ರೇವಣ್ಣ ಮಾತಿಗೆ ಕ್ಷಮೆ ಯಾಚಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ
ಸುಮಲತಾ ವಿರುದ್ಧ ವಿವಾದಾತ್ಮಕ ಹೇಳಿಕೆ

ಬೆಂಗಳೂರು, ಮಾ. 10: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ವಿಚಾರವಾಗಿ ನಟಿ ಸುಮಲತಾ ಅಂಬರೀಶ್ ವಿರುದ್ಧ ಸಚಿವ ರೇವಣ್ಣ ನೀಡಿದ್ದ ಹೇಳಿಕೆಗೆ ಸಂಬಂಧಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಕ್ಷಮೆ ಯಾಚಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುಮಲತಾ ಅವರ ವಿರುದ್ಧ ರೇವಣ್ಣ ಮಾತನಾಡಿಲ್ಲ. ನಾನು ಈ ಬಗ್ಗೆ ರೇವಣ್ಣರೊಂದಿಗೆ ಮಾತನಾಡಿ, ಯಾಕೆ ಈ ಹೇಳಿಕೆ ನೀಡಿದ್ದೀರಿ ಎಂದು ಕೇಳಿದ್ದು, ಸುಮಲತಾ ಅವರು ಅಂಬರೀಶ್ ಅಗಲಿರುವ ನೋವಿನಲ್ಲಿದ್ದಾರೆ. ಈ ನಡುವೆ ರಾಜಕೀಯ ಬೇಡವಾಗಿತ್ತು ಎನ್ನುವ ದೃಷ್ಟಿಯಲ್ಲಿ ನಾನು ಹೇಳಿದ್ದು ಅಷ್ಟೆ ಎಂದು ಹೇಳಿದ್ದಾರೆ. ಆದರೂ ಅವರು ಈ ರೀತಿ ಹೇಳಿಕೆ ನೀಡಬಾರದಿತ್ತು. ರೇವಣ್ಣ ಅವರ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಅವರ ಪರವಾಗಿ ಕ್ಷಮೆ ಕೇಳುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
Next Story





