ಗೃಹರಕ್ಷಕ ಶಿವಪ್ರಸಾದ್ ಗೆ ರಾಜ್ಯ ಮಟ್ಟದಲ್ಲಿ ಚಿನ್ನದ ಪದಕ

ಉಡುಪಿ, ಮಾ.10: ಉಡುಪಿ ಜಿಲ್ಲಾ ಗೃಹರಕ್ಷಕದಳದ ಕಾರ್ಕಳ ಘಟಕದ ಗೃಹರಕ್ಷಕ ಶಿವಪ್ರಸಾದ್ ಇವರು ಬೆಂಗಳೂರಿನ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಮೂಲ ಅಗ್ನಿಶಮನ ತರಬೇತಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಪಡೆದಿದ್ದಾರೆ.
ಶಿವಪ್ರಸಾದ್ ಇವರ ಸಾಧನೆಯನ್ನು ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ.ಕೆ. ಪ್ರಶಾಂತ್ ಶೆಟ್ಟಿ ಅಭಿನಂದಿಸಿದ್ದಾರೆ ಎಂದು ಉಡುಪಿ ಗೃಹ ರಕ್ಷಕ ದಳದ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





