Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅನುಭವಿಗಳ ಮಾರ್ಗದರ್ಶನ ಯುವ ಸಂಶೋಧಕರಿಗೆ...

ಅನುಭವಿಗಳ ಮಾರ್ಗದರ್ಶನ ಯುವ ಸಂಶೋಧಕರಿಗೆ ಸಿಗುತ್ತಿಲ್ಲ: ಸಾಹಿತಿ ಡಾ.ಜಿ.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ10 March 2019 10:28 PM IST
share
ಅನುಭವಿಗಳ ಮಾರ್ಗದರ್ಶನ ಯುವ ಸಂಶೋಧಕರಿಗೆ ಸಿಗುತ್ತಿಲ್ಲ: ಸಾಹಿತಿ ಡಾ.ಜಿ.ಅಶ್ವತ್ಥನಾರಾಯಣ

ಬೆಂಗಳೂರು, ಮಾ.10: ಪ್ರತಿಭಾವಂತ ಹಿರಿಯ ಅನುಭವಿಗಳ ಮಾರ್ಗದರ್ಶನದ ಕೊರತೆಯಿಂದಾಗಿ ಸಂಶೋಧನೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳು ಒಂದು ರೀತಿಯಲ್ಲಿ ಅನಾಥರಾಗಿದ್ದಾರೆ ಎಂದು ಹಿರಿಯ ಸಾಹಿತಿ ಪ್ರೊ.ಜಿ.ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟಿದ್ದಾರೆ. 

ರವಿವಾರ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಸಿದ್ಧಮಂಗಳಾ ಸೇವಾ ಕೇಂದ್ರ ಆಯೋಜಿಸಿದ್ದ ‘ಜಗದಗಲ ಮಂಟಪ’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಅಧಿಕೃತ ಸಂಶೋಧಕರಿಗೆ ಅರ್ಹತೆ ಸಾಲದು. ಅನಧಿಕೃತ ಸಂಶೋಧಕರಿಗೆ ಅವಕಾಶವಿಲ್ಲ ಎಂಬ ದುಸ್ಥಿತಿ ಪರಿಹಾರವಾದಲ್ಲಿ ಸಂಶೋಧನಾ ಬರಹಗಳು ಉತ್ತಮ ಮಟ್ಟಕ್ಕೆ ಏರಲಿವೆ. ಈ ನಿಟ್ಟಿನಲ್ಲಿ ಅಸಹಾಯಕ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುತ್ತಿರುವ ಡಾ.ಶೀಲಾದೇವಿ ಎಸ್.ಮಳೀಮಠ ಅವರ ಕಾರ್ಯ ನಿಜಕ್ಕೂ ಪ್ರಶಂಸನೀಯ. ಅವರ ಸಂಪಾದತಕ್ವದಲ್ಲಿ ಮೂಡಿ ಬಂದಿರುವ ಜಗದಗಲ ಮಂಟಪ ಕೃತಿ ಅತ್ಯದ್ಭುತ ಸಂಶೋಧನಾ ಮೀಮಾಂಸೆಯಾಗಿ ಹೊರಹೊಮ್ಮಿದೆ ಎಂದರು.

ಕೇವಲ ಪದವಿಗಾಗಿ ಅಧ್ಯಯನ ಮಾಡುವ ಸಂಶೋಧಕರೇ ನಮ್ಮಲ್ಲಿ ಹೆಚ್ಚಾಗಿದ್ದಾರೆ. ಸಾಹಿತ್ಯ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಬಲ್ಲ ಸಂಶೋಧಾನಾತ್ಮಕ ಸಾಹಿತಿಗಳ ಅವಶ್ಯವಿದೆ. ನಮ್ಮಲ್ಲಿ ಬಿಡುವಿನ ವೇಳೆಯಲ್ಲಿ ಕೆಲಸಮಾಡುವ ಸಂಶೋಧಕರೇ ಹೆಚ್ಚಾಗಿದ್ದು, ಕೆಲ ಸಂಶೋಧಕರು ಕಾಲ ಮಿತಿಯಲ್ಲಿ ಕೆಲಸ ಮಾಡುವುದು ಹಾಗೂ ನಾನಾ ಕಾರಣಗಳಿಂದ ಪಾರ್ಟ್ ಟೈಮ್ ಬಿಝಿನೆಸ್ ಮಾಡಿಕೊಂಡಿದ್ದಾರೆ. ಸಂಶೋಧನೆ ಪೂರ್ಣ ಪ್ರಮಾಣ ಕೆಲಸವೇ ಹೊರತು ಅರೆಹೊತ್ತಿನ ಕೆಲಸವಲ್ಲ. ಮೂಲ ಗ್ರಂಥವನ್ನು ಅಧ್ಯಯನ ಮಾಡಿ ಶ್ರೇಷ್ಠ ಲೇಖನದ ಮೂಲದ ಅಮೂಲ್ಯವಾದ ಕೊಡುಗೆ ನೀಡುವವರೇ ನಮ್ಮಲ್ಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ ಮಾತನಾಡಿ, ಲೇಖಕರು ಸಂಶೋಧನಾತ್ಮ ಸಾಹಿತ್ಯಗಳ ಮಹತ್ವವೇನೆಂಬುದನ್ನು ಅರಿಯಬೇಕಿದೆ. ಸಂಶೋಧನಾ ಕ್ಷೇತ್ರದಲ್ಲಿ ತಿದ್ದಿ, ತೀಡುವ ಪರಂಪರೆ ಮರುಕಳಿಸಬೇಕು. ಸಂಶೋಧನಾ ಸಾಹಿತ್ಯ ರಚಿಸುವವನಿಗೆ ಮೂಲಗ್ರಂಥ ಅಧ್ಯಯನ, ಭಾಷೆಯ ಮೇಲಿನ ಹಿಡಿತ,ಪದ ಬಳಕೆ ಹಾಗೂ ಸಾಮಾನ್ಯವಾದ ತಿಳಿವಳಿಕೆ ಅಗತ್ಯವಿದೆ. ಇಂದಿನ ಯುವ ಸಾಹಿತಿಗಳು ಇದನ್ನು ಅರಿಯಬೇಕಿದೆ ಎಂದು ಹೇಳಿದರು.

ಮಹಾರಾಣಿ ಅಮ್ಮಣ್ಣಿ ಕಾಲೇಜು ಸ್ನಾತಕೋತ್ತರ ಮತ್ತು ಸಂಶೋಧನಾ ಅಧ್ಯಯನ ಕೇಂದ್ರ ಮುಖ್ಯಸ್ಥ ಡಾ.ಅನ್ನದಾನೇಶ, ಸಿದ್ಧಮಂಗಳ ಸೇವಾ ಕೇಂದ್ರ ಅಧ್ಯಕ್ಷೆ ಪ್ರೊ.ಜಯಶ್ರೀ ಎಂ.ವಡೆಯರ್, ವೀರಶೈವ ಮಹಾಸಭಾ, ಅಖಿಲಭಾರತ ರಾಷ್ಟ್ರೀಯ ಮಹಿಳಾ ಘಟಕಾಧ್ಯಕ್ಷೆ ಗೀತಾ ಜಯಂತ್ , ಜಗದಗಲ ಮಂಟಪ ಪ್ರಧಾನ ಸಂಪಾದಕಿ ಡಾ. ಶೀಲಾದೇವಿ ಎನ್.ಮಳೀಮಠ, ಸಹ ಸಂಪಾದಕಿ ಜಿ.ಬಿ.ಮಹೇಶ್ವರಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X