೆಭೇಟಿ ನೀಡಿದ ರಾಜನಾಥ ಸಿಂಗ್

ವಾರ್ತಾಭಾರತಿವಾರ್ತಾಭಾರತಿ9 March 2019 11:30 PM IST
share
ಪೊಳಲಿ ರಾಜರಾಜೇಶ್ವರಿ ದೇವಳಕ್ಕೆಭೇಟಿ ನೀಡಿದ ರಾಜನಾಥ ಸಿಂಗ್

ಬಂಟ್ವಾಳ, ಮಾ. 9: ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳಕ್ಕೆ ಶನಿವಾರ ಸಂಜೆ ಭೇಟಿ ನೀಡಿ, ದರ್ಶನ ಪಡೆದರು.

ಕಾರ್ಯಕ್ರಮ ನಿಮಿತ್ತ ಮಂಗಳೂರಿಗಾಗಮಿಸಿದ್ದ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು, ವಾಪಸ್ ದೆಹಲಿಗೆ ತೆರಳುವ ಸಂದರ್ಭ ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿದರು.

ಮಂಗಳೂರಿನಿಂದ ರಸ್ತೆ ಮೂಲಕ ಫರಂಗೀಪೇಟೆ, ಕಡೇಗೋಳಿ, ಕಲ್ಪನೆಯಾಗಿ ಪೊಳಲಿ ದೇವಸ್ಥಾನಕ್ಕೆ ಅಗಮಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸಚಿವರೊಂದಿಗೆ ಇದ್ದರು. ದೇವಳದ ಹೊರಾಂಗಣದಲ್ಲಿ ಸಚಿವ ರಾಜನಾಥ ಸಿಂಗ್ ಅವರನ್ನು ಬ್ರಹ್ಮಕಲಶ ಸಮಿತಿ ಅಧ್ಯಕ್ಷ, ಶಾಸಕ ಯು.ರಾಜೇಶ್ ನಾಯ್ಕ್, ಗೌರವಾಧ್ಯಕ್ಷ ನಾಗರಾಜ ಶೆಟ್ಟಿ, ಏರ್ಯ ಲಕ್ಷೀನಾರಾಯಣ ಆಳ್ವ, ಶಾಸಕ ಉಮಾನಾಥ ಕೋಟ್ಯಾನ್, ದೇವಳದ ಅನುವಂಶಿಕ ಆಡಳಿತ ಮೊಕ್ತೇಸರರಾದ ಅಮ್ಮುಂಜೆಗುತ್ತು ಡಾ.ಮಂಜಯ್ಯ ಶೆಟ್ಟಿ, ಮೊಕ್ತೇಸರ ತಾರನಾಥ ಆಳ್ವ ಉಳಿಪಾಡಿಗುತ್ತು, ಚೇರಸೂರ್ಯನಾರಾಯಣ ರಾವ್ ಮೊದಲಾದವರು ಸ್ವಾಗತಿಸಿದರು.

ಶ್ರೀದೇವರ ದರ್ಶನ ಪಡೆದ ಸಚಿವರಿಗೆ ಅರ್ಚಕರು, ತಂತ್ರಿವರ್ಯರು ದೇವಳದ ಐತಿಹ್ಯವನ್ನು ಸಂಸ್ಕೃತದಲ್ಲಿ ವಿವರಿಸಿದರಲ್ಲದೆ ಪ್ರಾರ್ಥಿಸಿ ಪ್ರಸಾದವಿತ್ತರು.
ಶಾಸಕ ಯು.ರಾಜೇಶ್ ನಾಯ್ಕ್ ಅವರು ದೇವಳದ ಇತಿಹಾಸ ಪುಸ್ತಕ, ಸ್ಮರಣಿಕೆ ನೀಡಿ ಗೌರವಿಸಿದರು. ತಾಪಂ ಸದಸ್ಯ ಯಶವಂತ ಪೊಳಲಿ, ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ, ಉದಯಕುಮಾರ್ ರಾವ್ ಬಂಟ್ವಾಳ,ಪವನ್ ಕುಮಾರ್ ಶೆಟ್ಟಿ, ಡಾ. ಆಶಾಜ್ಯೋತಿ ರೈ ಮೊದಲಾದವರು ಉಪಸ್ಥಿತರಿದ್ದರು.

4 ತಾಸು ನಿರ್ಬಂಧ:

ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅಗಮನ ಮತ್ತು ದೇವಳದ ಒಳಾಂಗಣದಲ್ಲಿ ವೈಧಿಕ ವಿಧಿವಿಧಾನಗಳ ಹಿನ್ನಲೆಯಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.30ರವರೆಗೆ ಸಾರ್ವಜನಿಕರಿಗೆ ದೇವರದರ್ಶನಕ್ಕೆ ನಿರ್ಬಂಧಿಸಲಾಗಿತ್ತು. ದೇವಳ ಪ್ರವೇಶದ ಎರಡು ಭಾಗದಲ್ಲಿ ಬ್ಯಾರಿಕೇಡ್ ಹಾಕಿ ತಡೆ ಹಾಕಲಾಗಿತ್ತು.

ಗೃಹ ಸಚಿವ ರಾಜನಾಥ ಸಿಂಗ್ ಸುಮಾರು ಸಂಜೆ 5.23 ಕ್ಕೆ ಅಗಮಿಸಿದ್ದು, 5.40ರ ಹೊತ್ತಿಗೆ ದೇವಳದಿಂದ ವಿಮಾನ ನಿಲ್ದಾಣದತ್ತ ನಿರ್ಗಮಿಸಿದರು. ಈ ಸಂದರ್ಭದಲ್ಲಿ ದೇವಳದ ಹೊರಭಾಗದಲ್ಲಿ ನಿಂತಿದ್ದ ಜನಸ್ತೋಮದತ್ತ ಕೈ ಬೀಸಿದಾಗ ಜೈಕಾರ ಮೊಳಗಿತು. ಸಚಿವರು ತೆರಳುತ್ತಿದ್ದಂತೆ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಐಜಿಪಿ ಅರುಣ್ ಚಕ್ರವರ್ತಿ ಅವರ ನೇತೃತ್ವದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X