ಲೋಕಸಭಾ ಚುನಾವಣೆಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಹೊಸದಿಲ್ಲಿ, ಮಾ.10: ಮುಂಬರುವ ಲೋಕಸಭಾ ಚುನಾವಣೆಯ ಮತದಾನ ಎಪ್ರಿಲ್ 11ರಿಂದ ಮೇ 19ರವರೆಗೆ 7 ಹಂತಗಳಲ್ಲಿ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ದೇಶಾದ್ಯಂತ 10 ಲಕ್ಷ ಮತಗಟ್ಟೆಗಳಿವೆ. 8.6 ಕೋಟಿ ಹೊಸ ಮತದಾರರ ಸೇರ್ಪಡೆಯಾಗಿದ್ದು, ದೇಶದಲ್ಲಿ 90 ಕೋಟಿ ಮತದಾರರಿದ್ದಾರೆ ಎಂದವರು ಹೇಳಿದರು.
ಚುನಾವಣೆಯಲ್ಲಿ 17.4 ಲಕ್ಷ ವಿವಿಪ್ಯಾಟ್ ಗಳನ್ನು ಬಳಸಲಾಗುತ್ತದೆ. ಎಲ್ಲಾ ಮತದಾನ ಕೇಂದ್ರಗಳಲ್ಲಿ ಕುಡಿಯುವ ನೀರು, ವಿದ್ಯುತ್ ಇತರ ಸೌಲಭ್ಯಗಳಿರುತ್ತದೆ. ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆಗೆ ಅವಕಾಶವಿಲ್ಲ ಎಂದವರು ಹೇಳಿದರು.
ಲೋಕಸಭಾ ಚುನಾವಣೆಯ ಮತದಾನದ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿದೆ
ಮೊದಲ ಹಂತ: ಚುನಾವಣಾ ದಿನಾಂಕ ಎಪ್ರಿಲ್ 11ರಂದು
2ನೆ ಹಂತ: ಎಪ್ರಿಲ್ 18
3ನೆ ಹಂತ: ಎಪ್ರಿಲ್ 23
4ನೆ ಹಂತ: ಎಪ್ರಿಲ್ 29
5ನೆ ಹಂತ: ಮೇ 6
6ನೆ ಹಂತ: ಮೇ 12
7ನೆ ಹಂತ: ಮೇ 19
ಫಲಿತಾಂಶ ದಿನಾಂಕ: ಮೇ 23ರಂದು
ಮೊದಲ ಹಂತದಲ್ಲಿ 20 ರಾಜ್ಯಗಳ 91 ಕ್ಷೇತ್ರಗಳಿಗೆ , ಎ.18ರಂದು ಎರಡನೇ ಹಂತದಲ್ಲಿ 13 ರಾಜ್ಯಗಳಲ್ಲಿ 97 ಕ್ಷೇತ್ರಗಳಲ್ಲಿ , ಎ.23ರಂದು ಮೂರನೇ ಹಂತಗಳ ಮತದಾನ ನಡೆಯಲಿದೆ . ಕರ್ನಾಟಕದಲ್ಲಿ ಎರಡು ಹಂತಗಳ ಮತದಾನ ನಡೆಯಲಿದ್ದು, ಮೊದಲ ಹಂತದಲ್ಲಿ ಎ.18ರಂದು 14 ಕ್ಷೇತ್ರಗಳಲ್ಲಿ ಮತ್ತು ಎರಡನೇ ಹಂತದಲ್ಲಿ ಎ.23ರಂದು ಉಳಿದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ ಎಂದು ಮಾಹಿತಿ ನೀಡಿದರು.







