Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಕಸಭಾ ಸಮರ: ಕರ್ನಾಟಕದಲ್ಲಿ 2...

ಲೋಕಸಭಾ ಸಮರ: ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ-ದಿನಾಂಕ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ10 March 2019 5:54 PM IST
share
ಲೋಕಸಭಾ ಸಮರ: ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ-ದಿನಾಂಕ ಪ್ರಕಟ

ಬೆಂಗಳೂರು, ಮಾ. 10: ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ರಾಜ್ಯದಲ್ಲಿ ಮೊದಲ ಹಂತದ ಮತದಾನ ಎಪ್ರಿಲ್ 18 ಮತ್ತು ಎಪ್ರಿಲ್ 23ರಂದು ಎರಡು ಹಂತದ ಮತದಾನ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ರಾಜ್ಯ ಮುಖ್ಯಚುನಾವಣಾ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ.

ರವಿವಾರ ಮುಖ್ಯ ಚುನಾವಣಾ ಆಯುಕ್ತರ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣಾ ಮಾದರಿ ನೀತಿ ಸಂಹಿತೆ ಮಾ.10 ರಿಂದಲೇ ಜಾರಿಗೆ ಬರಲಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಮೊದಲನೆ ಹಂತ: ಚುನಾವಣಾಧಿಕಾರಿಗಳಾಗಿರುವ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದು, ಮಾರ್ಚ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭ, ಮಾ.26ಕ್ಕೆ ನಾಮಪತ್ರಕ್ಕೆ ಕೊನೆಯ ದಿನ. ಮಾ.27ರಂದು ನಾಮಪತ್ರ ಪರಿಶೀಲನೆ, ಮಾ.29 ರಂದು ನಾಮಪತ್ರ ಹಿಂಪಡೆಯುವ ಅವಕಾಶ ಕಲ್ಪಿಸಲಾಗಿದೆ. ಎಪ್ರಿಲ್ 18ರಂದು ಮತದಾನ ನಡೆಯಲಿದೆ.

ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ(ಎಸ್ಸಿ ಮೀಸಲು), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್ಸಿ ಮೀಸಲು) ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಎರಡನೆ ಹಂತ: ಮಾರ್ಚ್ 28ರಂದು ಅಧಿಸೂಚನೆ ಹೊರಡಿಸಲಿದ್ದು, ಎಪ್ರಿಲ್ 4ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, ಎಪ್ರಿಲ್ 5ರಂದು ನಾಮಪತ್ರ ಪರಿಶೀಲನೆ, ಎಪ್ರಿಲ್ 8ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಎಪ್ರಿಲ್ 23ರಂದು ಎರಡನೆ ಹಂತದ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ(ಎಸ್ಸಿ ಮೀಸಲು), ಕಲಬುರಗಿ (ಎಸ್ಸಿ ಮೀಸಲು), ರಾಯಚೂರು(ಎಸ್ಟಿ ಮೀಸಲು), ಬೀದರ್, ಕೊಪ್ಪಳ, ಬಳ್ಳಾರಿ (ಎಸ್ಟಿ ಮೀಸಲು), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಹಾಗೂ ಶಿವಮೊಗ್ಗ ಕ್ಷೇತ್ರಕ್ಕೆ ಎರಡನೆ ಹಂತದಲ್ಲಿ ಚುನಾವಣೆ ನಡೆಯಲಿದೆ.

ರಾಜ್ಯದಲ್ಲಿ ಒಟ್ಟು ಪುರುಷರು-2.54 ಕೋಟಿ, ಮಹಿಳೆಯರು-2.48 ಕೋಟಿ, ಇತರೆ 4,718 ಸೇರಿದಂತೆ ಒಟ್ಟು 5,03,46,721 ಮಂದಿ ಮತದಾರರಿದ್ದಾರೆ. ಒಟ್ಟು 58,186 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಆ ಪೈಕಿ 600 ಪಿಂಕ್ ಮತಗಟ್ಟೆಗಳಿವೆ. ಈ ಬಾರಿಯೂ ಇವಿಎಂ, ವಿವಿ ಪ್ಯಾಟ್ ವ್ಯವಸ್ಥೆ ಕಲ್ಪಿಸಲಾಗಿದೆ.

ಹದ್ದಿನ ಕಣ್ಣು: ಮತಗಟ್ಟೆಗಳಲ್ಲಿ ಸುರಕ್ಷತೆ ದೃಷ್ಟಿಯಿಂದ ರಾಜ್ಯದ 5 ಸಾವಿರ ಮತಗಟ್ಟೆಗಳಲ್ಲಿ ವಿಡಿಯೋ ರೇಕಾರ್ಡಿಂಗ್ ಮಾಡಲಾಗುವುದು. ಚುನಾವಣಾ ಆಯೋಗದ ನಿರ್ದೇಶನದಂತೆ 11 ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ತೋರಿಸಿ ಮತದಾನ ಮಾಡಬಹುದಾಗಿದೆ. ಚುನಾವಣೆಗೆ ಏಳು ದಿನಗಳ ಮೊದಲು ಚುನಾವಣಾ ಗುರುತಿನ ಚೀಟಿಯ ಸ್ಲಿಪ್ ನೀಡಲಾಗುತ್ತದೆ. ಇದು ಗುರುತಿಸಲು ಮಾತ್ರ ಬಳಸಲಾಗುವುದು. ಇದರಿಂದ ಮತದಾನದ ಅವಕಾಶವಿರುವುದಿಲ್ಲ ಎಂದು ಹೇಳಿದರು.

ಎಲ್ಲ ಮತಗಟ್ಟೆಗಳು ನೆಲ ಮಹಡಿಯಲ್ಲಿಯೇ ಇರಬೇಕು ಹಾಗೂ ವಿಶೇಷ ಚೇತನರಿಗೆ ಅನುಕೂಲಕ್ಕಾಗಿ ವೀಲ್‌ಚೇರ್‌ನೊಂದಿಗೆ ಗುಣಮಟ್ಟದ ರ್ಯಾಂಪ್‌ಗಳನ್ನು ಒದಗಿಸಲು, ಮನೆಯಿಂದ ಮತಗಟ್ಟೆಗೆ, ಮತಗಟ್ಟೆಯಿಂದ ಮನೆಗೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ವೋಟರ್ ಗೈಡ್: ಚುನಾವಣೆಯಲ್ಲಿ ವೋಟರ್ ಗೈಡ್ ಅನ್ನು ನೀಡಲಾಗುತ್ತದೆ. ಇದರಲ್ಲಿ ಚುನಾವಣೆಯ ದಿನಾಂಕ ಹಾಗೂ ಸಮಯ, ಮತಗಟ್ಟೆಯ ಅಧಿಕಾರಿ ಸಂಪರ್ಕ ಮಾಹಿತಿ, ಪ್ರಮುಖ ವೈಬ್ ಸೈಟ್‌ಗಳು, ಸಹಾಯವಾಣಿ ಸಂಖ್ಯೆಗಳು, ಮತಗಟ್ಟೆ ಗುರುತಿಸಲು ಬೇಕಾದ ದಾಖಲೆಗಳು ಮತ್ತು ಮತಗಟ್ಟೆಯಲ್ಲಿ ಮತದಾರರು ಮಾಡಬೇಕಾದ ಹಾಗೂ ಮಾಡಬಾರದ ವಿಷಯಗಳು ಸೇರಿದಂತೆ ಪ್ರಮುಖ ಮಾಹಿತಿ ಒಳಗೊಂಡಿರುತ್ತದೆ ಎಂದರು.

ಮತದಾರರು ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಹಾಗೂ ಮತ್ತಿತರರು ಚುನಾವಣಾ ಅಕ್ರಮದಲ್ಲಿ ತೊಡಗಿಸಿಕೊಂಡಿದ್ದಾಗ, ಹಣ ಹಂಚಿಕೆ, ಆಮಿಷ ಸೇರಿದಂತೆ ಮತ್ತಿತರೆ ಅಕ್ರಮದಲ್ಲಿ ಪಾಲ್ಗೊಂಡಿದ್ದವರ ಕುರಿತು ಮಾಹಿತಿ ನೀಡಲು ಎಸ್‌ವಿಇಇಪಿ ಎಂಬ ಆ್ಯಪ್ ಅನ್ನು ಅಭಿವೃದ್ಧಿ ಪಡಿಸಲಾಗಿದೆ. ಇದರಲ್ಲಿ ಫೋಟೋ ಅಥವಾ ವಿಡಿಯೋವನ್ನು ಅಪ್‌ಲೋಡ್ ಮಾಡಿ ದೂರು ಸಲ್ಲಿಸಬಹುದು. ಅದಕ್ಕೆ ಜಿಪಿಎಸ್ ತಂತ್ರಾಂಶ ಅಳವಡಿಸಿದ್ದು, ದೂರು ನೀಡಿದ 4-5 ನಿಮಿಷಯದಲ್ಲಿ ಆಯೋಗದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಾರೆ ಎಂದು ಮಾಹಿತಿ ನೀಡಿದರು

ಫಲಿತಾಂಶದೊಳಗೆ ವೆಚ್ಚ ಘೋಷಣೆ ಕಡ್ಡಾಯ: ಚುನಾವಣಾ ಆಯೋಗದ ಆದೇಶದನ್ವಯ ಮತದಾನ ನಡೆದ ದಿನದಿಂದ ಫಲಿತಾಂಶ ಪ್ರಕಟವಾಗುವರೆಗಿನ 30 ದಿನಗಳ ಕಾಲಾವಧಿಯಲ್ಲಿ ಎಲ್ಲ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಚುನಾವಣಾ ವೆಚ್ಚವನ್ನು ಕಡ್ಡಾಯವಾಗಿ ಮಾಧ್ಯಮದ ಮೂಲಕ ಹಾಗೂ ತಮ್ಮ ತಮ್ಮ ಪಕ್ಷದ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಘೋಷಣೆ ಮಾಡಬೇಕು ಎಂದು ಹೇಳಿದರು.

ಮತದಾರರ ಸಹಾಯವಾಣಿ:
ಮತದಾರರ ಅನುಕೂಲಕ್ಕಾಗಿ ಚುನಾವಣಾ ಆಯೋಗ ಈ ಬಾರಿ ಇಡೀ ರಾಜ್ಯಕ್ಕೆ ಒಂದೇ ಸಹಾಯವಾಣಿ ರೂಪಿಸಲಾಗಿದೆ. ‘1950’ ಸಂಖ್ಯೆಯು ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿಯೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತದೆ. ಸಲಹೆ, ಸೂಚನೆ ಹಾಗೂ ದೂರುಗಳನ್ನು ಇಲ್ಲಿ ನೋಂದಾಯಿಸಿಕೊಳ್ಳಬಹುದು.

ಸುವಿಧ: ಏಕಗವಾಕ್ಷಿ ಅನುಮತಿ ವ್ಯವಸ್ಥೆ: ಚುನಾವಣೆಗೆ ಬೇಕಾಗಿರುವ ಎಲ್ಲ ರೀತಿಯ ಅನುಮತಿಯನ್ನು 24 ಗಂಟೆಯಲ್ಲಿ ಸಿಗುವಂತೆ ಏಕಗವಾಕ್ಷಿ ಅನುಮತಿ ನೀಡುವ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಸಭೆ, ಸಮಾರಂಭ, ರ್ಯಾಲಿ, ವಾಹನಗಳು, ತಾತ್ಕಾಲಿಕ ಕಚೇರಿಗಳು ಸೇರಿದಂತೆ ಮತ್ತಿತರೆ ಇಲಾಖೆಗಳನ್ನು ಸಮನ್ವಯಗೊಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X