Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಟ್ಟುನಿಟ್ಟಿನ ಮಾದರಿ ನೀತಿ-ಸಂಹಿತೆ...

ಕಟ್ಟುನಿಟ್ಟಿನ ಮಾದರಿ ನೀತಿ-ಸಂಹಿತೆ ಜಾರಿ: ಶಿವಮೊಗ್ಗ ಜಿಲ್ಲಾಧಿಕಾರಿ ದಯಾನಂದ

ಜಿಲ್ಲೆಯಲ್ಲಿ ಒಟ್ಟು 16,47,527 ಮತದಾರರು

ವಾರ್ತಾಭಾರತಿವಾರ್ತಾಭಾರತಿ11 March 2019 10:21 PM IST
share
ಕಟ್ಟುನಿಟ್ಟಿನ ಮಾದರಿ ನೀತಿ-ಸಂಹಿತೆ ಜಾರಿ: ಶಿವಮೊಗ್ಗ ಜಿಲ್ಲಾಧಿಕಾರಿ ದಯಾನಂದ

ಶಿವಮೊಗ್ಗ, ಮಾ.11: ಲೋಕಸಭೆ ಚುನಾವಣಾ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಿದ್ದು, ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಎಚ್ಚರಿಕೆ ನೀಡಿದ್ದಾರೆ.

ರವಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನೀತಿ ಸಂಹಿತೆ ಅನ್ವಯ ಹೊಸದಾಗಿ ಯಾವುದೇ ಕಾಮಗಾರಿಗಳ ಉದ್ಘಾಟನೆ ಅಥವಾ ಶಂಕುಸ್ಥಾಪನೆ ಮಾಡುವಂತಿಲ್ಲ. ಯಾವುದೇ ಯೋಜನೆಗಳ ಫಲಾನುಭವಿಗಳ ಆಯ್ಕೆ ಅಥವಾ ಸೌಲಭ್ಯಗಳ ವಿತರಣೆ ಮಾಡುವ ಹಾಗಿಲ್ಲ. ಎಲ್ಲ ರಾಜಕೀಯ ಜಾಹೀರಾತು ಫಲಕಗಳನ್ನು 24 ಗಂಟೆಗಳ ಒಳಗಾಗಿ ತೆರವುಗೊಳಿಸಬೇಕು. ನೀತಿ ಸಂಹಿತೆಯನ್ನು ಉಲ್ಲಂಘಿಸುವ ಸರಕಾರಿ ಅಧಿಕಾರಿ, ನೌಕರರ ವಿರುದ್ಧ ಕೂಡ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಮತದಾರರು: ಜಿಲ್ಲೆಯಲ್ಲಿ ಈ ವರ್ಷದ ಜನವರಿ 1ಕ್ಕೆ ಅನ್ವಯಿಸಿ ಒಟ್ಟು 16,47,527 ಮತದಾರರು ಇದ್ದಾರೆ. ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದ 10 ದಿನಗಳ ಒಳಗಾಗಿ ಹೊಸದಾಗಿ ಮತದಾರರು ತಮ್ಮ ಹೆಸರು ನೋಂದಣಿಗೆ ಅವಕಾಶವಿದೆ. ಜಿಲ್ಲೆಯಲ್ಲಿ 2,593 ಬ್ಯಾಲೆಟ್ ಯುನಿಟ್‌ಗಳು ಹಾಗೂ 2,059 ಕಂಟ್ರೋಲ್ ಯುನಿಟ್ ಹಾಗೂ 2,369 ವಿವಿಪ್ಯಾಟ್ ಲಭ್ಯವಿದೆ ಎಂದು ಹೇಳಿದರು.

ಚುನಾವಣೆಗೆ ಸಿದ್ಧತೆ: ಚುನಾವಣೆಯನ್ನು ಪಾರದರ್ಶಕವಾಗಿ ಹಾಗೂ ಶಾಂತಿಯುತವಾಗಿ ನಡೆಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಚುನಾವಣಾ ಅಕ್ರಮಗಳ ಮೇಲೆ ನಿಗಾ ಇರಿಸಲು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ 3 ಫ್ಲೈಯಿಂಗ್ ಸ್ಕ್ವಾಡ್, ಜಿಲ್ಲೆಯ ಗಡಿ ಭಾಗಗಳಲ್ಲಿ ಒಟ್ಟು 27 ಸ್ಟಾಟಿಕ್ ಸರ್ವೇಲೆನ್ಸ್ ತಂಡ (ಎಸ್‌ಎಸ್‌ಟಿ)ಗಳನ್ನು ರಚಿಸಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ನೆರಳಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸೂಚನೆ ನೀಡಲಾಗಿದೆ. ಚುನಾವಣಾ ಅಕ್ರಮ ಎಸಗುವವರ ವಿರುದ್ಧ ನಿಷ್ಪಕ್ಷಪಾತವಾಗಿ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.

ಸಿ ವಿಜಿಲ್: ಈ ಬಾರಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ, ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ನೇರವಾಗಿ ದೂರನ್ನು ದಾಖಲಿಸಲು ಸಿ ವಿಜಿಲ್ ಎಂಬ ಆ್ಯಪ್ ಸಿದ್ಧಪಡಿಸಲಾಗಿದೆ. ಗೂಗಲ್ ಪ್ಲೇ ಸ್ಟೋರ್ ನಲ್ಲಿ ಇದನ್ನು ಡೌನ್‌ಲೋಡ್ ಮಾಡಿ, ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಛಾಯಾಚಿತ್ರ, ವಿಡಿಯೊ ಅಪ್‌ಲೊಡ್ ಮಾಡಬಹುದಾಗಿದೆ. ಇದರಲ್ಲಿ ದಾಖಲಾಗುವ ದೂರುಗಳನ್ನು 100 ನಿಮಿಷಗಳ ಒಳಗಾಗಿ ಬಗೆಹರಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿ ದರು.

ಇದೇ ರೀತಿ ಚುನಾವಣೆಗೆ ಸಂಬಂಧಿಸಿದ ಯಾವುದೆ ಅಹವಾಲು, ದೂರುಗಳನ್ನು ಸಲ್ಲಿಸಲು 24 ಗಂಟೆಗಳ ಕಾಲವೂ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, 1950 ದೂರ ವಾಣಿ ಸಂಖ್ಯೆಗೆ ಕರೆ ಮಾಡಿ ಸಾರ್ವಜನಿಕರು ಅಹವಾಲು ದಾಖಲಿ ಸಬಹುದಾಗಿದೆ ಎಂದು ಅವರು ತಿಳಿಸಿದರು.

ಪೊಲೀಸ್ ವರಿಷ್ಠಾಧಿಕಾರಿ ಅಶ್ವಿನಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಮೇಗೌಡ ಉಪಸ್ಥಿತರಿದ್ದರು.

ನೀತಿ ಸಂಹಿತೆ ಅನ್ವಯ ಹೊಸದಾಗಿ ಯಾವುದೇ ಕಾಮಗಾರಿಗಳ ಉದ್ಘಾಟನೆ ಅಥವಾ ಶಂಕುಸ್ಥಾಪನೆ ಮಾಡುವಂತಿಲ್ಲ. ಯಾವುದೇ ಯೋಜನೆಗಳ ಫಲಾನುಭವಿಗಳ ಆಯ್ಕೆ ಅಥವಾ ಸೌಲಭ್ಯಗಳ ವಿತರಣೆ ಮಾಡುವ ಹಾಗಿಲ್ಲ. ಎಲ್ಲ ರಾಜಕೀಯ ಜಾಹೀರಾತು ಫಲಕಗಳನ್ನು 24ಗಂಟೆಗಳ ಒಳಗಾಗಿ ತೆರವುಗೊಳಿಸಬೇಕು. ನೀತಿ ಸಂಹಿತೆಯನ್ನು ಉಲ್ಲಂಘಿಸುವ ಸರಕಾರಿ ಅಧಿಕಾರಿ, ನೌಕರರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು.
-ಕೆ.ಎ.ದಯಾನಂದ, ಜಿಲ್ಲಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X